Homeಮುಖಪುಟಬಿಜೆಪಿ ನಾಯಕರ ಅತಿಯಾದ ವಿಶ್ವಾಸದಿಂದ ಬಂಗಾಳದಲ್ಲಿ ಸೋಲು: ಸುವೆಂದು ಅಧಿಕಾರಿ

ಬಿಜೆಪಿ ನಾಯಕರ ಅತಿಯಾದ ವಿಶ್ವಾಸದಿಂದ ಬಂಗಾಳದಲ್ಲಿ ಸೋಲು: ಸುವೆಂದು ಅಧಿಕಾರಿ

- Advertisement -
- Advertisement -

ಪಕ್ಷಕ್ಕೆ ರಾಜ್ಯದಲ್ಲಿ 170 ಕ್ಕೂ ಹೆಚ್ಚು ಸ್ಥಾನಗಳು ಸಿಗಲಿವೆ ಎಂಬ ಕೆಲವು ನಾಯಕರ ಅತಿಯಾದ ಆತ್ಮವಿಶ್ವಾಸದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋತಿದೆ ಎಂದು ಬಂಗಾಳ ವಿಧಾನಸಭೆಯ ಪ್ರತಿಪಕ್ಷದ ನಾಯಕ ಮತ್ತು ಬಿಜೆಪಿ ನಾಯಕ ಸುವೆಂದು ಅಧಿಕಾರಿ ಹೇಳಿದ್ದಾರೆ.

ಪುರ್ಬಾ ಮದಿನಿಪುರ ಜಿಲ್ಲೆಯ ಚಂಡೀಪುರದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಸುವೆಂದು ಅಧಿಕಾರಿ, ತಾವು ಸ್ಪರ್ಧಿಸುತ್ತಿರುವ ಸ್ಥಳದ ಪರಿಸ್ಥಿತಿಯ ಬಗ್ಗೆ ತಿಳುವಳಿಕೆಯ ಕೊರತೆ ಮತ್ತು ಕೆಲವು ನಾಯಕರ ಅತಿಯಾದ ಆತ್ಮವಿಶ್ವಾಸ ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣವಾಯಿತು ಎಂದು ಹೇಳಿದ್ದಾರೆ.

“ಚುನಾವಣೆಯಲ್ಲಿ ಎರಡು ಹಂತದ ಮತದಾನವಾಗುತ್ತಿದ್ದಂತೆಯೇ ನಮ್ಮಲ್ಲಿನ ಹಲವು ನಾಯಕರು ತೃಪ್ತಿ ಹೊಂದಿದವರಂತೆ ನಡೆದುಕೊಂಡರು. ಚುನಾವಣೆ ಗೆಲುವಿನ ಬಗ್ಗೆ ಅತೀಯಾದ ಆತ್ಮ ವಿಶ್ವಾಸ ಹೊಂದಿದ್ದರು.  . ಚುನಾವಣೆಯಲ್ಲಿ ಬಿಜೆಪಿ 170 ರಿಂದ 180 ಸ್ಥಾನಗಳನ್ನು ಗಳಿಸಲಿದೆ ಎಂದು ನಂಬಲು ಪ್ರಾರಂಭಿಸಿದರು, ಆದರೆ ಅವರ್‍ಯಾರು ಗ್ರೌಂಡ್‌ ವರ್ಕ್ ಮಾಡಲಿಲ್ಲ. ಇದು ಚುನಾವಣೆ ಫಲಿತಾಂಶದಲ್ಲಿ ನಮಗೆ ದೊಡ್ಡ ಹೊಡೆತ ನೀಡಿತು” ಎಂದು ಮಾಜಿ ಟಿಎಂಸಿ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ ರಾಜ್ಯಪಾಲರ ಭೇಟಿಗೆ 24 ಬಿಜೆಪಿ ಶಾಸಕರ ಗೈರು: ಟಿಎಂಸಿಗೆ ವಲಸೆ ತಡೆಯಲು ಬಿಜೆಪಿ ಹರಸಾಹಸ

ಗುರಿಗಳನ್ನು ನಿಗದಿಪಡಿಸುವಂತೆ ಗ್ರೌಂಡ್‌ ವರ್ಕ್ ಮಾಡುವುದು ತುಂಬಾ ಮುಖ್ಯ. ಅದು ವಾಸ್ತವಿಕವಾದರೂ ಕಠಿಣ ಪರಿಶ್ರಮದ ಅಗತ್ಯವಿದೆ ಎಂದು ಸುವೆಂದು ಹೇಳಿದ್ದಾರೆ.

ಅಧಿಕಾರಿಯವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್ ವಕ್ತಾರ ಕುನಾಲ್ ಘೋಷ್, “ಸುವೆಂದು ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಾಮಾಜಿಕ ಕಲ್ಯಾಣ ಯೋಜನೆಗಳನ್ನು ಮತ್ತು ಅವರ ಅಭಿವೃದ್ಧಿಯ ಕೆಲಸಗಳನ್ನು ಬೇಕು ಎಂದೇ ಮರೆತಿದ್ದಾರೆ” ಎಂದು ಹೇಳಿದ್ದಾರೆ.

“ಬಂಗಾಳ ಚುನಾವಣೆಯಲ್ಲಿ 200 ಸ್ಥಾನಗಳನ್ನು ದಾಟಲಿದೆ ಎಂದು ಅವರ ಅನೇಕ ನಾಯಕರು ಊಹಿಸಿದ್ದರಿಂದ ಬಿಜೆಪಿ ಮೂರ್ಖರ ಸ್ವರ್ಗದಲ್ಲಿತ್ತು. ಈಗ ಸುವೆಂದು ಇತರ ಮೇಲೆ ಏಕೆ ಗೂಬೆ ಕೂರಿಸುತ್ತಿದ್ದಾರೆ..? ತಮ್ಮ ಪಕ್ಷಕ್ಕೆ ಕನಿಷ್ಠ 180 ಸ್ಥಾನಗಳು ಸಿಗುತ್ತವೆ ಎಂದು ಹೇಳಿಕೊಂಡು ಸುವೇಂದು ಪದೇ ಪದೇ ಹೆಮ್ಮೆ ಪಡಲಿಲ್ಲವೇ? ಅವರಿಗೆ ಬಂಗಾಳದ ನಾಡಿಮಿಡಿತ ತಿಳಿದಿಲ್ಲ, ಆದರೆ, ತೃಣಮೂಲ ಕಾಂಗ್ರೆಸ್‌ಗೆ ತಿಳಿದಿದೆ” ಎಂದು ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್‌ ಘೋಷ್ ಹೇಳಿದ್ದಾರೆ.

ನಂದಿಗ್ರಾಮದ ಶಾಸಕ ಬಿಜೆಪಿಯ ಸುವೇಂದು ಅಧಿಕಾರಿ, ಮಮತಾ ಬ್ಯಾನರ್ಜಿಯವರ ನಂದಿಗ್ರಾಮ ಫಲಿತಾಂಶದ ವಿರುದ್ಧದ ಅರ್ಜಿ ವಿಚಾರಣೆಯನ್ನು ಬೇರೆ ರಾಜ್ಯಗಳಿಗೆ ವರ್ಗಾಯಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಬಂಗಾಳದಲ್ಲಿ ಟಿಎಂಸಿ ಕಡೆಗೆ ಬಿಜೆಪಿ ಕಾರ್ಯಕರ್ತರ ಮಹಾ ವಲಸೆ: ತಬ್ಬಿಬ್ಬಾದ ಬಿಜೆಪಿ ಹಿರಿಯ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...