Homeಮುಖಪುಟಚುನಾವಣೆ ಗೆಲ್ಲಲು ಬಿಜೆಪಿಯವರು 'ರಾಮ ಮಂದಿರದ ಮೇಲೆ ದಾಳಿ' ನಡೆಸಬಹುದು: ಸತ್ಯಪಾಲ್ ಮಲಿಕ್ ಸ್ಪೋಟಕ ಹೇಳಿಕೆ

ಚುನಾವಣೆ ಗೆಲ್ಲಲು ಬಿಜೆಪಿಯವರು ‘ರಾಮ ಮಂದಿರದ ಮೇಲೆ ದಾಳಿ’ ನಡೆಸಬಹುದು: ಸತ್ಯಪಾಲ್ ಮಲಿಕ್ ಸ್ಪೋಟಕ ಹೇಳಿಕೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮುಂಬರು ಲೋಕಸಭಾ ಚುನಾವಣೆ ಗೆಲ್ಲಲು ದೇಶದಲ್ಲಿ ಗಂಭಿರವಾದ ಅನಾಹುತ ಮಾಡಬಹುದು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜಕೀಯ ಲಾಭ ಪಡೆಯಲು ಬಿಜೆಪಿ ನಾಯಕರು ಯಾವುದೇ ಹಂತಕ್ಕೂ ಹೋಗಬಹುದು ಎಂದು ಒತ್ತಿ ಹೇಳಿದ್ದಾರೆ.

ನ್ಯೂಸ್‌ಕ್ಲಿಕ್‌ಗೆ ನೀಡಿದ ಸಂದರ್ಶನದಲ್ಲಿ ಮಲಿಕ್ ಅವರು, ”ಪ್ರಧಾನಿ ಮೋದಿ ಅಪಾಯಕಾರಿ ವ್ಯಕ್ತಿಯಾಗಿದ್ದು, ರಾಜಕೀಯ ಲಾಭ ಪಡೆಯಲು ರಾಮ ಮಂದಿರದ ಮೇಲೆ ದಾಳಿ ನಡೆಸಲೂಬಹುದು ಅಥವಾ ಬಿಜೆಪಿಯ ಯಾವುದೇ ಪ್ರಭಾವಿ ನಾಯಕನನ್ನು ಕೊಲ್ಲಲೂಬಹುದು. ಅವರ ಅಂತಹ ಕೆಟ್ಟ ತಂತ್ರಗಳನ್ನು ಮಾಡುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರ ನಿರ್ದಯ ಚುನಾವಣಾ ತಂತ್ರಗಳನ್ನು ಪ್ರತಿಪಾದಿಸಿದ ಮಲಿಕ್, ”2019ರ ಪುಲ್ವಾಮಾ ದಾಳಿಯನ್ನು ಉಲ್ಲೇಖಿಸಿ, ಇಂತಹ ಘಟನೆಗಳನ್ನು ಉಂಟುಮಾಡುವವರು ರಾಜಕೀಯ ಉದ್ದೇಶಗಳನ್ನು ಸಾಧಿಸಲು ಇನ್ನೂ ಏನು ಬೇಕಾದರೂ ಮಾಡಬಹುದು” ಎಂದರು.

”ಪ್ರಧಾನಿ ಮೋದಿಗೆ ಹೇಗೆ ಆಡಳಿತ ನಡೆಸಬೇಕು ಮತ್ತು ಹೇಗೆ ನಿರ್ದಯವಾಗಿ ಆಡಳಿತ ನಡೆಸಬೇಕು ಎಂದು ತಿಳಿದಿದೆ. ಆದರೆ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಯಶಸ್ವಿಯಾಗುವುದಿಲ್ಲ ಹಾಗಾಗಿ ಅವರು ಈಗಲೇ ರಾಜೀನಾಮೆ ನೀಡುವುದು ಒಳ್ಳೆಯದು” ಎಂದು ಅವರು ಹೇಳಿದರು.

ಈ ಹಿಂದೆ ದಿ ವೈರ್‌ಗೆ ನೀಡಿದ ಸಂದರ್ಶನದಲ್ಲಿ ಮಲಿಕ್ ಅವರು, ಪುಲ್ವಾಮಾ ದಾಳಿಯ ಬಗ್ಗೆ ಪ್ರಧಾನಿ ಮೋದಿ ಅವರೇ ಮೌನವಾಗಿರಲು ಹೇಳಿದ್ದರು ಎಂದಿದ್ದರು. ಅಲ್ಲಿ ಅವರು ಸಿಆರ್‌ಪಿಎಫ್ ಬೆಂಗಾವಲು ಪಡೆಯನ್ನು ಸಾಗಿಸಲು ವಿಮಾನಗಳನ್ನು ಕೇಳಿದೆ ಆದರೆ ರಕ್ಷಣಾ ಸಚಿವಾಲಯ ನಿರಾಕರಿಸಿತ್ತು. ಅದರಿಂದಲೇ ಆ ಪುಲ್ವಾಮಾ ದುರಂತ ನಡೆಯಿತು ಎಂದು ಹೇಳಿದ್ದರು.

ಯೋಧರ ಪ್ರಾಣಹಾನಿಯಲ್ಲಿ ನಮ್ಮದೇ ತಪ್ಪು ಮತ್ತು ವಿಮಾನಗಳಿಗೆ ಅನುಮತಿ ನೀಡುವ ಮೂಲಕ ಆ ದಾಳಿಯನ್ನು ತಡೆಯಬಹುದಿತ್ತು ಎಂದು ಮೋದಿ ಅವರಿಗೆ ಹೇಳಿದ್ದೆ. ಆಗ ಪ್ರಧಾನಿ ಮೋದಿ ಅವರು, ದಾಳಿಗೆ ಕಾರಣವಾದ ಲೋಪಗಳ ಬಗ್ಗೆ ಮೌನವಾಗಿಸಿದರು. 2019ರಲ್ಲಿ ದಾಳಿ ನಡೆದಾಗ ಮಲಿಕ್ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದರು.

ಈ ಮಧ್ಯೆ ಮಲಿಕ್ ಅವರು ಮಣಿಪುರ ಹಿಂಸಾಚಾರವನ್ನು ಪ್ರಸ್ತಾಪಿಸಿದರು, ಸರ್ಕಾರವು ಅವರಿಗೆ ಶಸ್ತ್ರಾಸ್ತ್ರಗಳನ್ನು ನೀಡುವ ಮೂಲಕ ರಾಜ್ಯದಲ್ಲಿ ಅವ್ಯವಸ್ಥೆಯನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದರು.

ಈ ಹೇಳಿಕೆಯ ಮೇಲೆ ಇಷ್ಟೊಂದು ವಿಶ್ವಾಸ ಹೊಂದಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದಾಗ, ಅದಕ್ಕೆ ಉತ್ತರವಾಗಿ ಮಲಿಕ್, ಹಿಂಸಾಚಾರದಲ್ಲಿ ಬಳಸುತ್ತಿರುವ ಅಸ್ತ್ರಗಳು ಜನಸಾಮಾನ್ಯರಿಗೆ ಸುಲಭವಾಗಿ ಕೈಗೆಟುಕುವುದಿಲ್ಲ ಎಂದರು.

ಇನ್ಸಾಸ್ ರೈಫಲ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿಲ್ಲ ಆದರೆ ಸರ್ಕಾರದ ಪದಾತಿ ದಳದಲ್ಲಿ ಲಭ್ಯವಿವೆ ಎಂದು ಅವರು ಉಲ್ಲೇಖಿಸಿದ್ದಾರೆ. ಆದಾಗ್ಯೂ, ಮಣಿಪುರದಲ್ಲಿ ಜನಸಮೂಹವು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದೆ ಎಂಬ ಹೇಳಿಕೆಗಳನ್ನು ಅವರು ತಳ್ಳಿಹಾಕಿದರು.

ಇದನ್ನೂ ಓದಿ: ಪುಲ್ವಾಮಾ ದಾಳಿ: ಸೈನಿಕರ ಶವಗಳ ಮೇಲೆ 2019ರ ಚುನಾವಣೆ ನಡೆಯಿತು; ಮೋದಿ ವಿರುದ್ಧ ಸತ್ಯಪಾಲ್ ಮಲಿಕ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...