Homeಮುಖಪುಟಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಸೇರಿ 6 ಜನರ ಬಂಧನ

ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ಬಿಜೆಪಿ ಮುಖಂಡ ಸೇರಿ 6 ಜನರ ಬಂಧನ

- Advertisement -
- Advertisement -

ದೆಹಲಿಯ ಜಂತರ್ ಮಂತರ್‌ನಲ್ಲಿ ಭಾನುವಾರ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಅಶ್ವಿನಿ ಉಪಾಧ್ಯಾಯ ಮತ್ತು ಇತರ ಐವರನ್ನು ಬಂಧಿಸಲಾಗಿದೆ.

ಭಾನುವಾರ ನಡೆದ ಪ್ರತಿಭಟನೆಯ ಸಂಘಟಕರಲ್ಲಿ ಒಬ್ಬರೆಂದು ಹೇಳಲಾಗಿರುವ ಅಶ್ವಿನಿ ಉಪಾಧ್ಯಾಯರನ್ನು ಸೋಮವಾರ ತಡರಾತ್ರಿಯವರೆಗೆ ಇತರ ಆರೋಪಿಗಳೊಂದಿಗೆ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮಾಹಿತಿ ದೊರೆತಿದೆ.

ದೆಹಲಿಯ ಹೃದಯಭಾಗ ಜಂತರ್‌ ಮಂತರ್‌ ಬಳಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಗುಂಪೊಂದು ಮುಸ್ಲಿಂ ಸಮುದಾಯದವರಿಗೆ ಬೆದರಿಕೆಯೊಡ್ಡುವ, ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ಈ  ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಇದನ್ನೂ ಓದಿ: ಹಿಂದೂ ಯುವತಿ ಮುಸ್ಲಿಂ ಉಗ್ರನನ್ನು ಕೊಂದಳೇ? ಇಲ್ಲ, ವೆಬ್‍ ಸೀರಿಸ್ ಪಾತ್ರವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

“ಹಿಂದೂಸ್ತಾನ್ ಮೇ ರೆಹನಾ ಹೋಗಾ, ಜೈ ಶ್ರೀ ರಾಮ್ ಕೆಹನಾ ಹೋಗಾ (ಭಾರತದಲ್ಲಿ ಉಳಿಯಬೇಕಿದ್ದರೇ, ಜೈ ಶ್ರೀ ರಾಮ್ ಎಂದು ಹೇಳಬೇಕು)” ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಸಂಸತ್ತಿನಿಂದ ಕೇವಲ ಒಂದು ಕಿಮೀ ದೂರದಲ್ಲಿರುವ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಜನರು ಇಂತಹ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದರು.

ಸುಪ್ರೀಂಕೋರ್ಟ್ ವಕೀಲ ಮತ್ತು ದೆಹಲಿ ಬಿಜೆಪಿ ಮಾಜಿ ವಕ್ತಾರ ಅಶ್ವಿನಿ ಉಪಾಧ್ಯಾಯ ಆಯೋಜಿಸಿದ್ದರು ಎಂದು ಹೇಳಲಾದ ಪ್ರತಿಭಟನೆಯಲ್ಲಿ ಘೋಷಣೆಗಳನ್ನು ಕೂಗಲಾಗಿತ್ತು. “ವೈರಲ್ ವಿಡಿಯೊಗಳ ಬಗ್ಗೆ ತಿಳಿದಿಲ್ಲ. ಕೇವಲ ಐದು ಅಥವಾ ಆರು ಜನರು ಘೋಷಣೆಗಳನ್ನು ಕೂಗುತ್ತಿದ್ದಾರೆ. ಅವರು ಅಂತಹ ಘೋಷಣೆಗಳನ್ನು ಕೂಗಬಾರದಿತ್ತು. ಈ ಘೋಷಣೆಗಳು ಕೂಗುತ್ತಿದ್ದಾ ನಾನು ಕೂಡ ಇರಲಿಲ್ಲ, ಘೋಷಣೆ ಕೂಗಿದವರನ್ನು ನಾನು ಆಹ್ವಾನಿಸಿರಲಿಲ್ಲ. ನಾನು ಪ್ರತಿಭಟನೆಯಿಂದ ಹೋದ ನಂತರ ಇದು ನಡೆದಿರಬೇಕು. ವಿಡಿಯೊಗಳಲ್ಲಿ ಕಾಣುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಅಶ್ವಿನಿ ಉಪಾಧ್ಯಾಯ ಹೇಳಿದ್ದರು.

ಇದನ್ನೂ ಓದಿ: ವಿವಾದಿತ ಯತಿ ನರಸಿಂಗಾನಂದ್ ವಿರುದ್ದ FIR ದಾಖಲಿಸಲು ಮಹಿಳಾ ಆಯೋಗ ಒತ್ತಾಯ

ಮತ್ತೊಂದು ಹೇಳಿಕೆಯಲ್ಲಿ, ಈ ಪ್ರತಿಭಟನೆಯನ್ನು ಜಂತರ್ ಮಂತರ್‌ನಲ್ಲಿ ಸೇವ್ ಇಂಡಿಯಾ ಫೌಂಡೇಶನ್‌ನವರು ಆಯೋಜಿಸಿದ್ದರು ಎಂದು ಹೇಳಿದ್ದಾರೆ. “ಸೇವ್ ಇಂಡಿಯಾ ಫೌಂಡೇಶನ್ ಟ್ರಸ್ಟ್‌ನೊಂದಿಗೆ ನನಗೆ ಯಾವುದೇ ಸಂಬಂಧವಿಲ್ಲ. ನಾನು  ಆರ್‌ವಿಎಸ್ ಮಣಿ, ಫಿರೋಜ್ ಬಕ್ತ್ ಅಹ್ಮದ್, ಗಜೇಂದ್ರ ಚೌಹಾಣ್ ಅಲ್ಲಿ ಅತಿಥಿಗಳಾಗಿ ಹೋಗಿದ್ದೇವು” ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊಗಳು ವೈರಲ್ ಆದ ಮೇಲೆ, ಅಶ್ವಿನಿ ಉಪಾಧ್ಯಾಯ ಮತ್ತು ವಿಡಿಯೊಗಳಲ್ಲಿ ಗೋಚರಿಸುವವರನ್ನು ಒಳಗೊಂಡಂತೆ ಕಾರ್ಯಕ್ರಮದ ಹಿಂದೆ ಇರುವವರನ್ನು ಪೋಲಿಸರು ಬಂಧಿಸದಿರುವ ಬಗ್ಗೆ ಪೊಲೀಸರ ಮೇಲೆ ಒತ್ತಡ ಹೇರಲಾಗಿತ್ತು. ಅಂತಿಮವಾಗಿ ಸೋಮವಾರ ತಡರಾತ್ರಿ ಕಾರ್ಯನಿರ್ವಹಿಸಿದ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಹಳೆಯ ವಸಾಹತುಶಾಹಿ ಯುಗದ ಕಾನೂನುಗಳ ವಿರುದ್ಧವಾಗಿ ಆಯೋಜಿಸಲಾಗಿದ್ದ, “ವಸಾಹತು ಕಾನೂನುಗಳು ಮತ್ತು ಏಕರೂಪದ ಕಾನೂನುಗಳನ್ನು ಮಾಡಿ” ಎಂಬ ಮೆರವಣಿಗೆಯಲ್ಲಿ ಈ ಘೋಷಣೆಗಳನ್ನು ಕೂಗಲಾಗಿದೆ.

ಬಂಧಿತರಲ್ಲಿ ಅಶ್ವಿನಿ ಉಪಾಧ್ಯಾಯ, ಸೇವ್ ಇಂಡಿಯಾದ ನಿರ್ದೇಶಕ ಪ್ರೀತ್ ಸಿಂಗ್, ವಿನೋದ್ ಶರ್ಮಾ, ದೀಪಕ್ ಸಿಂಗ್, ವಿನೀತ್ ಕ್ರಾಂತಿ ಮತ್ತು ದೀಪಕ್ ಎಂದು ಗುರುತಿಸಲಾಗಿದೆ.


ಇದನ್ನೂ ಓದಿ: ಜಂತರ್‌ ಮಂತರ್‌ನಲ್ಲಿ ಮುಸ್ಲಿಂ ವಿರೋಧಿ ಘೋಷಣೆ: ವೈರಲ್ ವಿಡಿಯೊ ಆಧರಿಸಿ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...