Homeಕರ್ನಾಟಕSIR ಬಳಿಕವೂ ಎರಡು ರಾಜ್ಯಗಳ ಮತದಾರರ ಪಟ್ಟಿಯಲ್ಲಿ ಬಿಜೆಪಿ ಸದಸ್ಯನ ಹೆಸರು!

SIR ಬಳಿಕವೂ ಎರಡು ರಾಜ್ಯಗಳ ಮತದಾರರ ಪಟ್ಟಿಯಲ್ಲಿ ಬಿಜೆಪಿ ಸದಸ್ಯನ ಹೆಸರು!

- Advertisement -
- Advertisement -

ಕರ್ನಾಟಕದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದೆ. ಈ ನಡುವೆ ಬಿಜೆಪಿ ಸದಸ್ಯ ಉದಯ್ ಕುಮಾರ್ ಹಾಗೂ ಅವರ ಪತ್ನಿ ಬಿಂದು ಕುಮಾರಿ ಅವರ ಹೆಸರುಗಳು ಕರ್ನಾಟಕ ಮತ್ತು ಬಿಹಾರ ಎರಡೂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ಮುಂದುವರಿದಿವೆ ಎಂಬ ಆರೋಪ ಕೇಳಿಬಂದಿದೆ.

ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಹಾಗೂ ಖ್ಯಾತ ಫ್ಯಾಕ್ಟ್ ಚೆಕ್ಕರ್ ಮುಹಮ್ಮದ್ ಝುಬೈರ್ ಅವರು ಅ.27ರಂದು ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ದೀರ್ಘಕಾಲದಿಂದ ವಾಸವಿದ್ದು, ಇಲ್ಲಿಯೇ ಮತ ಚಲಾಯಿಸುತ್ತಿರುವ ಉದಯ್ ಕುಮಾರ್ ಅವರು ಬಿಹಾರದ ನವಾಡಾ ಜಿಲ್ಲೆಯ ಸ್ವಗ್ರಾಮದಲ್ಲಿಯೂ ಮತದಾರರಾಗಿ ನೋಂದಣಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಉದಯ್ ಕುಮಾರ್ ಅವರ ಹೆಸರು EPIC ಸಂಖ್ಯೆ SOH4526935ರೊಂದಿಗೆ ದಾಖಲಾಗಿದ್ದು, ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಮತದಾರರೆಂದು ನಮೂದಿಸಲಾಗಿದೆ. ಬಿಬಿಎಂಪಿ ಉತ್ತರ ಜಿಲ್ಲೆಯ ವ್ಯಾಪ್ತಿಯ ಆಲ್ವಿನ್ ಪಬ್ಲಿಕ್ ಸ್ಕೂಲ್ ಅವರ ಮತಗಟ್ಟೆಯಾಗಿದೆ ಎಂದು ಝುಬೈರ್ ಹಂಚಿಕೊಂಡ ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ.

ಇದೇ ವೇಳೆ, ಬಿಹಾರದ ನವಾಡಾ ಜಿಲ್ಲೆಯ ಹಿಸ್ಸುವಾ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲೂ ಉದಯ್ ಕುಮಾರ್ ಅವರ ಹೆಸರಿದ್ದು, EPIC ಸಂಖ್ಯೆ UAO0928291 ಎಂದು ದಾಖಲಾಗಿದೆ. ಬೆರೌಟಾ ಪಶ್ಚಿಮ ಭಾಗದ ಉತ್ಕ್ರಮಿತ ಮಧ್ಯ ವಿದ್ಯಾಲಯ ಅವರ ಮತಗಟ್ಟೆಯಾಗಿ ನಮೂದಿಸಲಾಗಿದೆ.

ಉದಯ್ ಕುಮಾರ್ ಅವರ ಪತ್ನಿ ಬಿಂದು ಕುಮಾರಿ ಅವರ ಹೆಸರೂ ಇದೇ ರೀತಿಯಲ್ಲಿ ಎರಡು ರಾಜ್ಯಗಳ ಮತದಾರರ ಪಟ್ಟಿಯಲ್ಲಿ ಕಾಣಿಸುತ್ತಿದೆ ಎಂದು ಝುಬೈರ್ ತಿಳಿಸಿದ್ದಾರೆ. ಎರಡೂ ದಾಖಲೆಗಳಲ್ಲಿರುವ ಭಾವಚಿತ್ರಗಳು ಒಂದೇ ವ್ಯಕ್ತಿಗೆ ಸೇರಿದವು ಎಂದು ಆರೋಪಿಸಲಾಗಿದ್ದು, ತಂದೆಯ ಹೆಸರಿನಲ್ಲಿ ವ್ಯತ್ಯಾಸ ಹಾಗೂ ವಯಸ್ಸಿನಲ್ಲಿ ಕೆಲವು ವರ್ಷಗಳ ಅಂತರವಿರುವುದನ್ನೂ ಅವರು ಉಲ್ಲೇಖಿಸಿದ್ದಾರೆ.

2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರಿನ ಆಲ್ವಿನ್ ಪಬ್ಲಿಕ್ ಸ್ಕೂಲ್ ಬಳಿ ಉದಯ್ ಕುಮಾರ್ ಮತ ಚಲಾಯಿಸಿರುವ ಚಿತ್ರಗಳು ಹಾಗೂ ಬಳಿಕ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನವಾಡಾದ ಮತಗಟ್ಟೆಯಲ್ಲಿ ಮತ ಚಲಾಯಿಸಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಅವರದೇ ಪೋಸ್ಟ್ ಗಳಲ್ಲಿ ಕಂಡುಬಂದಿವೆ ಎಂದು ಹೇಳಲಾಗಿದೆ.

ಈ ಕುರಿತು ಝುಬೈರ್ ಅವರು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ, ಬೆಂಗಳೂರು ನಗರ ಜಿಲ್ಲಾಧಿಕಾರಿ, ನವಾಡಾ ಜಿಲ್ಲಾಧಿಕಾರಿ ಹಾಗೂ ಚುನಾವಣಾ ಆಯೋಗವನ್ನು ಟ್ಯಾಗ್ ಮಾಡಿ, ಒಬ್ಬ ವ್ಯಕ್ತಿ ಎರಡು EPIC ಕಾರ್ಡ್‌ಗಳನ್ನು ಹೊಂದಲು ಹಾಗೂ ಎರಡು ರಾಜ್ಯಗಳಲ್ಲಿ ಮತ ಚಲಾಯಿಸಲು ಅವಕಾಶವಿದೆಯೇ ಎಂದು ಪ್ರಶ್ನಿಸಿದ್ದಾರೆ.

ಉದಯ್ ಕುಮಾರ್ ಅವರು ಕರ್ನಾಟಕ ಮತ್ತು ಬಿಹಾರ ಎರಡೂ ಕಡೆ ಮತ ಚಲಾಯಿಸಿದ್ದ ಬಗ್ಗೆ 2025ರ ನವೆಂಬರ್ 12ರಂದು ಝುಬೈರ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದರು.

ಬಿಹಾರದ ವಿಧಾನಸಭೆ ಚುನಾವಣೆಯ ಮತದಾನ 2025ರ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆದಿತ್ತು. ನವೆಂಬರ್ 14ರಂದು ಫಲಿತಾಂಶ ಪ್ರಕಟಗೊಂಡಿತ್ತು. ಈ ಚುನಾವಣೆಯಲ್ಲಿ ಉದಯ್ ಕುಮಾರ್ ಬಿಹಾರದಲ್ಲಿ ಮತ ಚಲಾಯಿಸಿದ್ದರು. ಅದಕ್ಕೂ ಮುನ್ನ 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಮತ ಚಲಾಯಿಸಿದ್ದರು ಎಂದು ಝುಬೈರ್ ಹೇಳಿದ್ದರು.

ಉದಯ್ ಕುಮಾರ್ ಬಿಹಾರದಲ್ಲಿ ಮತ ಚಲಾಯಿಸಿದ್ದ ವೇಳೆ ಅಲ್ಲಿ ಎಸ್‌ಐಆರ್ ನಡೆದಿತ್ತು. ಎಸ್‌ಐಆರ್ ಬಳಿಕ ಪ್ರಕಟಗೊಂಡ ಮತದಾರರ ಪಟ್ಟಿ ಅನುಸಾರ ಚುನಾವಣೆ ನಡೆದಿತ್ತು. ಈಗ ಕರ್ನಾಟಕದಲ್ಲೂ ಎಸ್‌ಐಆರ್ ನಡೆದಿದೆ. ಅಂದರೆ, ಎರಡೂ ರಾಜ್ಯಗಳಲ್ಲಿ ಎಸ್‌ಐಆರ್ ಮುಗಿದಿದೆ. ಚುನಾವಣಾ ಆಯೋಗದ ಪ್ರಕಾರ ಮತದಾರರ ಪಟ್ಟಿ ಶುದ್ದವಾಗಿದೆ. ಹೀಗಿರುವಾಗ, ಉದಯ್ ಕುಮಾರ್ ಹೆಸರು ಎರಡು ಕಡೆ ಕಂಡು ಬಂದಿರುವುದು ಹೇಗೆ?

ಹಾಗಾದರೆ, ಎಸ್‌ಐಆರ್ ಸರಿಯಾಗಿ ನಡೆದಿಲ್ಲವೇ? ಇಲ್ಲ, ಉದ್ದೇಶಪೂರ್ವಕವಾಗಿ ಎರಡೂ ಕಡೆ ಬಿಜೆಪಿ ಮತವನ್ನು ಉಳಿಸಲಾಗಿದೆಯೇ? ಅಥವಾ ಉದಯ್ ಕುಮಾರ್‌ ಎಂಬ ಇಬ್ಬರು ಮತದಾರರ ಬೇರೆ ಬೇರೆ ವ್ಯಕ್ತಿಗಳೇ? ಇವೆಲ್ಲದಕ್ಕೂ ಚುನಾವಣಾ ಆಯೋಗವೇ ಸ್ಪಷ್ಟ ಉತ್ತರ ನೀಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಔಷಧ ತಯಾರಕರ ಪರವಾಗಿ ಇಡೀ ವ್ಯವಸ್ಥೆ ಕೆಲಸ ಮಾಡುತ್ತಿರುವುದೇಕೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮತ್ತು ಚಿಲ್ಲರೆ ವ್ಯಾಪಾರಿಗಳು ಅವುಗಳನ್ನು ಖರೀದಿಸುವ ಬೆಲೆಯ ನಡುವಿನ ಭಾರಿ ವ್ಯತ್ಯಾಸದ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಔಷಧ ತಯಾರಕರಿಗೆ...

ಚುನಾವಣಾ ಆಯೋಗದ ಅಫಿಡವಿಟ್ ಕುರಿತ ‘ಲೈವ್ ಲಾ’ ರೀಲ್ ತೆಗೆದುಹಾಕಿದ ಇನ್‌ಸ್ಟಾಗ್ರಾಮ್

ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ (ಅ.26) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್ ಕುರಿತು ವಿವರಿಸುವ ತನ್ನ ರೀಲ್ ಅನ್ನು ಇನ್‌ಸ್ಟಾಗ್ರಾಂ ತೆಗೆದುಹಾಕಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಲೈವ್ ಲಾ (Livelaw.in)...

‘Declaration not a part of Form-6’ : ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ ಚುನಾವಣಾ ಆಯೋಗ?

ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಸೋಮವಾರ (ಅ.26) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೊಸ ಮತದಾರರನ್ನು ಸೇರಿಸುವ 'ಫಾರಂ-6ರ' ಜೊತೆ ಸಲ್ಲಿಸುವಂತೆ ಸೂಚಿಸಲಾಗಿದ್ದ 'ಘೋಷಣಾ ಪತ್ರ' ಫಾರಂ-6ರ ಭಾಗವಾಗಿರಲಿಲ್ಲ (Declaration not a part of...

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ...

ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು...

ತಮಿಳುನಾಡು: ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ; ನಾಲ್ವರು ಪುನಃ ಬಂಧನ

ತಮಿಳುನಾಡಿನ ಆಂಡಿಪಟ್ಟಿ ಸಮೀಪದ ತೆಕ್ಕಂಪಟ್ಟಿ ಉಪಜೈಲಿನಲ್ಲಿ ಜೈಲು ಸಿಬ್ಬಂದಿಯನ್ನು ಥಳಿಸಿ 17 ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಂಗಳವಾರ (ಅ.27) ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಜೈಲಿನಿಂದ ಪರಾರಿಯಾದವರ ಪೈಕಿ...

ಕರ್ನಾಟಕ ಎಸ್ಐಆರ್: ಅಂತಿಮ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರುಗಳು ಹೊರಕ್ಕೆ; ಮತದಾರರ ಸಂಖ್ಯೆ 4.55 ಕೋಟಿಗೆ ಕುಸಿತ: ವರದಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳು ಹೊರಗುಳಿದಿವೆ. ಮಂಗಳವಾರ ಪ್ರಕಟವಾಗಲಿರುವ ಅಂತಿಮ ಪಟ್ಟಿಯಲ್ಲಿ ರಾಜ್ಯದ...

‘ನ್ಯೂಸ್‌ರೂಮ್‌ಗಳೇ ಮುಚ್ಚಿಹೋಗಲಿವೆ’ : ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿಎನ್‌ಪಿಎ; ಕೇಂದ್ರ ಸರ್ಕಾರಕ್ಕೆ ನೋಟಿಸ್

ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ, 2023ರ (DPDP Act) ನಿಬಂಧನೆಗಳನ್ನು ಪ್ರಶ್ನಿಸಿ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA) ಸಲ್ಲಿಸಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.27) ನೋಟಿಸ್...

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು : ಪ್ರಶಾಂತ್ ಭೂಷಣ್

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಕೈಗೊಂಡ...

SIR ವಿವಾದ: ಎಲ್ಲಾ ಆದೇಶಗಳು ಒಮ್ಮತದಿಂದಲೇ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಅಫಿಡವಿಟ್!

ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR)ಗೆ ಸಂಬಂಧಿಸಿದ ಎಲ್ಲಾ ಆದೇಶಗಳು ಸಂಪೂರ್ಣ ಒಮ್ಮತದಿಂದಲೇ ಹೊರಬಂದಿವೆ ಎಂದು ಭಾರತೀಯ...