Homeಮುಖಪುಟನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

ನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

ಸಂಜೀವ್‌ ಬಲ್ಯಾನ್‌ 2013 ರಲ್ಲಿ ನಡೆದ ಮುಜಫರ್‌ನಗರ ಗಲಭೆಯಲ್ಲಿ ಪ್ರಮುಖ ಆರೋಪಿಯಾಗಿದ್ದರು. ಈ ಗಲಭೆಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು.

- Advertisement -
- Advertisement -

ಬೆಂಕಿ ಉಗುಳುವ ಮತ್ತು ವಿಭಜಿಸುವ ಹೇಳಿಕೆಗಳಿಗೆ ಹೆಸರುವಾಸಿಯಾದ ಕೇಂದ್ರ ಸಚಿವ ಸಂಜೀವ್ ಬಲ್ಯಾನ್, ಜೆಎನ್‌ಯು ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳಿಗೆ “ಇದೇ ಸರಿಯಾದ ಚಿಕಿತ್ಸೆ” ಎಂದು ಘೋಷಿಸಿ ಬೆದರಿಕೆ ಹಾಕಿದ್ದಾರೆ.

ಸಿಎಎ ಪ್ರತಿಭಟನೆ ಮತ್ತು ಜೆಎನ್‌ಯು ಹಿಂಸಾಚಾರದ ನಂತರ ದೇಶಾದ್ಯಂತ ಪ್ರಸಂಶೆಗೆ ಒಳಗಾಗಿರುವ ಜೆಎನ್‌ಯು ಮತ್ತು ಜಾಮಿಯ ವಿದ್ಯಾರ್ಥಿಗಳಿಗೆ ಬುದ್ದಿ ಕಲಿಸಬೇಕೆಂದರೆ “ಪಶ್ಚಿಮ ಉತ್ತರ ಪ್ರದೇಶದ ಜನರಿಗೆ ವಿಶ್ವವಿದ್ಯಾಲಯಗಳಲ್ಲಿ ಶೇ 10 ರಷ್ಟು ಸ್ಥಾನಗಳನ್ನು ಮೀಸಲಿಡಬೇಕು” ಆಗ ಸರಿ ಹೋಗುತ್ತದೆ ಎಂದು ಸಂಜೀವ್‌ ಬಲ್ಯಾನ್‌ ಮೀರತ್‌ನಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಘೋಷಿಸಿದ್ದಾರೆ.

“ನಾನು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರವರಲ್ಲಿ ವಿನಂತಿಸುತ್ತೇನೆ . ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗುವ ಜೆಎನ್‌ಯು ಮತ್ತು ಜಾಮಿಯಾದ ವಿದ್ಯಾರ್ಥಿಗಳಿಗೆ ಒಂದೇ ಒಂದು ಚಿಕಿತ್ಸೆ ಇದೆ. ಪಶ್ಚಿಮ ಉತ್ತರ ಪ್ರದೇಶದ ಜನರಿಗೆ ವಿಶ್ವವಿದ್ಯಾಲಯಗಳಲ್ಲಿ ಶೇ 10 ರಷ್ಟು ಕೋಟಾ ಮೀಸಲಿಡಿ. ಆಗ ಎಲ್ಲರೂ ಗುಣಮುಖರಾಗುತ್ತಾರೆ ಮತ್ತೇನೂ ಇಲ್ಲ” ಎಂದು ಅವರು ಬೆದರಿಕೆ ಹಾಕಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶವು ಭಾರತದಲ್ಲಿಯೇ ಅತಿ ಹೆಚ್ಚು ಅಪರಾಧಗಳು ದಾಖಲಾಗುವ, ಅತಿ ಹೆಚ್ಚು ಗೂಂಡಾಗಳಿರುವ ಪ್ರದೇಶ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಅಲ್ಲಿ ಅಪರಾಧಗಳ ಪ್ರಮಾಣ ಹೆಚ್ಚಾಗಿರುವುದರಿಂದ ಅಲ್ಲಿನ ಜನ ಈ ವಿಶ್ವವಿದ್ಯಾಲಯಗಳಿಗೆ ಬಂದರೆ ಹೊಡೆದು ಬಡಿದು ನಿಯಂತ್ರಣಕ್ಕೆ ತರುತ್ತಾರೆ ಎಂದು ಹೇಳುವ ಮೂಲಕ ಸಚಿವರು ಸ್ವತಃ ಹಿಂಸೆಗೆ ಬಹಿರಂಗವಾಗಿ ಕರೆ ನೀಡಿದ್ದಾರೆ.

ಬಾಲ್ಯನ್ ಅವರು ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಪಶುಸಂಗೋಪನೆ, ಮೀನುಗಾರಿಕೆ ಮತ್ತು ಹೈನುಗಾರಿಕೆ ರಾಜ್ಯ ಸಚಿವರಾಗಿದ್ದಾರೆ. ಹಾಗೆಯೇ ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಅವಧಿಯಲ್ಲಿ ಸಹ ಕಿರಿಯ ಸಚಿವರಾಗಿದ್ದರು.

ಈ ಬಿಜೆಪಿ ಸಚಿವರು ತಮ್ಮ ಅತಿರೇಕದ ಹೇಳಿಕೆಗಳಿಂದ ಆಗಾಗ್ಗೆ ಜನರಿಂದ ಭಾರೀ ಟೀಕೆಗೊಳಗಾಗಿದ್ದಾರೆ. ಕಳೆದ ತಿಂಗಳು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ “ಮದರಾಸಾದ ಮಕ್ಕಳು” ಹಿಂಸಾಚಾರದಲ್ಲಿ ಪಾತ್ರವಹಿಸಿದ್ದಾರೆ ಎಂದು ಹೇಳುವ ಮೂಲಕ ದೊಡ್ಡ ವಿವಾದಕ್ಕೆ ನಾಂದಿ ಹಾಡಿದ್ದರು.

ಅವರು 2013 ರಲ್ಲಿ ನಡೆದ ಮುಜಫರ್‌ನಗರ ಗಲಭೆಯಲ್ಲಿ ಪ್ರಮುಖ ಆರೋಪಿಯಾಗಿದ್ದರು. ಈ ಗಲಭೆಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು.

ಗಲಭೆಗೆ ಮುನ್ನ ನಡೆದ ದೊಡ್ಡ ಸಭೆ ಅಥವಾ ಮಹಾಪಂಚಾಯತ್‌ನಲ್ಲಿ ಕೋಮು ಪ್ರಚೋದನೆ ಭಾಷಣಗಳನ್ನು ಮಾಡಿದ ಆರೋಪ ಹೊತ್ತಿರುವ ಹಲವು ನಾಯಕರಲ್ಲಿ ಬಾಲ್ಯನ್ ಕೂಡ ಇದ್ದರು. ನಂತರ ಕೋಮು ಸಂಘರ್ಷಗಳು ಭುಗಿಲೆದ್ದವು. ಗಲಭೆಯಲ್ಲಿ ಅವರ ಪಾತ್ರದ ಕುರಿತ ಆರೋಪವನ್ನು ಅವರು ನಿರಾಕರಿಸಿದ್ದಾರೆ.

ಈ ಗಲಭೆಯ ವಿವಾದಾತ್ಮಕ ದಾಖಲೆಯ ಹೊರತಾಗಿಯೂ ಬಿಜೆಪಿ ಬಾಲ್ಯನ್‌ರನ್ನು ಕಣಕ್ಕಿಳಿಸಲಾಯಿತು ಮತ್ತು ಮುಜಫರ್‌ನಗರ ಕ್ಷೇತ್ರದಿಂದ 2014 ರಲ್ಲಿ ಲೋಕಸಭೆಗೆ ಆಯ್ಕೆಯಾದರು. ಕಳೆದ ವರ್ಷದ ಚುನಾವಣೆಯಲ್ಲಿ ಅವರು ಮತ್ತೆ ಗೆದ್ದರು ಮತ್ತು ಅವರನ್ನು ಮಂತ್ರಿಯನ್ನಾಗಿ ಮಾಡಲಾಗಿದೆ. ಅವರು ನೋಡಿದರೆ ವಿದ್ಯಾರ್ಥಿಗಳ ಮೇಲೆ ಗೂಂಡಾಗಳು ಹಲ್ಲೆ ಮಾಡಿದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತದೆ ಎಂಬ ಬೇಜವಬ್ದಾರಿ ಮಾತುಗಳನ್ನಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...