Homeಕರ್ನಾಟಕಫೋನ್ ಕದ್ದಾಲಿಕೆ: ಸಿಎಂ ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ - ಸಿದ್ದರಾಮಯ್ಯ ಆರೋಪ

ಫೋನ್ ಕದ್ದಾಲಿಕೆ: ಸಿಎಂ ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ – ಸಿದ್ದರಾಮಯ್ಯ ಆರೋಪ

ಮೊದಲು 'ಆಪರೇಷನ್ ಕಮಲ'ವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ತಮ್ಮನ್ನು ಖರೀದಿಸಲು ದುಡ್ಡಿನ ಭರವಸೆ ನೀಡಿರುವುದನ್ನು ಕೆಲವು ಕಾಂಗ್ರೆಸ್ ಶಾಸಕರೇ ಒಪ್ಪಿಕೊಂಡಿದ್ದಾರೆ, ಜೆಡಿಎಸ್ ಶಾಸಕರ ಖರೀದಿ ವ್ಯವಹಾರದಲ್ಲಿ ಮುಖ್ಯಮಂತ್ರಿಗಳೇ ಭಾಗಿಯಾಗಿದ್ದ ಅಡಿಯೋ ಇದೆ. ಆ ಬಗ್ಗೆಯೂ ತನಿಖೆ ನಡೆಯಲಿ

- Advertisement -
- Advertisement -

ಫೋನ್ ಕದ್ದಾಲಿಕೆ ಆರೋಪವನ್ನು ಸಿಬಿಐಗೆ ಒಪ್ಪಿಸಬೇಕೆಂದು ನಾನು ಹೇಳಿದ್ದೆನೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿರುವುದು ಅಪ್ಪಟ ಸುಳ್ಳು, ನಾನು ಹಾಗೆ ಒತ್ತಾಯಿಸಿರುವುದನ್ನು ಅವರು ಸಾಬೀತು ಪಡಿಸಲಿ. ಒಬ್ಬ ಮುಖ್ಯಮಂತ್ರಿ ಈ ರೀತಿಯ ಬೇಜವಾಬ್ದಾರಿ ಹೇಳಿಕೆ ನೀಡಬಾರದು. ಪೋನ್ ಕದ್ದಾಲಿಕೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಲಿ ಎಂದಷ್ಟೇ ನಾನು ಹೇಳಿದ್ದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನೆರೆ ಸಂತ್ರಸ್ತರನ್ನು ಭೇಟಿ ಮಾಡಲು ಹೋಗುತ್ತಿದ್ದಾಗ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಸಿದ್ದರಾಮಯ್ಯನವರು “ಬಿ.ಎಸ್.ಯಡಿಯೂರಪ್ಪನವರು ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದ್ದು ನನ್ನ ಕೋರಿಕೆ ಮೇಲೆ ಅಲ್ಲ, ನನಗಿರುವ ಮಾಹಿತಿ ಪ್ರಕಾರ ಗೃಹಸಚಿವ ಅಮಿತ್ ಶಾ ಅವರ ಆದೇಶದ ಮೇರೆಗೆ ಅವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ” ಎಂದಿದ್ದಾರೆ.

ಮುಖ್ಯಮಂತ್ರಿಗಳು ಈ ಸತ್ಯವನ್ನು ಒಪ್ಪಿಕೊಳ್ಳುವ ಧೈರ್ಯ ತೋರಿಸಲಿ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ನನ್ನ ಸಲಹೆ ಕೇಳೋದಾದ್ರೆ, ಮೊದಲು ‘ಆಪರೇಷನ್ ಕಮಲ’ವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ತಮ್ಮನ್ನು ಖರೀದಿಸಲು ದುಡ್ಡಿನ ಭರವಸೆ ನೀಡಿರುವುದನ್ನು ಕೆಲವು ಕಾಂಗ್ರೆಸ್ ಶಾಸಕರೇ ಒಪ್ಪಿಕೊಂಡಿದ್ದಾರೆ, ಜೆಡಿಎಸ್ ಶಾಸಕರ ಖರೀದಿ ವ್ಯವಹಾರದಲ್ಲಿ ಮುಖ್ಯಮಂತ್ರಿಗಳೇ ಭಾಗಿಯಾಗಿದ್ದ ಅಡಿಯೋ ಇದೆ. ಆ ಬಗ್ಗೆಯೂ ತನಿಖೆ ನಡೆಯಲಿ ಎಂದರು.

ಸಿಬಿಐ ಕೇಂದ್ರೀಯ ತನಿಖಾ ಸಂಸ್ಥೆ, ಅದರ ಮೂಲಕ ತನಿಖೆಗೆ ನನ್ನ ವಿರೋಧ ಇಲ್ಲ. ಆದರೆ ಅದು ನೇರವಾಗಿ ಗೃಹಸಚಿವರ ಅಡಿಯಲ್ಲಿ ಕೆಲಸ ಮಾಡುವ ಸಂಸ್ಥೆ. ಕಳೆದ 5 ವರ್ಷಗಳಲ್ಲಿ ಬಿಜೆಪಿ ತಮ್ಮ ರಾಜಕೀಯ ವಿರೋಧಿಗಳ ದಮನಕ್ಕೆ ಸ್ವಾಯತ್ತ ಸಂಸ್ಥೆಗಳನ್ನು ಹೇಗೆ ದುರ್ಬಳಕೆ ಮಾಡಿಕೊಂಡಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇದಕ್ಕಾಗಿಯಷ್ಟೇ ನಮ್ಮ ಆಕ್ಷೇಪ. ಹಿಂದೆ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು ‘’ಚೋರ್ ಬಚಾವೋ ಸಂಸ್ಥೆ’’ ಎಂದು ಗೇಲಿ ಮಾಡುತ್ತಿದ್ದ ಬಿಜೆಪಿ ನಾಯಕರಿಗೆ ಈಗ ಅದರ ಬಗ್ಗೆ ಇಷ್ಟೊಂದು ವಿಶ್ವಾಸ-ಗೌರವ ಯಾಕೆ ಹುಟ್ಟಿಕೊಂಡಿದೆ ಎನ್ನುವುದು ನನ್ನ ಪ್ರಶ್ನೆ ಎಂದಿದ್ದಾರೆ.

ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾದಲ್ಲಿದ್ದಾಗ ಗಣಿ ಹಗರಣವೂ ಸೇರಿದಂತೆ ಯಾವ ಹಗರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಲಿಲ್ಲ. ಪೋನ್ ಕದ್ದಾಲಿಕೆ ಆರೋಪದ ತನಿಖೆಯನ್ನು ನಮ್ಮದೇ ಸಿಐಡಿಗೆ ಒಪ್ಪಿಸಬಹುದಿತ್ತಲ್ಲಾ? ಈಗ ಸಿಬಿಐ ಬಗ್ಗೆ ಎಲ್ಲಿಂದ ನಂಬಿಕೆ ಬಂತು? ಇದರ ಹಿಂದಿರುವ ರಹಸ್ಯವೇನು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಿನ್ನೆ ತಾನೇ ಸಿಎಂ ಯಡಿಯೂರಪ್ಪನವರು ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...