Homeಕರ್ನಾಟಕರಾಯಚೂರು: ಅಧ್ಯಕ್ಷೀಯ ಚುನಾವಣೆಯಲ್ಲಿ ಮತ ತಪ್ಪಿಸಲು ನಗರಸಭೆ ಸದಸ್ಯೆಯನ್ನು ಅಪಹರಿಸಿದ ಬಿಜೆಪಿ ಶಾಸಕ

ರಾಯಚೂರು: ಅಧ್ಯಕ್ಷೀಯ ಚುನಾವಣೆಯಲ್ಲಿ ಮತ ತಪ್ಪಿಸಲು ನಗರಸಭೆ ಸದಸ್ಯೆಯನ್ನು ಅಪಹರಿಸಿದ ಬಿಜೆಪಿ ಶಾಸಕ

- Advertisement -
- Advertisement -

ನಗರಸಭೆ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಮತವನ್ನು ತಪ್ಪಿಸುವ ಉದ್ದೇಶದಿಂದ ರಾಯಚೂರು ನಗರಸಭಾ ಸದಸ್ಯೆಯನ್ನು ಬಿಜೆಪಿ ಶಾಸಕ ಶಿವರಾಜ್ ಪಾಟೀಲ್‌ ಅಪಹರಣ ಮಾಡಿದ್ದಾರೆ ಎಂದು ದೂರು ಸಲ್ಲಿಕೆಯಾಗಿದೆ ಎಂದು ಈದಿನ.ಕಾಂ ಬುಧವಾರ ವರದಿ ಮಾಡಿದೆ.

ರಾಯಚೂರು ನಗರಸಭೆ ಸದಸ್ಯೆಯಾದ ಶೈನಾಜ್ ಬೇಗಂ ಅವರನ್ನು ಶಾಸಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಿಂದ ಅಪಹರಣ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮಾರ್ಚ್ 30ರಂದು ನಗರ ಸಭೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಅವರ ಮತವನ್ನು ತಪ್ಪಿಸುವ ಉದ್ದೇಶದಿಂದ ಈ ಅಪಹರಣ ನಡೆಸಲಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others
ಈ ಬಗ್ಗೆ ಶೈನಜಾ ಬೇಗಂ ಅವರ ಪುತ್ರ ಎಂ.ಡಿ. ಅಲಿ ಅವರು ಮಂಗಳವಾರ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರನ್ನು ಭೇಟಿಯಾಗಿ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ವಿರುದ್ಧ ದೂರು ಸಲ್ಲಿಸಿದ್ದಾರೆ.

ಅವರು ನೀಡಿರುವ ದೂರಿನಲ್ಲಿ, “ಮಾರ್ಚ್ 30ರಂದು ರಾಯಚೂರು ನಗರಸಭೆ ಅಧ್ಯಕ್ಷ ಸ್ಥಾನದ ಚುನಾವಣೆ ನಿಗದಿಯಾಗಿದೆ. ಆದರೆ, ಈ ಚುನಾವಣೆಯಲ್ಲಿ ಶೈನಾಜ್ ಬೇಗಂ ಅವರ ಮತವನ್ನು ತಪ್ಪಿಸುವ ದುರುದ್ದೇಶದಿಂದ ಅಪಹರಣ ಮಾಡಲಾಗಿದೆ” ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: BJP ವಿರುದ್ಧ ಕೈಜೋಡಿಸಲು ಬಿಜೆಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಅಲ್ಲದೆ, “ಶೈನಾಜ್ ಬೇಗಂ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಹೀಗಾಗಿ ಅವರನ್ನು ಮಾರ್ಚ್ 27ರಂದು ನಗರದ ಕನ್ನಿಂಗ್ ಹ್ಯಾಂ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ನನ್ನ ತಮ್ಮ ಮೊಹಮ್ಮದ್ ಆಲಂ ಮತ್ತು ಅತ್ತೆ ಖಾಜಾಬಿ ತಾಯಿಯ ಜೊತೆ ಇದ್ದರು. ಆದರೆ, ಮುಂಜಾನೆ ಕರೆ ಮಾಡಿದಾಗ ಎಲ್ಲರ ಮೊಬೈಲ್ ಸ್ವಿಚ್ ಆಫ್ ಆಗಿತ್ತು.

ಆಸ್ಪತ್ರೆಗೆ ಹೋಗಿ ವಿಚಾರಿಸಿದಾಗ, ಬಿಳಿ ಬಣ್ಣದ ಕಾರಿನಲ್ಲಿ ಬಂದವರು ಮೂರೂ ಜನರನ್ನು ಕರೆದುಕೊಂಡುಹೋಗಿದ್ದಾರೆ ಎಂದು ತಿಳಿಸಿದರು. ಈ ಬಗ್ಗೆ ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆ ಕಾರು ರಾಯಚೂರು ಶಾಸಕ ಶಿವರಾಜ್ ಪಾಟೀಲ್ ಅವರಿಗೆ ಸೇರಿದ್ದು ಎಂದು ತಿಳಿದುಬಂದಿದೆ” ಎಂದು ದೂರಿನಲ್ಲಿ ಉಲ್ಲೇಖಿಸಿದಲಾಗಿದೆ ಎಂದು ‘ಈದಿನ.ಕಾಂ’ ವರದಿಯಲ್ಲಿ ಹೇಳಿದೆ.

ದೂರನ್ನು ಆಧರಿಸಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ ಈವರೆಗೆ ಶಾಸಕ ಶಿವರಾಜ್ ಪಾಟೀಲ್ ಅವರನ್ನು ಈ ಸಂಬಂಧ ಪ್ರಶ್ನೆ ಮಾಡಲಾಗಿಲ್ಲ ಎಂದು ಪೊಲೀಸ್‌ ಮೂಲಗಳನ್ನು ಉಲ್ಲೇಖಿಸಿ ‘ಈದಿನ.ಕಾಂ’ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಜಯಪುರ: ಗೋ ಸಾಗಾಟಗಾರನ ಮೇಲೆ ಬಜರಂಗದಳದಿಂದ ಥಳಿತ

0
ರಾಜ್ಯದಲ್ಲಿ ಮತ್ತೆ ಗೂಂಡಾಗಿರಿ ವರದಿಯಾಗಿದ್ದು, ದನ-ಕರುಗಳನ್ನು ಸಾಗಾಟ ಮಾಡುವಾಗ ವಾಹನ ತಡೆದು ಯುವಕನಿಗೆ ಬಜರಂಗದಳ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ. ಬಂದೇನವಾಝ್‌...