Homeಮುಖಪುಟಬಿಜೆಪಿ ಶಾಸಕ ಸೇರಿ 16 ಮಂದಿಯ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲು

ಬಿಜೆಪಿ ಶಾಸಕ ಸೇರಿ 16 ಮಂದಿಯ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲು

- Advertisement -
- Advertisement -

ಉತ್ತರ ಪ್ರದೇಶದ ಬದೌನ್‌ನಲ್ಲಿ ಬಿಜೆಪಿ ಶಾಸಕ ಹರೀಶ್ ಶಾಕ್ಯಾ, ಅವರ ಸಹೋದರ ಸತೇಂದ್ರ ಶಾಕ್ಯಾ ಸೇರಿದಂತೆ 16 ಜನರ ವಿರುದ್ಧ ಸಾಮೂಹಿಕ ಅತ್ಯಾಚಾರ ಹಾಗೂ ಮತ್ತಿತರ ಆರೋಪಗಳ ಮೇಲೆ ಪ್ರಕರಣ ದಾಖಲಾಗಿದೆ.

ನ್ಯಾಯಾಲಯದ ಆದೇಶದ ಮೇರೆಗೆ ಬದೌನ್‌ನ ಸಿವಿಲ್ ಲೈನ್ಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ದ ಅತ್ಯಾಚಾರದ ಜೊತೆ ಭೂಕಬಳಿಕೆ ಸೇರಿದಂತೆ ಇತರ ಆರೋಪಗಳೂ ಇವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬದೌನ್‌ ಜಿಲ್ಲೆಯ ಜಾನಿ ಕೊತ್ವಾಲಿ ಪ್ರದೇಶದ ಗ್ರಾಮದ ನಿವಾಸಿಗಳಾದ ಸಂತ್ರಸ್ತೆಯ ಕುಟುಂಬವು ಕೋಟಿ ಮೌಲ್ಯದ ಜಮೀನು ಹೊಂದಿದೆ. ಅದನ್ನು ಕಡಿಮೆ ಬೆಲೆಗೆ ಖರೀದಿಸಲು ಜಿಲ್ಲೆಯ ಬಿಲ್ಸಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರಾದ ಹರೀಶ್ ಶಾಕ್ಯಾ ಮುಂದಾಗಿದ್ದರು. ಸಂತ್ರಸ್ತೆಯ ಕುಟುಂಬ ಕಡಿಮೆ ಬೆಲೆಗೆ ಜಮೀನು ಮಾರಲು ನಿರಾಕರಿಸಿದಾಗ ಬೆದರಿಕೆ ಹಾಕಿ, ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

“ಶಾಸಕ ಮತ್ತು ಅವರ ತಂಡ ನನ್ನ ಪತಿಯ ಮೇಲೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಅವರನ್ನು ಅಪಹರಿಸಿ ಚಿತ್ರಹಿಂಸೆ ನೀಡಿದ್ದರು. ನಂತರ ನಮ್ಮ ನಡುವಿನ ಸಮಸ್ಯೆ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಶಾಸಕ ಕಚೇರಿಗೆ ನನ್ನನ್ನು ಕರೆಸಿಕೊಂಡಿದ್ದರು. ಅಲ್ಲಿ ಶಾಸಕ, ಅವರ ಸಹೋದರ ಮತ್ತು ಇತರರು ನನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಜಮೀನಿಗೆ ಸಂಬಂಧಿಸಿದ ಮೂರು ಒಪ್ಪಂದಗಳಿಗೆ ಒತ್ತಾಯಪೂರ್ವಕವಾಗಿ ಸಹಿ ಹಾಕಿಸಿದ್ದಾರೆ” ಎಂದು ಸಂತ್ರಸ್ತೆ ಆರೋಪಿಸಿದ್ದಾಗಿ ವರದಿಗಳು ವಿವರಿಸಿದೆ.

ಸಂತ್ರಸ್ತೆ ಶಾಸಕನ ವಿರುದ್ದ ದೂರು ನೀಡಲು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ತೆರಳಿದ್ದರು. ನ್ಯಾಯಾಲಯವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದೆ. ಪೊಲೀಸರು ಶಾಸಕ ಮತ್ತು ಇತರ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

“ಆರೋಪಿಗಳು ಜಮೀನು ಮಾರಾಟಕ್ಕೆ ವಿಷಯಕ್ಕೆ ಸಂಬಂಧಿಸಿದಂತೆ ತನ್ನ ಸೋದರ ಸಂಬಂಧಿ ರೋಹಿತ್‌ನನ್ನು ಅಪಹರಿಸಿ, ಥಳಿಸಿದ್ದರು. ಇದಾದ ಬಳಿಕ ಆಸಗ್ಟ್‌ 2022ರಲ್ಲಿ ರೋಹಿತ್ ಆತ್ಮಹತ್ಯೆ ಮಾಡಿಕೊಂಡರು. ಈ ಬಗ್ಗೆ ನ್ಯಾಯಕೋರಿ ನಾವು ಪೊಲೀಸರ ಬಳಿ ಹೋಗಿದ್ದೆವು. ಆದರೆ, ಪೊಲೀಸರು ನಮ್ಮ ದೂರನ್ನು ಗಂಭೀರವಾಗಿ ಪರಿಗಣಿಸಿಲ್ಲ” ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಗಳು ನಮ್ಮ ಬೆಳೆಯನ್ನು ನಾಶ ಮಾಡಿದ್ದಾರೆ. ಕಡಿಮೆ ಬೆಲೆಗೆ ಜಮೀನು ಮಾರುವಂತೆ ಒತ್ತಾಯಿಸಿ ಭಾರೀ ಕಿರುಕುಳ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾರೆ.

ಶಾಸಕ ಏನಂದ್ರು?

ಶಾಸಕ ಹರೀಶ್ ಶಾಕ್ಯ ಅವರು ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ್ದು, ಆಧಾರ ರಹಿತ ಎಂದು ಹೇಳಿದ್ದಾರೆ. ಇದು ತನ್ನ ಹೆಸರಿಗೆ ಕಳಂಕ ತರುವ ಸಂಚು. ಪೊಲೀಸ್ ಮತ್ತು ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ” ಎಂದಿದ್ದಾರೆ.

ನ್ಯಾಯಾಲಯದ ಆದೇಶದ ಬಳಿಕ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಆರೋಪಿಗಳ ಪಾಲಿಗ್ರಾಫ್ ಮತ್ತು ನಾರ್ಕೋ ಪರೀಕ್ಷೆ ಸೇರಿದಂತೆ ಸಮಗ್ರ ತನಿಖೆ ನಡೆಸುವಂತೆ ಸಂತ್ರಸ್ತೆಯ ಕುಟುಂಬ ಆಗ್ರಹಿಸಿದೆ.

ಇದನ್ನೂ ಓದಿ : ಮೃತದೇಹದೊಂದಿಗೆ ಸಂಭೋಗ ಅತ್ಯಾಚಾರವಲ್ಲ: ಛತ್ತೀಸ್‌ಗಢ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...