Homeಕರ್ನಾಟಕಅಹವಾಲು ಸಲ್ಲಿಸಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

ಅಹವಾಲು ಸಲ್ಲಿಸಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

ಮಹಿಳೆ ವಿರುದ್ಧವೆ ವೈಟ್‌ಫೀಲ್ಡ್‌‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ

- Advertisement -
- Advertisement -

ತನ್ನ ಅಹವಾಲು ನೀಡಲು ಅರ್ಜಿಯೊಂದಿಗೆ ಬಂದ ಮಹಿಳೆಯೊಬ್ಬರ ವಿರುದ್ಧ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ಕಿರುಚಾಡಿ, ಮಹಿಳೆ ಎಂಬುವುದನ್ನು ನೋಡದೆ ಕೆಟ್ಟದಾಗಿ ನಡೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಶನಿವಾರ ನಡೆದಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಶಾಸಕ ಲಿಂಬಾವಳಿ ಮಹಿಳೆಯನ್ನು ಬಂಧಿಸುವಂತೆ ಪೊಲೀಸರಿಗೆ ಹೇಳಿದ್ದು ವಿಡಿಯೊದಲ್ಲಿ ಸೆರೆಯಾಗಿದೆ.

ಅರ್ಜಿಯೊಂದನ್ನು ತಂದು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಪ್ರಯತ್ನಿಸಿದ ಮಹಿಳೆಯಿಂದ ಮಹದೇವಪುರ ಬಿಜೆಪಿ ಶಾಸಕರೂ ಆಗಿರುವ ಲಿಂಬಾವಳಿ ಅವರು ಅರ್ಜಿಯನ್ನು ಕಿತ್ತುಕೊಂಡಿದ್ದಾರೆ. ಮಹಿಳೆಯ ವಿರುದ್ಧ ಆಕ್ರೋಶದಿಂದ ಕಿರುಚಿದ್ದಾರೆ. ನಂತರ ಮಹಿಳೆಯನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ. ಶಾಸಕರ ಈ ನಡೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಅಧಿಕಾರ ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಸುರಿದ ಮಳೆಯಿಂದಾಗಿ ವರ್ತೂರು ಕೆರೆಯ ಕೋಡಿ ಬಿದ್ದು ನೆರೆ ಉಂಟಾಗಿತ್ತು. ಹೀಗಾಗಿ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಅರವಿಂದ್ ಲಿಂಬಾವಳಿ ಭೇಟಿ ನೀಡಿದ್ದರು. ಈ ವೇಳೆ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

ಅರವಿಂದ್ ಲಿಂಬಾವಳಿ ಮುಂದೆ ಅರ್ಜಿ ಹಿಡಿದುಕೊಂಡು ಬರುವ ಮಹಿಳೆ, ತನ್ನ ಮಾತನನ್ನು ಕೇಳುವಂತೆ ವಿನಂತಿಸುತ್ತಾರೆ. ಆದರೆ ಶಾಸಕ ಅದನ್ನು ಹೇಳದೆ ಅರ್ಜಿಯನ್ನು ಕಿತ್ತುಕೊಳ್ಳಲು ಪ್ರಯತ್ನಿಸುತ್ತಾರೆ. ಆದ್ರೆ ಮಹಿಳೆ ಪತ್ರ ನೀಡದೇ ತಮ್ಮ ಮಾತು ಕೇಳಿ ಎಂದು ಒತ್ತಾಯಿಸಿದಾಗ ಶಾಸಕ ಕೋಪಗೊಂಡು, “ಏ ಇವರನ್ನು ಕರ್ಕೊಂಡು ಹೋಗಿ. ಪೊಲೀಸ್ ಠಾಣೆಯಲ್ಲಿ ಕೂರಿಸಿ” ಎಂದು ಕೂಗಿ ಹೇಳುತ್ತಾರೆ.

ತುಸು ಮುಂದೆ ಹೋಗಿ ಮತ್ತೆ ವಾಪಾಸು ಬಂದು ಮಹಿಳೆಯ ಕೈಯಲ್ಲಿದ್ದ ಅರ್ಜಿಯನ್ನು ಬಲವಂತವಾಗಿ ಕಸಿದುಕೊಳ್ಳುತ್ತಾರೆ. ಒತ್ತುವರಿ ಮಾಡ್ಕೊಂಡು ಬರ್ತಿರಾ, ನಾಚಿಕೆ ಆಗುವುದಿಲ್ಲವೆ ಎಂದು ಪ್ರಶ್ನಿಸುತ್ತಾರೆ. “ಏಯ್ ಸುಮ್ನಿರು, ಇಲ್ಲವೆಂದರೆ ಬೇರೆ ಭಾಷೆ ಬರುತ್ತೆ. ಏನ್ ಮಾತನಾಡಬೇಕು, ಸುಮ್ನೆ ಬಿಡಲ್ಲ ನಿನ್ನ. ನ್ಯಾಯ ಕೇಳಲು ಬಂದಿದ್ದೀನಿ ಅಂತ ಹೇಳಲು ನಾಚಿಕೆ ಆಗಲ್ವಾ ನಿನಗೆ?” ಎಂದು ಮಹಿಳೆಯೊಂದಿಗೆ ಏಕವಚನದಲ್ಲೇ ಮಾತನಾಡುತ್ತಾರೆ.

ಈ ವೇಳೆ ಮಹಿಳೆ ಕೂಡಾ ಶಾಸಕನ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನನ್ನ ಬಳಿ ದಾಖಲೆಗಳಿದ್ದು, ನಾನು ನಮ್ಮ ಶಾಸಕರ ಬಳಿಗೆ ಮಾತನಾಡಲು ಬಂದಿದ್ದೇನೆ ಎಂದು ಹೇಳಿದ್ದಾರೆ. “ಮಹಿಳೆ ಜೊತೆಗೆ ಹೇಗೆ ಮಾತನಾಡುತ್ತಾರೆ, ಮಾನ ಮರ್ಯಾದೆ ಇಲ್ಲವೆ. ನಾನು ನ್ಯಾಯ ಕೇಳಲು ಬಂದಿದ್ದು, ಒಬ್ಬ ಮಹಿಳೆ ಅನ್ನೋದನ್ನು ಕೂಡಾ ನೋಡದೆ ಈ ರೀತಿ ಮಾತನಾಡಿದರೆ ಹೇಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: 2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

ಇದರ ನಂತರ ಮಹಿಳಾ ಪೊಲೀಸರೊಬ್ಬರು ಬಂದು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ನಂತರ ಪೊಲೀಸರು ಮಹಿಳೆಯ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಕೂಗಾಡದೆ ಆರತಿ ಎತ್ತಬೇಕಿತ್ತೆ?: ಶಾಸಕನ ನಡೆ ಸಮರ್ಥಿಸಿಕೊಂಡ ವೈಟ್‌ಫೀಲ್ಡ್‌‌ ಎಸಿಪಿ

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ವೈಟ್‌ಫೀಲ್ಡ್‌ ಎಸಿಪಿ, “ಮಹಿಳೆಯ ಮೇಲೆ ಎಫ್‌ಐಆರ್‌ ಆಗಿರುವುದು ನಿಜ. ರಾಜಕಾಲುವೆಯನ್ನು ಒತ್ತುವರಿ ಮಾಡಿ ಕಾಂಪೋಂಡ್‌ ಕಟ್ಟಿದ್ದರಿಂದ ನೀರು ಸರಾಗವಾಗಿ ಹರಿಯದೆ 300 ಮನೆಗಳಿಗೆ ನೀರು ನುಗ್ಗಿದೆ. ಸಂತ್ರಸ್ತ ಜನರು ಊಟ ತಿಂಡಿಗಾಗಿ ಒದ್ದಾಡ್ತಾ ಇದ್ದಾರೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ದೂರು ಕೊಟ್ಟಿದ್ದರಿಂದ ಎಫ್‌ಐಆರ್‌ ದಾಖಲಾಗಿದೆ” ಎಂದು ಹೇಳಿದ್ದಾರೆ.

ಶಾಸಕನ ಜೊತೆಗೆ ಗಟ್ಟಿ ಧ್ವನಿಯಲ್ಲಿ ಮಾತನಾಡಿದ್ದಕ್ಕೆ ಎಫ್‌ಐಆರ್‌ ಆಗಿದೆಯೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಸಿಪಿ,“ಬಿಬಿಎಂಪಿ ಕಂದಾಯ ಅಧಿಕಾರಿಗಳ ದೂರಿನ ಆಧಾರದಲ್ಲಿ ಎಫ್‌ಐಆರ್‌‌ ಆಗಿದೆ. ಶಾಸಕರು ಮಾತನಾಡಿರುವುದು ಸಾರ್ವಜನಿಕರ ಪರವಾಗಿ, ಆದರೆ ಅದನ್ನು ಯಾರೂ ಹೇಳುತ್ತಿಲ್ಲ” ಎಂದು ಹೇಳಿದ್ದಾರೆ.

“ಶಾಸಕರು ಕೂಗಾಡದೆ ಏನ್‌ ಮಾಡಬೇಕಿತ್ತು? ಆರತಿ ಎತ್ತಬೇಕಿತ್ತೆ ಅವರಿಗೆ? ಈ ಮಹಿಳೆ ರಾಜಕಾಲುವೆ ಮೇಲೆ ಕಾಂಪೋಂಡ್‌ ಹಾಕಿದ್ದರಿಂದ, ಮುನ್ನೂರು ಮನೆಗಳಿಗೆ ಊಟ-ತಿಂಡಿ ಇಲ್ಲದೆ ಒದ್ದಾಡ್ತಾ ಇದ್ದಾರೆ. ಅವರ ವಸ್ತುಗಳೆಲ್ಲವೂ ನೆನೆದು ಹೋಗಿವೆ. ಅಲ್ಲಿ ಆಗಿರುವುದನ್ನು ಬಂದು ನೋಡಿ, ನಂತರ ಮಾತನಾಡಿ. ಬರಿ ಶಾಸಕರು ಕೂಗಾಡಿರುವುದನ್ನು ಹೇಳುವುದಲ್ಲ” ಎಂದು ಎಸಿಪಿ ಹೇಳಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್: ವಿಮಾನ ನಿಲ್ದಾಣದಲ್ಲಿ ಅತಿಕ್ರಮ ಪ್ರವೇಶ, ಬಲವಂತವಾಗಿ ವಿಮಾನ ಹಾರಿಸಿದ್ದ ಬಿಜೆಪಿ ಸಂಸದನ ವಿರುದ್ಧ ದೂರು

ಸಾಮಾಜಿಕ ಮಾಧ್ಯಮಗಳಲ್ಲಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮಹಿಳೆ ಕಾನೂನು ಬಾಹಿರವಾಗಿ ಕಾಂಪೌಂಡ್ ಕಟ್ಟಿದ್ದರೂ, ಶಾಸಕರು ಈ ರೀತಿ ಕೂಗಾಡಬಾರದಿತ್ತು ಎಂದು ಅಭಿಪ್ರಾಯ ವ್ಯಕ್ತವಾಗಿದೆ. “ಜನಪ್ರತಿನಿಧಿಯೊಬ್ಬ ತಟಸ್ಥವಾಗಿದ್ದು ಮಹಿಳೆಯ ಅಹವಾಲನ್ನು ಕೂಡಾ ಕೇಳಬೇಕಾತ್ತು. ಮಹಿಳೆ ಕೂಡಾ ತಮ್ಮ ಬಳಿ ದಾಖಲೆಗಳಿವೆ ಎಂದು ಹೇಳಿದ್ದಾರೆ. ಅದನ್ನು ಪರಿಶೀಲಿಸಬೇಕಿತ್ತು” ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ಲಿಂಬಾವಳಿ ಅವರ ನಡೆಯನ್ನು ಕಾಂಗ್ರೆಸ್ ವಿರೋಧಿಸಿದ್ದು, “ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಶಾಸಕ ಅರವಿಂದ್ ಲಿಂಬಾವಳಿಯ ವರ್ತನೆಯು ಬಿಜೆಪಿಯ ಜನವಿರೋಧಿ ಧೋರಣೆ, ದುರಹಂಕಾರ ಪರಮಾವಧಿಗೆ ತಲುಪಿರುವುದಕ್ಕೆ ಸಾಕ್ಷಿ. ಜನತೆಯ ಮೇಲೆ ದರ್ಪ ತೋರಿದ ಮಾತ್ರಕ್ಕೆ ನಿಮ್ಮ ಅಯೋಗ್ಯತನ ಮರೆಯಾಗುವುದಿಲ್ಲ. ಬಿಜೆಪಿ ಮತ್ತು ಬಸವರಾಜ್ ಬೊಮ್ಮಾಯಿ ಅವರೆ, ನಿಮ್ಮ ಶಾಸಕರ ಈ ವರ್ತನೆ ನಿಮಗೆ ಸಹ್ಯವೇ?” ಎಂದು ಪ್ರಶ್ನಿಸಿದ್ದಾರೆ.

ಶಾಸಕರ ನಡೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕವು ದೂರು ದಾಖಲಿಸಲಿದೆ ಎಂದು ಹೇಳಿದೆ. “ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುವ ಘಟನೆಗೆ ಸಂಬಂಧಿಸಿದಂತೆ ಮಹಿಳಾ ಆಯೋಗದಲ್ಲಿ ಶಾಸಕರ ವಿರುದ್ಧ ಇಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದಿಂದ ದೂರನ್ನು ದಾಖಲಿಸಲಾಗುತ್ತಿದೆ” ಎಂದು ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಆಪರೇಷನ್ ಕಮಲ: ಐವರು ಜೆಡಿಯು ಶಾಸಕರು ಬಿಜೆಪಿ ತೆಕ್ಕೆಗೆ

ಜೂನ್ ತಿಂಗಳಲ್ಲಿ ಶಾಸಕ ಲಿಂಬಾವಳಿ ಅವರ ಮಗಳು ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿ ನಂತರ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದರು. ಈ ವಿಡಿಯೊ ಕೂಡಾ ಇದೀಗ ಮತ್ತೊಮ್ಮೆ ವೈರಲ್ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...