Homeಮುಖಪುಟನೆಹರು ಕುರಿತು ಸಿ.ಟಿ ರವಿ ಅವಹೇಳನಕಾರಿ ಹೇಳಿಕೆಗೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪರೋಕ್ಷ ಖಂಡನೆ

ನೆಹರು ಕುರಿತು ಸಿ.ಟಿ ರವಿ ಅವಹೇಳನಕಾರಿ ಹೇಳಿಕೆಗೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪರೋಕ್ಷ ಖಂಡನೆ

ನೆಹರು ಅವರು ನಿಧನರಾದಾಗ ದೇಶದ ಶ್ರೇಷ್ಠನಾಯಕನೊಬ್ಬನನ್ನು ಕಳೆದುಕೊಂಡೆವು ಎಂದು ವಾಜಪೇಯಿಯವರು ಸಂತಾಪ ಸೂಚಿಸಿದ್ದರು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement -

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಅವರದೇ ಪಕ್ಷದ ಶಾಸಕ ಎಂ.ಪಿ.ಕುಮಾರಸ್ವಾಮಿ ಪರೋಕ್ಷವಾಗಿ ಖಂಡಿಸಿದ್ದಾರೆ.

ನೆಹರು ಅವರ ಬಗೆಗಿನ ಹುಕ್ಕಾ ಸೇವನೆ ಕುರಿತು ಬಿಜೆಪಿ ನಾಯಕರು ನೀಡಿದ ಹೇಳಿಕೆಯನ್ನು ಖಂಡಿಸಿರುವ ಮೂಡಿಗೆರೆ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ “ಇತ್ತೀಚೆಗೆ ದ್ವೇಷದ ರಾಜಕಾರಣ ಹೆಚ್ಚುತ್ತಿದೆ. ಇದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದುದು. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ, ಆಡಳಿತ ಪಕ್ಷಗಳು ಹೇಗಿರಬೇಕೆಂದು ಹಿಂದಿನ ನಾಯಕರು ಮಾದರಿ ಹಾಕಿಕೊಟ್ಟಿದ್ದಾರೆ. ಅಂತಹ ನಾಯಕರನ್ನು ಟೀಕಿಸುವುದು ಸರಿಯಲ್ಲ” ಎಂದಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ನೆಹರು ಪ್ರಧಾನಿಯಾಗಿದ್ದ ಕಾಲಾವಧಿಯಲ್ಲಿ ವಾಜಪೇಯಿ ಸಂಸದರಾಗಿದ್ದರು, ಸಂಸತ್ತಿನಲ್ಲಿ ಮಾತನಾಡಲು ವಾಜಪೇಯಿ ಸ್ಪೀಕರ್ ಅವರಲ್ಲಿ ಮನವಿ ಮಾಡುತ್ತಿರುವುದನ್ನು ಕಂಡ ನೆಹರು ಅವರು ವಾಜಪೇಯಿ ಅವರಿಗೆ ಮಾತನಾಡಲು ಅವಕಾಶ ನೀಡಿ ಎಂದು ಲೋಕಸಭಾ ಅಧ್ಯಕ್ಷರ ಮೇಲೆ ಒತ್ತಡ ಹೇರುತ್ತಿದ್ದರು. ಅದೇ ರೀತಿ ವಾಜಪೇಯಿ ವಿದೇಶಾಂಗ ಸಚಿರಾಗಿದ್ದ ವೇಳೆ ಜವಹರಲಾಲ್ ನೆಹರು ಪೋಟೋವನ್ನು ತಮ್ಮ ಕಚೇರಿಯಲ್ಲಿ ತೆಗೆದುಹಾಕಿದ್ದನ್ನು ಗಮನಿಸಿ ಕೂಡಲೇ ಅವರ ಪೋಟೋ ವನ್ನು ಇರಿಸುವಂತೆ ಆದೇಶಿಸಿದ್ದರು” ಎಂದು ಅವರ ಸಂಬಂಧದ ಕುರಿತು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ನೆಹರು ಅವರು ನಿಧನರಾದಾಗ ದೇಶದ ಶ್ರೇಷ್ಠನಾಯಕನೊಬ್ಬನನ್ನು ಕಳೆದುಕೊಂಡೆವು ಎಂದು ವಾಜಪೇಯಿಯವರು ಸಂತಾಪ ಸೂಚಿಸಿದ್ದರು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಚೀನಾ – ಭಾರತ ಯುದ್ಧದ ಸಂದರ್ಭದಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದರು. ಯುದ್ದ ಮಾಡಬೇಕೆಂಬ ಅವರ ಈ ನಿರ್ಧಾರವನ್ನು ಅಟಲ್ ಬಿಹಾರಿ ವಾಜಪೇಯಿ ಬೆಂಬಲಿಸಿ ಇಂದಿರಾ ಗಾಂಧಿಯನ್ನು ಅವರನ್ನು ದುರ್ಗೆಗೆ ಹೋಲಿಸಿದ್ದರು. ಯುದ್ಧದ ಸಂದರ್ಭದಲ್ಲಿ ಪ್ರತಿಪಕ್ಷ ಆಡಳಿತ ಪಕ್ಷ ಒಂದೇ ಎಂದು ಹುರಿದುಂಬಿಸಿದ್ದರು ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾಗಿದ್ದ ಪ್ರಾರಂಭದಲ್ಲಿ ಇಂದಿರಾ ಗಾಂಧಿಜೀಯವರ ಬ್ಯಾಂಕ್ ರಾಷ್ಟ್ರೀಕರಣ ಕುರಿತು ಪ್ರಶಂಸೆ ವ್ಯಕ್ತಪಡಿಸಿ ಸಾಮಾನ್ಯ ಜನರಿಗೆ ಇದು ಅನುಕೂಲವಾಗಿದೆ ಎಂದು ಹೊಗಳಿದ್ದರು‌ ಈ ಹಿನ್ನಲೆಯಲ್ಲಿ ಯಾವುದೇ ಪಕ್ಷದ ನಾಯಕನನ್ನು ತಮ್ಮ ಸೈದಾಂತಿಕ ಪ್ರತಿಪಾದನೆ ಅಥವಾ ನಾಯಕರ ಮೆಚ್ಚುಗೆಗಾಗಿ ಅವರನ್ನು ಅಗೌರವಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇತ್ತೀಚೆಗೆ ಎಂ.ಪಿ ಕುಮಾರಸ್ವಾಮಿಯವರು ‘ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ವ್ಯಾಪ್ತಿಗೆ ಮೂಡಿಗೆರೆ ಕ್ಷೇತ್ರವನ್ನು ಸೇರಿಸಿ, ಮನೆ, ಜಮೀನು ಮತ್ತು ಬೆಳೆಹಾನಿ ಆದವರಿಗೆ ಪರಿಹಾರ ನೀಡಿ’ ಎಂದು ಒತ್ತಾಯಿಸಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಎದುರು ತಮ್ಮದೇ ಸರ್ಕಾರದ ವಿರುದ್ಧ ಏಕಾಂಗಿಯಾಗಿ ಧರಣಿ ನಡೆಸಿ ಗಮನ ಸೆಳೆದಿದ್ದರು.


ಇದನ್ನೂ ಓದಿ: ‘ಬಾರ್‌‌’ ಸಿಟಿ ರವಿಯ ಸಂಸ್ಕೃತಿ: ಸಿದ್ದರಾಮಯ್ಯ

+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಸಾಧ್ಯವಾಗದೆ ರಸ್ತೆಯಲ್ಲೆ 6 ತಿಂಗಳ ಶಿಶುವಿಗೆ ಜನ್ಮ ನೀಡಿದ ಮಹಿಳೆ | Naanu Gauri

ಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಸಾಧ್ಯವಾಗದೆ ರಸ್ತೆಯಲ್ಲೆ 6 ತಿಂಗಳ ಶಿಶುವಿಗೆ ಜನ್ಮ ನೀಡಿದ...

0
ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ನಿರಾಕರಿಸಿದ ಕಾರಣಕ್ಕೆ ಮಹಿಳೆಯೊಬ್ಬರು ರಸ್ತೆಯಲ್ಲೇ ಆರು ತಿಂಗಳ ಶಿಶುವಿಗೆ ಜನ್ಮ ನೀಡಿರುವ ಅಘಾತಕಾರಿ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಆರು ತಿಂಗಳ ಗರ್ಭಿಣಿಯಾಗಿದ್ದ ಕಲ್ಲೋ ಬಾಯಿಯನ್ನು...
Wordpress Social Share Plugin powered by Ultimatelysocial