Homeಕರ್ನಾಟಕನಗರಸಭೆಗೆ ಸ್ಪರ್ಧಿಸಿದ್ದ ಪ್ರತಿ ಅಭ್ಯರ್ಥಿಗೆ ಸಿ.ಟಿ.ರವಿ 15 ಲಕ್ಷ ರೂ. ನೀಡಿದ್ದರು: ಆಡಿಯೊ ರಿಲೀಸ್ ಮಾಡಿದ...

ನಗರಸಭೆಗೆ ಸ್ಪರ್ಧಿಸಿದ್ದ ಪ್ರತಿ ಅಭ್ಯರ್ಥಿಗೆ ಸಿ.ಟಿ.ರವಿ 15 ಲಕ್ಷ ರೂ. ನೀಡಿದ್ದರು: ಆಡಿಯೊ ರಿಲೀಸ್ ಮಾಡಿದ ಎಎಪಿ

ಚುನಾವಣಾ ಅಕ್ರಮ ನಡೆದಿದೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದ್ದು, ಬಿಜೆಪಿ- ಆಪ್‌ ಅಭ್ಯರ್ಥಿಗಳು ಮಾತನಾಡಿದ್ದಾರೆ ಎನ್ನಲಾದ ಆಡಿಯೊವನ್ನು ಬಿಡುಗಡೆ ಮಾಡಲಾಗಿದೆ.

- Advertisement -
- Advertisement -

ಚಿಕ್ಕಮಗಳೂರು ನಗರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪ್ರತಿ ಬಿಜೆಪಿ ಅಭ್ಯರ್ಥಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಅವರು ಹದಿನೈದು ಲಕ್ಷ ರೂ. ನೀಡಿದ್ದರು ಎಂದು ಆರೋಪಿಸುವ ಆಮ್‌ ಆದ್ಮಿ ಪಾರ್ಟಿಯು ಆಡಿಯೊವನ್ನು ಬಿಡುಗಡೆ ಮಾಡಿದೆ.

ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ ಪಕ್ಷಗಳು ಇಡೀ ಚುನಾವಣೆಯಲ್ಲಿ ಹಣದ ಹೊಳೆಯನ್ನೇ ಹರಿಸಿದ್ದು, ಚಿಕ್ಕಮಗಳೂರಿನ ಮುಗ್ಧ ಮತದಾರರಿಗೆ ಆಸೆ-ಆಮಿಷಗಳನ್ನು ಒಡ್ಡಿ, ಮರಳು ಮಾಡಿ ಮತ ಸೆಳೆಯಲಾಗಿದೆ. ಅದರಲ್ಲೂ ಬಿಜೆಪಿಯೂ ಸಾಧ್ಯವಿರುವ ಎಲ್ಲ ಅಕ್ರಮಗಳನ್ನು ಎಸಗಿ ಚುಣಾವಣೆಯಲ್ಲಿ ಗೆದ್ದಿದೆ ಎಂದು ಎಎಪಿ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್‌ ಜೈನ್‌ ಆರೋಪಿಸಿದ್ದಾರೆ.

ವಾರ್ಡ್ ನಂ. 27ರಲ್ಲಿ ಸ್ಪರ್ಧಿಸಿದ್ದ ಎಎಪಿ ಅಭ್ಯರ್ಥಿ ದೀಪಕ್‌ ಅವರು, ವಾರ್ಡ್ ನಂ. 33ರ ಬಿಜೆಪಿ ಅಭ್ಯರ್ಥಿ ನರಸಿಂಹಮೂರ್ತಿಯವರ ಜೊತೆ ನಡೆಸಿದ್ದಾರೆ ಎನ್ನಲಾದ ದೂರವಾಣಿ ಸಂಭಾಷಣೆಯನ್ನು ದರ್ಶನ್‌ ಜೈನ್‌ ಹಂಚಿಕೊಂಡಿದ್ದಾರೆ.

ಈ ಪೋನ್‌ ಸಂಭಾಷಣೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸ್ಥಳೀಯ ಶಾಸಕ ಸಿ.ಟಿ.ರವಿ ಹಾಗೂ ಬಿಜೆಪಿ ನಡೆಸಿದ ಅಕ್ರಮಗಳು ಬಯಲಿಗೆ ಬಂದಿವೆ. ಚುಣಾವಣಾ ಆಯೋಗವು ನಗರಸಭೆ ಚುನಾವಣೆಯಲ್ಲಿ ವಾರ್ಡ್ ಒಂದರ ಅಭ್ಯರ್ಥಿಗೆ ಚುನಾವಣಾ ಖರ್ಚಿಗೆ ನಿಗದಿಪಡಿಸಿರುವ ಮೊತ್ತ 2 ಲಕ್ಷ ರೂ.ಗಳು. ಆದರೆ ಈ ಮೊತ್ತದ ಹತ್ತು- ಇಪ್ಪತ್ತು ಪಟ್ಟು ಹೆಚ್ಚು ಖರ್ಚುನ್ನು ಜೆಸಿಬಿ (ಜೆಡಿಎಸ್‌‌-ಕಾಂಗ್ರೆಸ್‌-ಬಿಜೆಪಿ) ಪಕ್ಷಗಳು ಎಲ್ಲಾ ವಾರ್ಡ್‌ಗಳಲ್ಲೂ ಮಾಡಿವೆ. ಶಾಸಕ ಸಿ.ಟಿ.ರವಿಯವರೇ ಪ್ರತಿ ಅಭ್ಯರ್ಥಿಗೂ 15 ಲಕ್ಷ ರೂಪಾಯಿಗಳನ್ನು ಚುನಾವಣಾ ಅಕ್ರಮಣಕ್ಕೆ ನೀಡಿರುವುದು ಬಿಜೆಪಿ ಅಭ್ಯರ್ಥಿಯ ಬಾಯಿಂದಲೇ ಬಯಲಾಗಿದೆ ಎಂದು ದೂರಿದ್ದಾರೆ.

ಜೊತೆಗೆ ನಗರದ ಹಲವಾರು ವಾರ್ಡ್‌‌ಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹಣ ಹಂಚುತ್ತಿರುವ ಫೋಟೋಗಳೂ ಎಎಪಿಗೆ ಲಭ್ಯವಾಗಿದೆ. ರಾಜಾರೋಷವಾಗಿ ಚುನಾವಣೆಯಲ್ಲಿ ಹಣ, ಮದ್ಯ ಹಂಚಿಕೆಯಾದರೂ ಚಿಕ್ಕಮಗಳೂರು ನಗರಸಭೆಯ ಚುನಾವಣಾ ಆಯುಕ್ತರು ರಾಜಕೀಯ ಪಕ್ಷಗಳ ಕಾವಲುಗಾರರಂತೆ ಕಾರ್ಯನಿರ್ವಹಿಸಿದ್ದು ಹಲವಾರು ಸಂಶಯಗಳಿಗೆ ಆಸ್ಪದ ಮಾಡಿಕೊಟ್ಟಿದೆ ಎಂದು ಆರೋಪಿಸಿದ್ದಾರೆ.

ಚಿಕ್ಕಮಗಳೂರು ನಗರಸಭೆಯ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳ ಸದಸ್ಯತ್ವವನ್ನು ರದ್ದುಪಡಿಸಬೇಕು. ಸ್ಥಳೀಯ ಶಾಸಕ ಸಿ.ಟಿ.ರವಿ ಮತ್ತು ಗೆದ್ದ ಅಭ್ಯರ್ಥಿಗಳ ವಿರುದ್ಧ ಸ್ವತಂತ್ರ ನ್ಯಾಯಾಂಗ ತನಿಖೆಯಾಗಬೇಕು ಎಂದು ಆಗ್ರಹಿಸುತ್ತದೆ. ಜಿಲ್ಲಾಧಿಕಾರಿ ಮತ್ತು ಚುನಾವಣಾ ಆಯುಕ್ತರು ರಾಜಕೀಯ ಪಕ್ಷಗಳ ಕಾವಲುಗಾರಂತೆ ಕಾರ್ಯನಿರ್ವಹಿಸಿದ್ದಾರೆ. ಇದು ಹಲವಾರು ಸಂಶಯಗಳಿಗೆ ಆಸ್ಪದ ಮಾಡಿಕೊಟ್ಟಿದೆ ಎಂದಿದ್ದಾರೆ.

ಚಿಕ್ಕಮಗಳೂರಿನ ನಗರಸಭೆಯ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳ ಸದಸ್ಯತ್ವವನ್ನು ರದ್ದುಪಡಿಸಬೇಕು, ಸ್ಥಳೀಯ ಶಾಸಕ ಸಿ.ಟಿ.ರವಿ ಮತ್ತು ಗೆದ್ದ ಅಭ್ಯರ್ಥಿಗಳ ವಿರುದ್ಧ ಸ್ವತಂತ್ರ ನ್ಯಾಯಾಂಗ ತನಿಖೆಯಾಗಬೇಕು ಎಂದು ಆಮ್‌ ಆದ್ಮಿ ಪಕ್ಷವು ಜಿಲ್ಲಾಧಿಕಾರಿಗಳು ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದೆ. ಚಿಕ್ಕಮಗಳೂರಿನ ಇತಿಹಾಸದಲ್ಲೇ ಕಪ್ಪುಚುಕ್ಕೆಯಾದಂತಹ ನಗರಸಭೆ ಚುನಾವಣಾ ಆಕ್ರಮ ವಿರುದ್ಧ ಎಎಪಿ ಕಾನೂನು ಹೋರಾಟ ನಡೆಸಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...