Homeಕರ್ನಾಟಕರಸ್ತೆಯಲ್ಲಿ ಸಾವು-ಬದುಕಿನ ನಡುವೆ ನರಳುತ್ತಿದ್ದ ಆರೋಗ್ಯಾಧಿಕಾರಿಗೆ ಸಹಾಯ ಮಾಡದ ಆರೋಪ- ನಿದ್ರಿಸುತ್ತಿದ್ದೆ ಗೊತ್ತಾಗಲಿಲ್ಲ ಎಂದ ಬಿಜೆಪಿ...

ರಸ್ತೆಯಲ್ಲಿ ಸಾವು-ಬದುಕಿನ ನಡುವೆ ನರಳುತ್ತಿದ್ದ ಆರೋಗ್ಯಾಧಿಕಾರಿಗೆ ಸಹಾಯ ಮಾಡದ ಆರೋಪ- ನಿದ್ರಿಸುತ್ತಿದ್ದೆ ಗೊತ್ತಾಗಲಿಲ್ಲ ಎಂದ ಬಿಜೆಪಿ ಶಾಸಕ!

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಲಕ್ಕವಳಿ ಬಳಿ ನಡೆದ ಅಪಘಾತದಲ್ಲಿ ಆರೋಗ್ಯಾಧಿಕಾರಿಯೊಬ್ಬರು ರಸ್ತೆಯಲ್ಲಿ ಸಾವು-ಬದುಕಿನ ನಡುವೆ ನರಳುತ್ತಿದ್ದರು ಬಿಜೆಪಿ ಶಾಸಕ ಡಿ.ಎಸ್. ಸುರೇಶ್ ಸಹಾಯ ಮಾಡಲು ಕಾರಿನಿಂದ ಕೆಳಗಿಳಿಯದೆ, ದರ್ಪ ತೋರಿದ್ದಾರೆ. ಸಹಾಯ ಮಾಡಿದ್ದರೇ ಕೊರೊನಾ ವಾರಿಯರ್‌ ಉಳಿಯುತ್ತಿದ್ದರು ಎಂಬ ಆರೋಪವನ್ನು ಸ್ಥಳೀಯರು ಮಾಡಿದ್ದರು.

ತರೀಕೆರೆ ತಾಲೂಕಿನ ಬಿಜೆಪಿ ಶಾಸಕ ಡಿ.ಎಸ್. ಸುರೇಶ್  ಕಾರಿನಿಂದ ಇಳಿದು ಸ್ಪಲ್ಪ ಮಾನವೀಯತೆ ತೋರಿ ಆಸ್ಪತ್ರೆಗೆ ಸಾಗಿಸಿದ್ದರೂ  ಆರೋಗ್ಯಾಧಿಕಾರಿಯ ಪ್ರಾಣ ಉಳಿಯುತ್ತಿತ್ತು. ಆದರೆ, ಚಿಕಿತ್ಸೆ ಸಿಗುವುದು ತಡವಾಗಿದ್ದರಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

ಹಿರಿಯ ಆರೋಗ್ಯಾಧಿಕಾರಿ ರಮೇಶ್ ಬೈಕ್​ಗೆ ತರೀಕೆರೆಯ ಲಕ್ಕವಳ್ಳಿ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಅಪಘಾತವಾಗಿತ್ತು. ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲು ಸ್ಥಳೀಯರು ಆ್ಯಂಬುಲೆನ್ಸ್​ಗೆ ಫೋನ್ ಮಾಡಿದ್ದರು. ಅದೇ ದಾರಿಯಲ್ಲಿ ಬಂದ ತರೀಕೆರೆ ಬಿಜೆಪಿ ಶಾಸಕ ಡಿ.ಎಸ್. ಸುರೇಶ್ ಕಾರು ರಸ್ತೆಯಲ್ಲೇ ನಿಲ್ಲಿಸಿದ್ದರು. ಸಹಾಯ ಮಾಡಲು ಕಾರಿನಿಂದ ಕೆಳಿಗೆ ಇಳಿಯಲೇ ಇಲ್ಲ. ಕಾರಿನ ಚಾಲಕ ಮತ್ತು ಗನ್‌ಮ್ಯಾನ್ ಮಾತ್ರ ಹೊರ ಬಂದು ಘಟನೆ ನೋಡಿದ್ದಾರೆ.

ಅಪಘಾತ ನಡೆದು ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿ ರಕ್ತದ ಮಡುವಿನಲ್ಲೇ ಒದ್ದಾಡಿದ ಕೊರೊನಾ ವಾರಿಯರ್ ಆರೋಗ್ಯಾಧಿಕಾರಿ ನೋವಿನಿಂದ ನರಳಾಡುತ್ತಿದ್ದರು.  ನಂತರ ಆ್ಯಂಬುಲೆನ್ಸ್​ನಲ್ಲಿ ಅವರನ್ನು ಶಿವಮೊಗ್ಗಕ್ಕೆ ಕರೆದುಕೊಂಡು ಹೋಗುವಾಗ, ತೀವ್ರ ರಕ್ತಸ್ರಾವದಿಂದ ಮಾರ್ಗಮಧ್ಯೆಯೇ ಆರೋಗ್ಯಾಧಿಕಾರಿ ರಮೇಶ್ ಸಾವನ್ನಪ್ಪಿದ್ದಾರೆ. ಮಾನವೀಯತೆ ಮರೆತ ಶಾಸಕರ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ವಿಡಿಯೋದಲ್ಲೂ ನೋಡಬಹುದಾಗಿದೆ.

ಇದನ್ನೂ ಓದಿ: ‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಶಾಸಕ ಸುರೇಶ್, ನನಗೆ ಕಣ್ಣು ಬೇನೆ ಇದ್ದು ಕಾರಿನಲ್ಲಿ ನಿದ್ದೆ ಮಾಡುತ್ತಿದ್ದೆ. ಅಪಘಾತದ ಘಟನೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.

’ಕಣ್ಣು ಬೇನೆ ಇದ್ದ ಕಾರಣ ಮಾತ್ರೆ ನುಂಗಿ, ಕಣ್ಣಿಗೆ ಔಷಧಿ ಹಾಕಿಕೊಂಡು ಕಾರಿನಲ್ಲಿ ನಿದ್ದೆ ಮಾಡುತ್ತಿದೆ. ಅಪಘಾತ ನಡೆದಿರುವುದು ನನ್ನ ಗಮನಕ್ಕೆ ಬಂದಿಲ್ಲ. ಆ ರಸ್ತೆಯಲ್ಲಿ ಅಷ್ಟು ಗಲಾಟೆ ಕೂಡ ಇರಲಿಲ್ಲ. ಅಪಘಾತ ನಡೆದಿರುವುದು ಕಂಡು ನನ್ನ ಕಾರು ಚಾಲಕ ಮತ್ತು ಗನ್‌ಮ್ಯಾನ್ ಇಬ್ಬರು ಕಾರು ನಿಲ್ಲಿಸಿ, ಗಾಯಾಳುವಿನ ನೆರವಿಗೆ ಹೋಗಿದ್ದಾರೆ. ನಾನು ನಿದ್ದೆ ಮಾಡುತ್ತಿದ್ದೆ ನನಗೆ ತಿಳಿದಿಲ್ಲ” ಎಂದಿದ್ದಾರೆ.

’ಕರೆ ಮಾಡಿದ ಒಂದೆರಡು ನಿಮಿಷದಲ್ಲೇ ಆಂಬ್ಯುಲೆನ್ಸ್ ಬಂದಿದ್ದರಿಂದ  ನನ್ನ ಕಾರನ್ನು ಬಳಸಿಲ್ಲ. ನಂತರ ಆಸ್ಪತ್ರೆಗೆ ಸಾಗಿಸಿದ್ದಾರೆ. ಇಷ್ಟರಲ್ಲಿ ಯಾರೋ ಕಿಡಿಗೇಡಿಗಳು ನನ್ನ ವಿರುದ್ಧ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ’ ಎಂದು ತರೀಕೆರೆ ಶಾಸಕ ಸುರೇಶ್ ಹೇಳಿದ್ದಾರೆ.


ಇದನ್ನೂ ಓದಿ: ಮಾನವೀಯತೆಯ ಸಾಕ್ಷಿಪ್ರಜ್ಞೆಯಾಗಿ ಉಳಿದ ಜಾರ್ಜ್‌ ಫ್ಲಾಯ್ಡ್‌ ಹತ್ಯೆಗೆ ಒಂದು ವರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...