Homeರಾಷ್ಟ್ರೀಯದೇಶವನ್ನು ‘ಹಿಂದೂ ರಾಷ್ಟ್ರ’ ಮಾಡುವುದಾಗಿ ಪ್ರತಿಜ್ಞೆ ಮಾಡಿದ ಹರಿಯಾಣದ BJP ಶಾಸಕ

ದೇಶವನ್ನು ‘ಹಿಂದೂ ರಾಷ್ಟ್ರ’ ಮಾಡುವುದಾಗಿ ಪ್ರತಿಜ್ಞೆ ಮಾಡಿದ ಹರಿಯಾಣದ BJP ಶಾಸಕ

- Advertisement -
- Advertisement -

ಹರಿಯಾಣದ ಅಂಬಾಲಾ ನಗರದಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಶಾಸಕ ಅಸೀಮ್ ಗೋಯೆಲ್ ಅವರು ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವ ಪ್ರತಿಜ್ಞೆ ಮಾಡಿ ವಿವಾದ ಸೃಷ್ಟಿಸಿದ್ದಾರೆ. ಶಾಸಕನ ಸಂವಿಧಾನ ವಿರೋಧಿ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ಉಂಟಾಗಿದೆ.

ಡಿಸೆಂಬರ್‌ನಲ್ಲಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇದೇ ರೀತಿಯ ಕೃತ್ಯಗಳಿಗೆ ‘ದ್ವೇಷ ಭಾಷಣ ಪ್ರಕರಣದ’ ವಿಚಾರಣೆ ಎದುರಿಸುತ್ತಿರುವ ಬಿಜೆಪಿ ಪರ ಚಾನೆಲ್ ಸುದರ್ಶನ್ ನ್ಯೂಸ್‌ನ ಪ್ರಧಾನ ಸಂಪಾದಕ ಸುರೇಶ್ ಚವ್ಹಾಂಕೆ ಅವರು ಶಾಸಕನಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಯಕ್ರಮವೂ ಭಾನುವಾರ ನಡೆದಿದ್ದು, ಅದರ ವಿಡಿಯೊದಲ್ಲಿ, ಶಾಸಕ ಗೋಯೆಲ್ ಯಾವುದೇ ಬೆಲೆ ತೆತ್ತಾದರೂ ‘ಹಿಂದೂ ರಾಷ್ಟ್ರ’ದ ಗುರಿಯನ್ನು ಸಾಧಿಸಲು ತ್ಯಾಗ ಮಾಡುವ ಪ್ರತಿಜ್ಞೆ ಮಾಡುವುದನ್ನು ಕಾಣಬಹುದು. ಗೋಯೆಲ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಟ್ವೀಟ್ ಮಾಡಿದ್ದರು.

“ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಮತ್ತು ಹಿಂದೂ ರಾಷ್ಟ್ರವಾಗಿ ಉಳಿಯಲು ನಾವು ಪ್ರತಿಜ್ಞೆ ಮಾಡುತ್ತೇವೆ” ಎಂದು ಸಮಾರಂಭದಲ್ಲಿ ಭಾಗವಹಿಸಿದವರು ತಮ್ಮ ಪ್ರಮಾಣವಚನದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ

“ಅಗತ್ಯವಿದ್ದರೆ, ನಾವು ಅದಕ್ಕಾಗಿ ಯಾವುದೇ ತ್ಯಾಗವನ್ನು ಮಾಡುತ್ತೇವೆ ಅಥವಾ ತೆಗೆದುಕೊಳ್ಳುತ್ತೇವೆ. ಆದರೆ ಯಾವುದೇ ಬೆಲೆ ತೆತ್ತಾದರೂ ನಾವು ದೇಶವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುತ್ತೇವೆ. ನಮ್ಮ ಗುರಿಯನ್ನು ಸಾಧಿಸುವ ಶಕ್ತಿಯನ್ನು ನಮಗೆ ನೀಡುವಂತೆ ನಾವು ನಮ್ಮ ಪೂರ್ವಜರು ಮತ್ತು ನಮ್ಮ ದೇವತೆಗಳನ್ನು ಕೇಳಿಕೊಳ್ಳುತ್ತೇವೆ” ಎಂದು ಅವರು ಪ್ರತಿಜ್ಞೆ ಮಾಡಿದ್ದಾರೆ.

ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗದಿರುವುದು ದುರದೃಷ್ಟಕರ ಎಂದು ಕಾರ್ಯಕ್ರಮದಲ್ಲಿ ಚವ್ಹಾಂಕೆ ಹೇಳಿದ್ದಾರೆ ಎಂದು ಹಿಂದಿ ದಿನಪತ್ರಿಕೆ ದೈನಿಕ್ ಜಾಗರಣ್ ವರದಿ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ರಾಷ್ಟ್ರದ ಭದ್ರತೆಗೆ ಬೆದರಿಕೆಯಾಗಿರುವ ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು: ಸುಪ್ರೀಂ

0
ಪ್ರವಾದಿ ಮೊಹಮ್ಮದ್‌ರವರನ್ನು ನಿಂದಿಸಿದ್ದ ಬಿಜೆಪಿಯ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ಇಡೀ ರಾಷ್ಟ್ರದ ಎದುರು ಕ್ಷಮೆ ಕೇಳಬೇಕೆಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ. ತನ್ನ ಮೇಲೆ ದೇಶಾದ್ಯಂತ ದಾಖಲಾಗಿರುವ ಪ್ರಕರಣಗಳನ್ನು ಒಂದೇ ಎಫ್‌ಐಆರ್‌ಗೆ ವರ್ಗಾಹಿಸುವಂತೆ...