Homeಕರ್ನಾಟಕಹನಿಟ್ರ್ಯಾಪ್ ಮಾಡಲೆಂದೇ ಬಿಜೆಪಿ ಶಾಸಕ ಮುನಿರತ್ನ ಸ್ಟುಡಿಯೋ ಇಟ್ಕೊಂಡಿದ್ದಾರೆ: ಮಾಜಿ ಕಾರ್ಪೊರೇಟರ್ ಆರೋಪ

ಹನಿಟ್ರ್ಯಾಪ್ ಮಾಡಲೆಂದೇ ಬಿಜೆಪಿ ಶಾಸಕ ಮುನಿರತ್ನ ಸ್ಟುಡಿಯೋ ಇಟ್ಕೊಂಡಿದ್ದಾರೆ: ಮಾಜಿ ಕಾರ್ಪೊರೇಟರ್ ಆರೋಪ

- Advertisement -
- Advertisement -

”ರಾಜರಾಜೇಶ್ವರಿ ನಗರದ ಶಾಸಕರಾಗಿರುವ ಮುನಿರತ್ನ ನಾಯ್ಡು ಅವರು ಸಚಿವರಾಗಿದ್ದಾಗ ಹನಿಟ್ರ್ಯಾಪ್ ಮಾಡಿಸುತ್ತಿದ್ದರು. ಹನಿಟ್ರ್ಯಾಪ್ ಮಾಡಲೆಂದೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ” ಎಂದು ಅವರ ಬೆಂಬಲಿಗ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಗಂಭೀರ ಆರೋಪ ಮಾಡಿದ್ದಾರೆ.

ಈ ಹಿಂದೆ ಶಾಸಕ ಮುನಿರತ್ನ ಅವರ ಬೆಂಬಲಿಗರಾಗಿದ್ದ ವೇಲು ನಾಯ್ಕರ್ ಅವರು ರವಿವಾರ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ವೇಲು ನಾಯ್ಕರ್, ”ಹನಿಟ್ರ್ಯಾಪ್ ಮಾಡುವುದು ಹೆದರಿಸುವುದು ಮುನಿರತ್ನ ಅವರ ಕಾಯಕವಾಗಿದೆ. ಜೆ.ಪಿ.ಪಾರ್ಕ್‌, ಡಾಲರ್ಸ್‌ ಕಾಲೋನಿಯಲ್ಲಿ ಇದಕ್ಕಾಗಿಯೇ ಅವರದೊಂದು ಸ್ಟುಡಿಯೋ ಇದೆ. ಅವರು ಸಿನಿಮಾ ನಿರ್ಮಾಪಕರಲ್ಲವೇ… ಹೀಗಾಗಿ ಹನಿಟ್ರ್ಯಾಪ್ ಮಾಡಿಸಿ ಹೆದರಿಸುತ್ತಾರೆ” ಎಂದು ಆರೋಪಿಸಿದರು.

”ಚುನಾವಣೆ ವೇಳೆ ನಿಮ್ಮದು ಈಸ್ಟ್‌ಮನ್ ಕಲರ್ ಪಿಕ್ಚರ್‌ ಇದೆ ತೋರಿಸಲಾ? ಇಲ್ಲ ಕೆಲಸ ಮಾಡುತ್ತೀರಾ ಎಂದು ಹೆದರಿಸುತ್ತಿದ್ದರು. ಮುನಿರತ್ನ ನಿರ್ಮಾಪಕನಾಗಿ ಮಾಡಿದ ಮೊದಲ ಚಿತ್ರ ಆಂಟಿ ಪ್ರೀತ್ಸೆ. ಹೀಗಾಗಿ ಮುನಿರತ್ನ ಸಚಿವರಾದ ಮೇಲೂ ಬರೀ ಆಂಟಿಗಳೇ ಇರುತ್ತಿದ್ದರು. ವಿಕಾಸಸೌಧ, ವಿಧಾನಸೌಧ ಚೇಂಬರ್‌ನಲ್ಲೆಲ್ಲಾ ಬರೀ ಆಂಟಿಗಳೇ ಇರುತ್ತಿದ್ದರು” ಎಂದು ಮುನಿರತ್ನ ವಿರುದ್ಧ ಆರೋಪಗಳ ಪಟ್ಟಿಯನ್ನೇ ಹೇಳಿದರು.

ಈಗಾಗಲೇ ಕಾಂಗ್ರೆಸ್ ಪಕ್ಷ ರಾಜ್ಯ ವಿಧಾನಸಭೆ ಚುನಾವಣೆಯನ್ನು ಭರ್ಜರಿಯಾಗಿಯೇ ಗೆದ್ದಿದೆ. ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗುತ್ತಿದ್ದು, ಇದಕ್ಕಾಗಿ ಆಡಳಿತರೂಢ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದೆ. ಬಿಬಿಎಂಪಿ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಸದ್ದಿಲ್ಲದೇ ಆಪರೇಷನ್ ಹಸ್ತ ಮಾಡಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ಬೆಂಬಲಿಗರನ್ನು ಕಾಂಗ್ರೆಸ್​ಗೆ ಸೆಳೆಯುವಲ್ಲಿ ಯಶಸ್ಸು ಗಳಿಸಿದ್ದಾರೆ.

ಮುನಿರತ್ನ ಅವರಿಗೆ ಪರಮಾಪ್ತರ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಮಾಜಿ ಬಿಬಿಎಂಪಿ ಸದಸ್ಯರುಗಳಾದ ವೇಲು ನಾಯ್ಕರ್​, ಮೋಹನ್​ ಕುಮಾರ್​ ಹಾಗೂ ಶ್ರೀನಿವಾಸ ಮೂರ್ತಿ ಇದೀಗ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದಾರೆ.

ಇದನ್ನೂ ಓದಿ: ಅಕ್ರಮ ಗಣಿಗಾರಿಕೆ: ಮಾಜಿ ಸಚಿವ ಮುನಿರತ್ನ ಸೇರಿ ನಾಲ್ವರ ವಿರುದ್ಧ FIR ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

0
ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ. ಚುನಾವಣಾ...