Homeಮುಖಪುಟಗೌರಿ, ದಾಬೋಲ್ಕರ್ ಹತ್ಯೆ ಆರೋಪಿಗಳನ್ನು ಪ್ರತಿನಿಧಿಸುವ ವಕೀಲರನ್ನು ಸನ್ಮಾನಿಸಿದ ಬಿಜೆಪಿ ಶಾಸಕ ರಾಜಾ ಸಿಂಗ್

ಗೌರಿ, ದಾಬೋಲ್ಕರ್ ಹತ್ಯೆ ಆರೋಪಿಗಳನ್ನು ಪ್ರತಿನಿಧಿಸುವ ವಕೀಲರನ್ನು ಸನ್ಮಾನಿಸಿದ ಬಿಜೆಪಿ ಶಾಸಕ ರಾಜಾ ಸಿಂಗ್

- Advertisement -
- Advertisement -

ಹಿಂದೂ ಜನಜಾಗೃತಿ ಸಮಿತಿ ಎಂಬ ಹಿಂದುತ್ವ ಗುಂಪು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಆರೋಪಿಗಳನ್ನು ಪ್ರತಿನಿಧಿಸುವ ವಕೀಲರನ್ನು ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಸನ್ಮಾನಿಸಿದ್ದಾರೆ. ಈ ಗುಂಪನ್ನು ಸನಾತನ ಸಂಸ್ಥಾದ ಒಂದು ಉಗ್ರ ಹಿಂದುತ್ವ ಗುಂಪು ಎಂದು ಪರಿಗಣಿಸಲಾಗಿದೆ.

ಹೈದರಾಬಾದ್‌ನಲ್ಲಿ 101 ಪ್ರಕರಣಗಳನ್ನು ಎದುರಿಸಿದ ರಾಜಾ ಸಿಂಗ್, ಅದರಲ್ಲಿ 18 ಕೋಮುವಾದಿ ಪ್ರಕರಣಗಳಾಗಿವೆ. ಜೂನ್ 24 ಮತ್ತು 30 ರ ನಡುವೆ ಗೋವಾದಲ್ಲಿ ನಡೆದ ವೈಶ್ವಿಕ್ ಹಿಂದೂ ರಾಷ್ಟ್ರ ಮಹೋತ್ಸವದಲ್ಲಿ ನಾಲ್ವರು ವಕೀಲರನ್ನು ರಾಜಾಸಿಂಗ್ ಸನ್ಮಾನಿಸಿದರು.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳ ಪರ ವಕಾಲತ್ತು ವಹಿಸಿರುವ ಪಿ ಕೃಷ್ಣಮೂರ್ತಿ, ಉಮಾಶಂಕರ್ ಮೇಗುಂಡಿ, ದಿವ್ಯಾ ಮೇಗುಂಡಿ ಮತ್ತು ಅವಿನಾಶ ಮಸೂತಿ ಅವರನ್ನು ಅವರು ಸನ್ಮಾನಿಸಿದರು.

ಗೌರಿ ಅವರನ್ನು ಸೆಪ್ಟೆಂಬರ್ 5, 2017 ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಹತ್ಯೆ ಮಾಡಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಹಿಂದೂ ಜನಜಾಗೃತಿ ಸಮಿತಿಯ ಮಾಜಿ ಮುಖಂಡ ಅಮೋಲ್ ಕಾಳೆ ಎಂಬಾತ ಗೌರಿ ಹತ್ಯೆಗೆ ಸಂಚು ರೂಪಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಗೌರಿ ಹತ್ಯೆಯ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡವು 18 ಜನರನ್ನು ಪತ್ತೆ ಮಾಡಿದೆ

ಹಿಂದೂ ಜನಜಾಗೃತಿ ಸಮಿತಿಯ ಕರ್ನಾಟಕ ರಾಜ್ಯ ವಕ್ತಾರರು ಅಭಿನಂದನೆಯ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ನರೇಂದ್ರ ದಾಭೋಲ್ಕರ್ ಹತ್ಯೆಯ ಆರೋಪಿಗಳನ್ನು ಪ್ರತಿನಿಧಿಸಿದ ವಕೀಲರಾದ ಪ್ರಕಾಶ್ ಸಾಲ್ಸಿಂಕರ್, ಘನಶ್ಯಾಮ್ ಉಪಾಧ್ಯಾಯ, ಮೃಣಾಲ್ ವ್ಯಾವಹರೆ ಸಾಖರೆ ಮತ್ತು ಸ್ಮಿತಾ ದೇಸಾಯಿ ಅವರನ್ನು ರಾಜಾ ಸಿಂಗ್ ಸನ್ಮಾನಿಸಿದರು. ದಾಭೋಲ್ಕರ್ ಮಹಾರಾಷ್ಟ್ರ ಅಂಧಶ್ರಾದ್ಧ ನಿರ್ಮೂಲನ ಸಮಿತಿಯನ್ನು ಸ್ಥಾಪಿಸಿದ ವಿಚಾರವಾದಿ. 2013ರ ಆಗಸ್ಟ್ 13ರಂದು ಪುಣೆಯ ಓಂಕಾರೇಶ್ವರ ದೇವಸ್ಥಾನದ ಬಳಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪುಣೆಯ ವಿಶೇಷ ನ್ಯಾಯಾಲಯವು ಮೇ 2024 ರಲ್ಲಿ ದಾಭೋಲ್ಕರ್ ಅವರನ್ನು ಹತ್ಯೆಗೈದ ಇಬ್ಬರು ವ್ಯಕ್ತಿಗಳಾದ ಸಚಿನ್ ಅಂದುರೆ ಮತ್ತು ಶರದ್ ಕಲಾಸ್ಕರ್ ದೋಷಿ ಎಂದು ತೀರ್ಪು ನೀಡಿದೆ. ಗೌರಿ ಹತ್ಯೆಯ ಆರೋಪಿಗಳಲ್ಲಿ ಕಲಾಸ್ಕರ್ ಕೂಡ ಒಬ್ಬ.

ಸಮಿತಿಯ ವೆಬ್‌ಸೈಟ್ ಪ್ರಕಾರ, ದೇಶಾದ್ಯಂತದ ಸುಮಾರು 800 ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ; ಗಿಗ್‌ ಕಾರ್ಮಿಕರ ಕಲ್ಯಾಣ ಮಂಡಳಿ : ಕರಡು ಮಸೂದೆ ಪ್ರಕಟಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...