ಬಾಗಲಕೋಟೆಯ ಮಹಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವೇಳೆ ತೇರದಾಳದ ಬಿಜೆಪಿ ಶಾಸಕ ಸಿದ್ದು ಸವದಿ ಅಧ್ಯಕ್ಷೆ ಸ್ಥಾನದ ಆಕಾಂಕ್ಷಿಯಾದ ಸವಿತಾ ಹುರಕಡ್ಲಿ ಅವರನ್ನು ಪೊಲೀಸರ ಸಮ್ಮುಖದಲ್ಲೇ ಎಳೆದಾಡಿ ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ.
ಮುಧೋಳ ತಾಲೂಕಿನ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮತ ಚಲಾಯಿಸಲು ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ ಅವರು ತೆರಳುತ್ತಿದ್ದರು. ಈ ವೇಳೆ ಸವಿತಾ ಅವರು ಕಾಂಗ್ರೆಸ್ ಪರ ಮತ ಚಲಾಯಿಸಲು ತೆರಳುತ್ತಿದ್ದಾರೆ ಎಂಬ ಮಾಹಿತಿ ಪಡೆದ ಶಾಸಕ ಸಿದ್ದು ಸವದಿ ಅವರನ್ನು ಎಳೆದಾಡಿದ್ದಾರೆ ಎನ್ನಲಾಗಿದ್ದು, ಈ ವೇಳೆ ಅವರು ಕೆಳಗಡೆ ಬಿದ್ದಿದ್ದಾರೆ.
ಶಾಸಕ ಸಿದ್ದು ಸವದಿ ಸೇರಿದಂತೆ ಇತರರು ಮಹಿಳೆಯ ಕೈ, ಸೊಂಟ ಹಿಡಿದು ಎಳೆದಾಡಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಇದರ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿದೆ.ಇದನ್ನೂ ಓದಿ: ವೇಶ್ಯಾವಾಟಿಕೆ ನಡೆಸುತ್ತಿದ್ದ BJP ಮಹಿಳಾ ಮೋರ್ಚಾ ಅಧ್ಯಕ್ಷೆ ಬಂಧನ
ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಘಟನೆಯನ್ನು ಖಂಡಿಸಿದ್ದು, “ಬಾಗಲಕೋಟೆಯ ಮಹಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವೇಳೆ ತೇರದಾಳದ ಬಿಜೆಪಿ ಶಾಸಕ ಸಿದ್ದು ಸವದಿ ಅವರು ಅಧ್ಯಕ್ಷೆ ಸ್ಥಾನದ ಆಕಾಂಕ್ಷಿಯಾದ ಸವಿತಾ ಹುರಕಡ್ಲಿ ಅವರ ಮೈಮುಟ್ಟಿ ಎಳೆದಾಡಿರುವುದು ಬಿಜೆಪಿಯ ಸಂಸ್ಕೃತಿಯನ್ನು ತೋರಿಸುತ್ತಿದೆ. ಬೇರೆ ಪ್ರಕರಣದಲ್ಲಿ ಪೊಲೀಸರು ಸುಮೋಟೋ ಕೇಸ್ ಹಾಕುತ್ತಾರೆ. ಆದರೆ, ಇದುವರೆಗೂ ಈ ಪ್ರಕರಣದಲ್ಲಿ ಕ್ರಮ ಕೈಗೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯಲ್ಲಿ ತಮ್ಮ ವಿರುದ್ದ ಮಾಡುತ್ತಿರುವ ಆರೋಪವನ್ನು ಸಿದ್ದು ಸವದಿ ತಳ್ಳಿಹಾಕಿದ್ದು, “ನಮ್ಮ ಪಕ್ಷದ ಸದಸ್ಯೆ ಸವಿತಾ ಹುರಕಡ್ಲಿ ಅವರನ್ನು ಕಾಂಗ್ರೆಸ್ನವರು ಅಪಹರಿಸಿದ್ದರು. ನಾನು ಅವರ ರಕ್ಷಣೆ ಮಾಡಲು ಪ್ರಯತ್ನಿಸಿದ್ದೆ. ಕಾಂಗ್ರೆಸ್‌ನವರೇ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದರು” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಜಾತಿಕಾರಣ: ಗ್ರಾಮಪಂಚಾಯಿತಿ ಅಧ್ಯಕ್ಷೆಯನ್ನು ನೆಲದ ಮೇಲೆ ಕೂರಿಸಿದ ಸದಸ್ಯರು!



ಈ ಮನುವಾದಿ ಶಾಸಕನ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಜರುಗಿಸಬೇಕು.