Homeಮುಖಪುಟಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

ಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

- Advertisement -
- Advertisement -

ಮುಸ್ಲಿಮರ ಮತದಾನದ ಹಕ್ಕನ್ನು ಹಿಂಪಡೆಯುವಂತೆ ಬಿಹಾರದ ಬಿಜೆಪಿ ಶಾಸಕ ಹರಿಭೂಷಣ್ ಠಾಕೂರ್ ಅವರು ಗುರುವಾರ ಒತ್ತಾಯಿಸಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರ ಹಕ್ಕುಗಳನ್ನು ನೀಡಬೇಕು ಎಂದು ಎಐಎಂಐಎಂ ನಾಯಕ ಅಖ್ತರುಲ್ ಇಮಾಮ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ಮಾತನ್ನು ಹೇಳಿದ್ದಾರೆ. 1947ರಲ್ಲಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗ ಮುಸ್ಲಿಂ ಸಮುದಾಯಕ್ಕೆ ಪಾಕಿಸ್ತಾನದ ರೂಪದಲ್ಲಿ ತುಂಡು ಭೂಮಿ ನೀಡಲಾಗಿತ್ತು. ಅವರು ಅಲ್ಲಿಗೆ ಹೋಗಬೇಕಿತ್ತು. ಅವರು ಈ ದೇಶದಲ್ಲಿ ನಮಗೆ ಬೇಡ ಎಂದು ಠಾಕೂರ್ ಹೇಳಿದ್ದಾರೆ.

“ಮುಸ್ಲಿಮರು ಜನಸಂಖ್ಯೆಯನ್ನು ಹೆಚ್ಚಿಸುತ್ತಿದ್ದಾರೆ ಮತ್ತು ಭಾರತವನ್ನು ಮುಸ್ಲಿಂ ದೇಶವನ್ನಾಗಿ ಮಾಡಲು ಬಯಸುತ್ತಾರೆ. ಮುಸ್ಲಿಂ ನಾಯಕರು ಪ್ರತಿ ದೇಶವನ್ನು ಇಸ್ಲಾಮಿಕ್ ರಾಜ್ಯವನ್ನಾಗಿ ಮಾಡುವ ಕಾರ್ಯಸೂಚಿಯನ್ನು ಹೊಂದಿದ್ದಾರೆ. ಹಾಗೆ ಆಗಲು ನಾವು ಬಿಡಲಾರೆವು. ಆದ್ದರಿಂದ ನಾವು ಅವರಿಂದ ಮತದಾನದ ಹಕ್ಕುಗಳನ್ನು ಹಿಂಪಡೆದು ಅವರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡಬೇಕೆಂದು ನಾವು ಸರ್ಕಾರವನ್ನು ಒತ್ತಾಯಿಸಿದ್ದೇವೆ” ಎಂದು ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದೂ, ಮುಸ್ಲಿಂ ಯುವ ಮಿತ್ರರಿಗೆ ಶಿಕ್ಷಣ ತಜ್ಞ ಎಂ.ಜಿ.ಹೆಗಡೆ ಪತ್ರ

ದೇಶದಲ್ಲಿ ಅವರನ್ನು ಅಲ್ಪಸಂಖ್ಯಾತರು ಎಂದು ಪರಿಗಣಿಸಲಾಗುತ್ತದೆ ಎಂದು ಠಾಕೂರ್ ಹೇಳಿದ್ದಾರೆ. “ಮುಸ್ಲಿಮ್ ಸಮುದಾಯಕ್ಕೆ ಅಲ್ಪಸಂಖ್ಯಾತ ಎಂಬ ಪದವು ಸಂವಿಧಾನದ ಅಪಹಾಸ್ಯ ಎಂದು ನಾನು ಹೇಳುತ್ತೇನೆ. ಅವರು ಅಲ್ಪಸಂಖ್ಯಾತರಲ್ಲ. ಅವರ ಜನಸಂಖ್ಯೆಯು ನಿರಂತರವಾಗಿ ಹೆಚ್ಚುತ್ತಿದೆ” ಎಂದು ಅವರು ಹೇಳಿದ್ದಾರೆ.

ಈ ಹಿಂದೆ, ಅಖ್ತರುಲ್ ಇಮಾಮ್ ಅವರು ಮತ್ತು ಎಐಎಂಐಎಂನ ಇತರ ಸದಸ್ಯರು ವಂದೇ ಮಾತರಂ ಅನ್ನು ಯಾವುದೇ ಸಾರ್ವಜನಿಕ ವೇದಿಕೆಗಳಲ್ಲಿ ವಿಶೇಷವಾಗಿ ಬಿಹಾರ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಹಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು.

ಸಂಪ್ರದಾಯದ ಪ್ರಕಾರ, ಬಿಹಾರ ವಿಧಾನಸಭಾ ಅಧಿವೇಶನಗಳು ರಾಷ್ಟ್ರಗೀತೆ ಜನ ಗಣ ಮನ ಮತ್ತು ವಂದೇ ಮಾತರಂನೊಂದಿಗೆ ಪ್ರಾರಂಭವಾಗುತ್ತವೆ ಅಥವಾ ಕೊನೆಗೊಳ್ಳುತ್ತವೆ.

ವಂದೇ ಮಾತರಂ ಹಾಡುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ಅಖ್ತರುಲ್‌ ಇಮಾಮ್ ಹೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

“ರಾಷ್ಟ್ರಗೀತೆಯನ್ನು ಹಾಡಲು ನನಗೆ ಯಾವುದೇ ಅಭ್ಯಂತರವಿಲ್ಲ, ಆದರೆ ವಂದೇ ಮಾತರಂ ಹೇಳಲು ಅಥವಾ ಹಾಡಲು ನನ್ನ ವಿರೋಧವಿದೆ. ವಂದೇ ಮಾತರಂ ಬದಲಿಗೆ, ನಾನು ಸಂತೋಷದಿಂದ ‘ಮದರ್‌-ಎ-ವತನ್’ ಎಂದು ಹೇಳುತ್ತೇನೆ” ಎಂದು ಇಮಾಮ್‌ ಹೇಳಿದ್ದಾರೆ.

“ವಂದೇ ಮಾತರಂ ಭೂಮಿ ಮತ್ತು ಇಸ್ಲಾಂ ಅನುಮತಿಸದ ವಸ್ತುಗಳನ್ನು ಪೂಜಿಸುವಂತೆ ಹೇಳುತ್ತದೆ. ಆದ್ದರಿಂದ, ಅದನ್ನು ನಾವು ಯಾವುದೇ ವೇದಿಕೆಯಲ್ಲಿ ಹಾಡಲು ನಿರಾಕರಿಸುತ್ತೇವೆ. ಬಿಹಾರದಲ್ಲಿ ಎನ್‌ಡಿಎ ಸರ್ಕಾರ ಬಹುಮತ ಹೊಂದಿದೆ. ಅವರು ವಿಧಾನ ಸಭಾ ಕಲಾಪದಿಂದ ವಂದೇ ಮಾತರಂ ಗೀತೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಭಾರತದ ಪ್ರಜಾಪ್ರಭುತ್ವವನ್ನು ಪ್ರದರ್ಶಿಸಲು ಅವರು ಪ್ರತಿಯೊಂದು ಜಾತಿ ಮತ್ತು ಧರ್ಮವನ್ನು ಗೌರವಿಸಬೇಕು” ಎಂದು ಇಮಾಮ್ ಹೇಳಿದ್ದಾರೆ.

“ವಿಧಾನಸಭಾ ಸ್ಪೀಕರ್ ವಿಜಯ್ ಸಿನ್ಹಾ ಅವರು ಉಭಯ ಸದನಗಳಲ್ಲಿ ಪ್ರತಿಯೊಬ್ಬ ಸದಸ್ಯರು ರಾಷ್ಟ್ರಗೀತೆ ಮತ್ತು ವಂದೇಮಾತರಂ ಹಾಡುವುದನ್ನು ಕಡ್ಡಾಯಗೊಳಿಸಿದ್ದಾರೆ. ಇದನ್ನು ಅನುಸರಿಸದವರ ಸದನದ ಸದಸ್ಯತ್ವವನ್ನು ಸ್ಪೀಕರ್ ರದ್ದುಗೊಳಿಸಬೇಕು. ಎಐಎಂಐಎಂ ನಾಯಕರ ವರ್ತನೆ ನಮ್ಮ ದೇಶಕ್ಕೆ ಮಾಡಿದ ಅವಮಾನ. ವಂದೇ ಮಾತರಂ ಹಾಡಲು ಅವರಿಗೇಕೆ ಆಕ್ಷೇಪ?” ಎಂದು ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಸದ್ದಿಲ್ಲದೆ ಮುಸ್ಲಿಂ ವಿದ್ಯಾರ್ಥಿಗಳ ಡಾಟಾ ಸಂಗ್ರಹಿಸುತ್ತಿರುವ ರಾಜ್ಯ ಸರ್ಕಾರ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...