Homeಮುಖಪುಟಬಿಜೆಪಿ ಶಾಸಕರ ಸಂಬಂಧಿ ಸೇರಿ 11 ಮಂದಿ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ...

ಬಿಜೆಪಿ ಶಾಸಕರ ಸಂಬಂಧಿ ಸೇರಿ 11 ಮಂದಿ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲು

- Advertisement -
- Advertisement -

ದಲಿತ ಸಮುದಾಯದ ಜನರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ  ಬಿಜೆಪಿ ಶಾಸಕರ ಸೋದರಳಿಯ ಮತ್ತು ಇತರ 11 ಮಂದಿಯ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ವೈರಲ್ ವಿಡಿಯೋದಲ್ಲಿ  ಬಿಜೆಪಿಯ ತುಳಸಿಪುರ ಶಾಸಕ ಕೈಲಾಶ್ ನಾಥ್ ಶುಕ್ಲಾ ಅವರ ಸೋದರಳಿಯ ಸೋನು ಶುಕ್ಲಾ, ಇತರರೊಂದಿಗೆ ಸೇರಿ ತಹಸಿಲ್ ಗೇಟ್ ಬಳಿ ಕೆಲವು ದಲಿತರನ್ನು ದೊಣ್ಣೆಗಳಿಂದ ಹೊಡೆಯುತ್ತಿರುವುದು ಕಂಡುಬಂದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೇಶವ್ ಕುಮಾರ್ ಹೇಳಿದ್ದಾರೆ.

ಒಂದು ತಿಂಗಳ ಹಿಂದೆ ಘಟನೆ ನಡೆದಿದೆ ಎನ್ನಲಾಗದ್ದು, ಈ ಕುರಿತ  ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ  ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಸೇಖುಕಾಲನ್ ನಿವಾಸಿ ರಾಕೇಶ್ ಎಂಬುವವರ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಆದರೆ ಶಾಸಕ ಕೈಲಾಶ್ ನಾಥ್ ಶುಕ್ಲಾ ಈ ಆರೋಪವನ್ನು ತಳ್ಳಿಹಾಕಿದ್ದು,  ಕೆಲವರು ತಮ್ಮ ಗಣತೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಕುಡಿದ ಮತ್ತಿನಲ್ಲಿ ಇದ್ದ ಕೆಲ ಜನರು ನನ್ನ  ಸೋದರಳಿಯನ  ಅಂಗಡಿಗೆ ನುಗ್ಗಿ ಅಲ್ಲಿ ನೌಕರರಿಗೆ ಥಳಿಸಿದ್ದಾರೆ ಎಂದು  ನಾನು ಪೊಲೀಸರಿಗೆ ತಿಳಿಸಿರುವುದಾಗಿ ಹೇಳಿದ್ದಾರೆ.

ಇದನ್ನು ಓದಿ: ವಿಶ್ವ ಅಥ್ಲೆಟಿಕ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್‌ ಚೋಪ್ರಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಕಿತ್ತುಹಾಕುತ್ತದೆ: ರಾಹುಲ್ ಗಾಂಧಿ

0
"ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಬಡವರು, ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳಿಗೆ ಹಕ್ಕುಗಳನ್ನು ನೀಡಿರುವ ಸಂವಿಧಾನವನ್ನು ಒಡೆದು, ಎಸೆದುಬಿಡುತ್ತದೆ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ. ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ...