Homeಕರ್ನಾಟಕಕೊರೊನಾ ಇಲ್ಲದಿರುತ್ತಿದ್ದರೆ ಇಷ್ಟೊತ್ತಿಗಾಗಲೇ BJP ಶಾಸಕರು ರೆಸಾರ್ಟ್ ಸೇರಿರುತ್ತಿದ್ದರು: ಕಾಂಗ್ರೆಸ್‌

ಕೊರೊನಾ ಇಲ್ಲದಿರುತ್ತಿದ್ದರೆ ಇಷ್ಟೊತ್ತಿಗಾಗಲೇ BJP ಶಾಸಕರು ರೆಸಾರ್ಟ್ ಸೇರಿರುತ್ತಿದ್ದರು: ಕಾಂಗ್ರೆಸ್‌

- Advertisement -
- Advertisement -

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ನಾಯಕತ್ವ ಬದಲಾವಣೆಯ ಚರ್ಚೆ ಭಾರಿ ಸದ್ದು ಮಾಡುತ್ತಿದ್ದು, ಆಡಳಿತರೂಢ ಪಕ್ಷದ ಶಾಸಕರು ಬಹಿಂಗವಾಗಿ ಕಚ್ಚಾಡುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಪಕ್ಷವು, ಕೊರೊನಾ ಇಲ್ಲದೆ ಇದ್ದರೆ ಇಷ್ಟು ಹೊತ್ತಿಗಾಗಲೇ ಬಿಜೆಪಿ ಶಾಸಕರು ರೆಸಾರ್ಟ್ ಸೇರಿರುತ್ತಿದ್ದರು ಎಂದು ಶನಿವಾರ ವಾಗ್ದಾಳಿ ನಡೆಸಿದೆ.

ಇಂದು ತಮ್ಮ ಅಧೀಕೃತ ಟ್ವಿಟರ್‌ ಖಾತೆಯ ಮೂಲಕ ಟ್ವೀಟ್ ಮಾಡಿರುವ ಕಾಂಗ್ರೆಸ್‌, “ಕೊರೊನಾ ಇಲ್ಲದೆ ಇದ್ದರೆ ಇಷ್ಟು ಹೊತ್ತಿಗಾಗಲೇ ಬಿಜೆಪಿ ಶಾಸಕರು ರೆಸಾರ್ಟ್ ಸೇರಿರುತ್ತಿದ್ದರು! ಇಷ್ಟು ದಿನ ಕೊರೊನಾ ನಿರ್ವಹಣೆಗೆ ಹೊರಬರದೆ ಅಡಗಿದ್ದ ಬಿಜೆಪಿ ಸಚಿವ ಶಾಸಕರೆಲ್ಲ ಈಗ ಕುರ್ಚಿ ಕದನಕ್ಕಾಗಿ ದಿಡೀರ್ ಪ್ರತ್ಯಕ್ಷರಾಗಿದ್ದಾರೆ. ತನಗೆ ಸಿಕ್ಕ ಅಧಿಕಾರವಧಿಯಲ್ಲೆಲ್ಲ ಕುರ್ಚಿ ಕಾಳಗದಲ್ಲಿ ಮುಳುಗುವ ಬಿಜೆಪಿಯಿಂದ ಜನರ ರಕ್ಷಣೆ ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸಿಎಂ ಮತ್ತು ಅವರ ಪುತ್ರನ ಕಾಲು ಹಿಡಿದು ಸಿ.ಪಿ. ಯೋಗೇಶ್ವರ್‌‌ ಸಚಿವರಾಗಿದ್ದು: ರೇಣುಕಾಚಾರ್ಯ

ಅಲ್ಲದೆ ಪಕ್ಷವು ಕೊರೊನಾ ವ್ಯಾಕ್ಸೀನ್‌ ಬಗ್ಗೆ ಕೂಡಾ ಪ್ರಶ್ನೆಗಳನ್ನು ಸರ್ಕಾರಕ್ಕೆ ಕೇಳಿದೆ. ಕಂಪೆನಿಗಳಲ್ಲಿ ಲಸಿಕೆಗಳಿಗೆ ಆರ್ಡರ್ ಮಾಡಲಾಗಿದೆ ಎಂದು ಬಹಳ ಹಿಂದೆಯೇ ಹೇಳಿದ್ದ ಸಚಿವ ಸುಧಾಕರ್‌ ಹೇಳಿದ್ದರು. ಆರ್ಡರ್ ಮಾಡಿದ ಲಸಿಕೆಗಳು ಬಂದವೇ? ಗ್ಲೋಬಲ್ ಟೆಂಡರ್ ಕತೆ ಏನಾಯ್ತು? ಎಂದು ಪ್ರಶ್ನಿಸಿದೆ.

 

ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆಗಳು ಸಿಗುತ್ತಿಲ್ಲ. ಆದರೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಹೊರಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಚಿತ್ರದೊಂದಿಗೆ ದುಬಾರಿ ಕೊರೊನಾ ಲಸಿಕೆಗಳ ಬಗ್ಗೆ ಜಾಹಿರಾತುಗಳನ್ನು ಪ್ರದರ್ಶಿಸಲಾಗುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, “ಬಿಜೆಪಿಗರು ಖಾಸಗಿ ಆಸ್ಪತ್ರೆಗಳ ಜೊತೆ ನಿಂತು ಪ್ರಚಾರ ನಡೆಸುತ್ತಿರುವುದನ್ನ ನೋಡಿದರೆ ಸರ್ಕಾರದ ಬದಲಿಗೆ ಖಾಸಗಿ ಅಸ್ಪತ್ರೆಗಳ ಪರವಾಗಿ ಆರ್ಡರ್ ಮಾಡಿದೆ ಎನಿಸುತ್ತದೆ” ಎಂದು ಹೇಳಿದೆ.

ರಾಜ್ಯದ ನಾಯಕತ್ವ ಬದಲಾವಣೆಗೆ ಹಿಂದಿನಿಂದಲೆ ಬಿಜೆಪಿಯ ಕೆಲವು ನಾಯಕರು ಪ್ರಯತ್ನಿಸುತ್ತಲೆ ಇದ್ದಾರೆ. ಇದೀಗ ಕೊರೊನಾ ವೈಫಲ್ಯದ ನೆಪವನ್ನು ಹೇಳಿ ಮುಖ್ಯಮಂತ್ರಿಯ ಬದಲಾವಣೆ ಮಾಡಬೇಕು ಎಂದು ಹೈಕಮಾಂಡ್‌ಗೆ ಒತ್ತಡ ಹೇರಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ರಾಜ್ಯ ಬಿಜೆಪಿಯ ಆಂತರಿಕ ಅಸಮಾಧಾನ ಸ್ಪೋಟಗೊಂಡಿದ್ದು, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಮತ್ತು ಸಚಿವ ಸಿಪಿ ಯೋಗೀಶ್ವರ್‌ ಬಹಿರಂಗವಾಗಿಯೆ ಕಚ್ಚಾಡಿದ್ದರು.

ಇದನ್ನೂ ಓದಿ: ಹೊಸ ಯೋಜನೆಯಡಿ ಉಚಿತ ‘ಸ್ಯಾನಿಟರಿ ಪ್ಯಾಡ್‌‌’ ಒದಗಿಸಲಿರುವ ಪಂಜಾಬ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...