Homeಮುಖಪುಟಬಿಜೆಪಿ ಎಂಎಲ್‌ಸಿ ಹೆಸರಿನಲ್ಲಿ ಕಲಬೆರಕೆ ಸಿಹಿತಿಂಡಿ ಪಾರ್ಸೆಲ್ ಮಾಡಿದ ವಕೀಲ - ಸೇಡು!

ಬಿಜೆಪಿ ಎಂಎಲ್‌ಸಿ ಹೆಸರಿನಲ್ಲಿ ಕಲಬೆರಕೆ ಸಿಹಿತಿಂಡಿ ಪಾರ್ಸೆಲ್ ಮಾಡಿದ ವಕೀಲ – ಸೇಡು!

- Advertisement -
- Advertisement -

ಬಿಜೆಪಿ ಎಂಎಲ್‌ಸಿ ಧನಂಜಯ್ ಸರ್ಜಿ ಹೆಸರಿನಲ್ಲಿ ಮೂವರಿಗೆ ಹೊಸ ವರ್ಷದ ಉಡುಗೊರೆಯಾಗಿ ‘ಕಲುಷಿತ’ ಸಿಹಿತಿಂಡಿಗಳನ್ನು ಕಳುಹಿಸಿದ್ದ ಆರೋಪದ ಮೇಲೆ ಶಿವಮೊಗ್ಗದ 26 ವರ್ಷದ ವಕೀಲರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆರೋಪಿಯನ್ನು ಶಿವಮೊಗ್ಗ ನಿವಾಸಿ ಸೌಹರ್ದ್ ಪಟೇಲ್ ಎಂದು ಪೊಲೀಸರು ಗುರುತಿಸಿದ್ದಾರೆ.

ತನ್ನ ಓದಿನ ಸಮಯದಲ್ಲಿ ಸಹ ವಿದ್ಯಾರ್ಥಿಯೊಂದಿಗಿನ ಸಂಬಂಧವನ್ನು ಕೊನೆಗೊಳಿಸಿ, ಖಿನ್ನತೆಗೆ ಚಿಕಿತ್ಸೆ ನೀಡಿದ್ದಕ್ಕಾಗಿ ಸೇಡು ತೀರಿಸಿಕೊಳ್ಳಲು, ನ್ಯಾಷನಲ್ ಎಜುಕೇಶನ್ ಸೊಸೈಟಿ (ಎನ್‌ಇಎಸ್)ಯ ಕಾರ್ಯದರ್ಶಿ ಎಸ್‌.ಎನ್. ನಾಗರಾಜ್ ಮತ್ತು ಇಬ್ಬರು ವೈದ್ಯರಿಗೆ ಕಲಬೆರಕೆ ಸಿಹಿತಿಂಡಿಗಳನ್ನು ಆರೋಪಿ ಕಳುಹಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಬಿಜೆಪಿ ಎಂಎಲ್‌ಸಿ ಸರ್ಜಿ ಅವರ ಹೆಸರಿನಲ್ಲಿ ಹೊಸ ವರ್ಷದ ಶುಭಾಶಯ ಪತ್ರದೊಂದಿಗೆ ಸಿಹಿತಿಂಡಿಗಳನ್ನು ಜನವರಿ 1 ರಂದು ಡಿಟಿಡಿಸಿ ಕೊರಿಯರ್‌ನಲ್ಲಿ ಕಳುಹಿಸಲಾಗಿದೆ ಎಂದು ವೆರದಿಯಾಗಿದೆ. ನಾಗರಾಜ್ ಅವರು ಪಡೆದ ಸಿಹಿತಿಂಡಿಯಲ್ಲಿ ತೀವ್ರ ಕಹಿ ಕಂಡುಬಂದಿದ್ದು, ಕಲಬೆರಕೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಈ ವೇಳೆ ಗಾಬರಿಗೊಂಡ ಅವರು ಸರ್ಜಿ ಅವರನ್ನು ಸಂಪರ್ಕಿಸಿದ್ದರು. ಆಗ ಸರ್ಜಿ ಅವರು ಸಿಹಿ ತಿಂಡಿ ಪ್ಯಾಕೇಜ್ ಕಳುಹಿಸಿದ್ದನ್ನು ನಿರಾಕರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದರ ನಂತರ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಸಚಿನ್ ರಾಜ್ ಅವರು ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೇ ರೀತಿಯ ಪೆಟ್ಟಿಗೆಗಳನ್ನು ಭದ್ರಾವತಿಯ ಇಬ್ಬರು ವೈದ್ಯರಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಕಂಡುಹಿಡಿದಿದ್ದರು. ಇಬ್ಬರು ವೈದ್ಯರಾದ ಅರವಿಂದ್ ಮತ್ತು ಕೆ.ಎಸ್. ಪವಿತ್ರಾ ಆರೋಪಿ ಪಟೇಲ್‌ನ ಖಿನ್ನತೆಗೆ ಚಿಕಿತ್ಸೆ ನೀಡಿದ್ದರು.

ಪೊಲೀಸರು ಡಿಟಿಡಿಸಿ ಪ್ಯಾಕೇಜ್‌ಗಳನ್ನು ಟ್ರ್ಯಾಕ್ ಮಾಡಿದ್ದು, ಅವುಗಳನ್ನು ಕಳುಹಿಸಿದ್ದು ಪಟೇಲ್ ಎಂದು ಪತ್ತೆ ಮಾಡಿದ್ದರು. ಇದರ ನಂತರ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದು, ಈ ವೇಳೆ ಆರೋಪಿ ತಾನು ಸಿಹಿತಿಂಡಿಗಳನ್ನು ಕಳುಹಿಸಿರುವುದಾಗಿ ಅವರು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ವಿಚಾರಣೆ ವೇಳೆ ಆರೋಪಿ ಪಟೇಲ್, ತಮ್ಮ ಗೆಳತಿಯೊಂದಿಗೆ ಸಂಬಂಧ ಮುರಿದುಬಿದ್ದ ನಂತರ ಡಾ.ಪವಿತ್ರರಿಂದ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದಾಗಿ ಹೇಳಿದ್ದಾರೆ. ಅವರು ಉಲ್ಲೇಖಿಸಿರುವ ಪ್ರೇಮಕಥೆ ಎರಡು ವರ್ಷಗಳಷ್ಟು ಹಳೆಯದಾಗಿರುವ ಕಾರಣ ನಾವು ಅವರ ಪ್ರತಿಪಾದನೆಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಪಟೇಲ್ ಓದುತ್ತಿದ್ದಾಗ ವೈದ್ಯರೊಬ್ಬರ ಮಗಳೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು. ಈ ವೇಳೆ ವಿಷಯ ತಿಳಿದ ನಾಗರಾಜ್ ದೂರ ಇರುವಂತೆ ತಾಕೀತು ಮಾಡಿದ್ದರು. ಇದರ ನಂತರ ಅವರ ನಡುವಿನ ಸಂಬಂಧ ಮುರಿದುಬಿದ್ದಿತ್ತು. ಈ ವೇಳೆ ಪಟೇಲ್ ಅವರು ತೀವ್ರ ಖಿನ್ನತೆಗೆ ಒಳಗಾಗಿದ್ದರು ಮತ್ತು ಡಾ.ಪವಿತ್ರ ಅವರಿಗೆ ಕೆಲವು ಮಾತ್ರೆಗಳನ್ನು ನೀಡಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಪಟೇಲ್‌ಗೆ ತನ್ನನ್ನು ರೋಗಿಯೆಂದು ಪರಿಗಣಿಸಲಾಗಿದೆ ಎಂದು ಅತೃಪ್ತಿ ವ್ಯಕ್ತಪಡಿಸಿದ್ದಾರೆ”ಎಂದು ಅಧಿಕಾರಿ ಹೇಳಿದ್ದಾರೆ.

“ಕಾರ್ಯಕ್ರಮವೊಂದರಲ್ಲಿ ಸರ್ಜಿ ಮತ್ತು ನಾಗರಾಜ್ ಅವರನ್ನು ಒಟ್ಟಿಗೆ ನೋಡಿದ ನಂತರ ಅವರು ಒಂದು ಯೋಜನೆಯನ್ನು ರೂಪಿಸಿದ್ದರು. ಅವರು ಕೆಲವು ಔಷಧಿಗಳನ್ನು ಬಳಸಿಕೊಂಡು ಸಿಹಿತಿಂಡಿಗಳನ್ನು ಹಾಳುಮಾಡಿ, ಮೂವರಿಗೆ ಕೊರಿಯರ್ ಮೂಲಕ ಅವುಗಳನ್ನು ಕಳುಹಿಸಿದ್ದಾರೆ” ಎಂದು ಅಧಿಕಾರಿ ಹೇಳಿದ್ದಾರೆ. ಕೋಟೆ ಪೊಲೀಸರು ಪಟೇಲ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಇದನ್ನೂಓದಿ:  ಬಿಜೆಪಿ ನಾಯಕ ರಮೇಶ್‌ ಬಿಧುರಿ ಮನೆ ಮುಂದೆ ‘ಮಹಿಳಾ ವಿರೋಧಿ’ ಎಂದು ಬರೆದ ಕಾಂಗ್ರೆಸ್‌ ಕಾರ್ಯಕರ್ತರು

ಬಿಜೆಪಿ ನಾಯಕ ರಮೇಶ್‌ ಬಿಧುರಿ ಮನೆ ಮುಂದೆ ‘ಮಹಿಳಾ ವಿರೋಧಿ’ ಎಂದು ಬರೆದ ಕಾಂಗ್ರೆಸ್‌ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...