Homeಮುಖಪುಟಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ: ಬಿಜೆಪಿ MLCಯ ಪತ್ನಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ: ಬಿಜೆಪಿ MLCಯ ಪತ್ನಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ 40 ವರ್ಷದ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಿಜೆಪಿ ಎಂಎಲ್‌ಸಿಯ ಪತ್ನಿ ಸೇರಿದಂತೆ ಮೂವರ ವಿರುದ್ಧ  ಪ್ರಕರಣ ದಾಖಲಿಸಲಾಗಿದೆ ಎಂದು ಲೋಕಸತ್ತಾ ಭಾನುವಾರ ವರದಿ ಮಾಡಿದೆ.

ಈ ಪ್ರಕರಣ ಕುರಿತು ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆ ರೂಪಾಲಿ ಚಕಂಕರ್ ಭಾನುವಾರ ಒತ್ತಾಯಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಅವರು, ”ಮಹಿಳೆಗೆ ನ್ಯಾಯ ಸಿಗುವವರೆಗೆ ಆಯೋಗ, ಹೋರಾಟ ಮಾಡಲಿದೆ” ಎಂದು ಅವರು ತಿಳಿಸಿದ್ದಾರೆ.

”ಬೀಡು ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿರುವ ಬಗ್ಗೆ ತಿಳಿದು ಬಂದಿದೆ. ಈ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿಯಿಂದ ಘಟನೆಯ ವಿವರಗಳನ್ನು ಖುದ್ದಾಗಿ ಕೇಳಿದ್ದೇನೆ. ಪ್ರಜಕ್ತ ಸುರೇಶ್ ಧಾಸ್, ರಘು ಪವಾರ್ ಮತ್ತು ರಾಹುಲ್ ಜಗದಾಳೆ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯು ಅತಿರೇಕದ ಸಂಗತಿಯಾಗಿದ್ದು, ಕೂಡಲೇ ಮುಂದಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ತಮ್ಮ ಪತ್ನಿ ವಿರುದ್ಧದ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಎಂಎಲ್ ಸಿ ಸುರೇಶ್ ದಾಸ್, ”ದೂರು ರಾಜಕೀಯ ಪ್ರೇರಿತವಾಗಿದ್ದು, ಸೂಕ್ತ ಸಮಯದಲ್ಲಿ ಈ ಬಗ್ಗೆ ವಿವರವಾದ ಪ್ರತಿಕ್ರಿಯೆಯನ್ನು ನೀಡುತ್ತೇನೆ” ಎಂದು ಸುದ್ದಿಗಾರರಿಗೆ ತಿಳಿಸಿದರು.

ಅಕ್ಟೋಬರ್ 15 ರಂದು ಈ ಘಟನೆ ನಡೆದಿದ್ದರೂ, ಶನಿವಾರವಷ್ಟೇ ಐಪಿಸಿ ಮತ್ತು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989 ರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎಂಎಲ್‌ಸಿ ಸುರೇಶ್ ಧಾಸ್ ಅವರ ಪತ್ನಿ ಪ್ರಜಕ್ತಾ ಧಾಸ್ ಅವರು ತಮ್ಮ ಸಹಚರರಾದ ರಾಹುಲ್ ಜಗದಾಳೆ ಮತ್ತು ರಾಘವ್ ಪವಾರ್ ಅವರ ಸಹಾಯದೊಂದಿಗೆ ತಮ್ಮ ಪೂರ್ವಜರ ಜಮೀನನ್ನು ಕಬಳಿಸಲು ಯತ್ನಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ತಾನು ತನ್ನ ಗಂಡ ಮತ್ತು ಸೊಸೆಯೊಂದಿಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಧಾಸ್ ಮತ್ತು ಇಬ್ಬರು ವ್ಯಕ್ತಿಗಳು ತಮ್ಮ ಹೊಲಕ್ಕೆ ಬಂದರು ಎಂದು ಅವರು ಹೇಳಿದರು.

ಈ ಜಮೀನು ತನಗೆ ಸೇರಿದ್ದು ಎಂದು ಪ್ರಜಕ್ತಾ ಧಾಸ್ ಹೇಳಿದರೆ, ದೂರುದಾರರು 65 ವರ್ಷಗಳಿಂದ ಅದು ತನ್ನ ಕುಟುಂಬದಲ್ಲಿದೆ ಎಂದು ಪ್ರತಿಪಾದಿಸಿದರು. ಪ್ರಜಕ್ತಾ ಧಾಸ್ ಅವರ ಆದೇಶದ ಮೇರೆಗೆ ಜಗದಾಲಿ ಮತ್ತು ಪವಾರ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆ ರೂಪಾಲಿ ಚಕಂಕರ್ ಅವರು ಶೀಘ್ರ ಪೊಲೀಸ್ ಕ್ರಮಕ್ಕೆ ಆಗ್ರಹಿಸಿದ್ದಾರೆ. ”ನಾನು ಘಟನೆಯ ವಿವರಗಳನ್ನು ಬೀಡ್ ಪೊಲೀಸ್ ಅಧೀಕ್ಷಕರಿಂದ ವೈಯಕ್ತಿಕವಾಗಿ ಕೇಳಿದ್ದೇನೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಮಹಿಳೆಗೆ ನ್ಯಾಯ ಸಿಗುವವರೆಗೆ ಆಯೋಗವು ಕ್ರಮ ಕೈಗೊಳ್ಳಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: BJP ಟಿಕೆಟ್ ಕೊಡಿಸುವುದಾಗಿ ವಂಚನೆ, ಕಟೀಲ್ ಶಾಮೀಲು: ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...