Homeಮುಖಪುಟಬಿಜೆಪಿ ಸಂಸದನ ಮೇಲೆ ಲೈಂಗಿಕ ಕಿರುಕುಳ ಆರೋಪ: #MeToo ಪ್ರತಿಭಟನೆಗೆ 'ಎಲ್ಲಾ ಪಕ್ಷಗಳಿಗೂ ಸ್ವಾಗತ' ಎಂದ...

ಬಿಜೆಪಿ ಸಂಸದನ ಮೇಲೆ ಲೈಂಗಿಕ ಕಿರುಕುಳ ಆರೋಪ: #MeToo ಪ್ರತಿಭಟನೆಗೆ ‘ಎಲ್ಲಾ ಪಕ್ಷಗಳಿಗೂ ಸ್ವಾಗತ’ ಎಂದ ಕುಸ್ತಿಪಟುಗಳು

- Advertisement -
- Advertisement -

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವಾರು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಭಾರತದ ಅಗ್ರ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸಿದ್ದಾರೆ. ಈ ಬಾರಿಯ ಪ್ರತಿಭಟನೆಯಲ್ಲಿ ಭಾಗಿಯಾಗಲು ಇಚ್ಛಿಸುವವರು ಯಾವುದೇ ಪಕ್ಷದವರಾಗಿದ್ದರೂ ಅವರಿಗೆ ಸ್ವಾಗತ ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದರು. ಆದರೆ ಈ ಬಾರಿ ಕುಸ್ತಿಪಟುಗಳು ಆರೋಪಗಳನ್ನು ಸಮಿತಿಯು ತನಿಖೆ ಮಾಡುತ್ತದೆ ಎಂದು ಭರವಸೆ ನೀಡಿದ ನಂತರ ಮತ್ತು ಬ್ರಿಜ್ ಭೂಷಣ್ ವಿರುದ್ಧ ಪೊಲೀಸರು ದೂರು ದಾಖಲಿಸುವವರೆಗೆ ಪ್ರತಿಭಟನಾ ಸ್ಥಳದಿಂದ ಹೊರಡುವುದಿಲ್ಲಬ ಎಂದು ಪಟ್ಟು ಹಿಡಿದಿದ್ದಾರೆ.

ಈ ಬಗ್ಗೆ ಮಾತನಾಡಿದ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು, ”ನಾವು ಯಾರನ್ನೂ ಕುರುಡಾಗಿ ನಂಬುವುದಿಲ್ಲ. ಕಳೆದ ಬಾರಿ ನಾವು ದಾರಿ ತಪ್ಪಿಸಿದ್ದೇವೆ. ಈ ಬಾರಿ ಈ ಪ್ರಕರಣದಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿದರು.

”ಈ ಹಿಂದೆ ಜನವರಿಯಲ್ಲಿ ಇದು ‘ಕ್ರೀಡಾಪಟುಗಳ ಪ್ರತಿಭಟನೆ’ ಎಂದು ಎಡ ನಾಯಕಿ ವೃಂದಾ ಕಾರಟ್ ಅವರನ್ನು ಪ್ರತಿಭಟನಾಕಾರರು ವೇದಿಕೆಗೆ ಬಿಟ್ಟಿರಲಿಲ್ಲ. ಆದರೆ, ಈ ಬಾರಿ ನಾವು ಯಾರನ್ನೂ ತಿರಸ್ಕರಿಸುವುದಿಲ್ಲ, ತಮ್ಮ ಪ್ರತಿಭಟನೆಯನ್ನು ಬೆಂಬಲಿಸಲು ಬಯಸುವವರು ಬಂದು ಸೇರಬಹುದು. ಬಿಜೆಪಿ, ಕಾಂಗ್ರೆಸ್, ಎಎಪಿ, ಅಥವಾ ಯಾವುದೇ ಪಕ್ಷವಾಗಲಿ ನಮ್ಮ ಪ್ರತಿಭಟನೆಗೆ ಸೇರಲು ಎಲ್ಲಾ ಪಕ್ಷಗಳಿಗೆ ಸ್ವಾಗತವಿದೆ. ನಾವು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹೇಳಿದ್ದಾರೆ.

ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ. ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ, ಪೊಲೀಸರು ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾನಿರತ ಅಥ್ಲೀಟ್‌ಗಳು ಹೇಳಿದ್ದಾರೆ.

”ಸುಳ್ಳು ಆಶ್ವಾಸನೆ”ಯಿಂದ ನಾವು ಜನವರಿಯಲ್ಲಿ ಪ್ರತಿಭಟನೆಯನ್ನು ಕೊನೆಗೊಳಿಸಿದ್ದೇವೆ ಎಂದು ಕುಸ್ತಿಪಟುಗಳು ಹೇಳಿದ್ದಾರೆ.

”ನಾವು ಹಗಲು ರಾತ್ರಿ ಇಲ್ಲಿ ಕುಳಿತುಕೊಳ್ಳುತ್ತೇವೆ. ನಮಗೆ ನ್ಯಾಯ ಸಿಗುವವರೆಗೂ ನಾವು ಇಲ್ಲಿಯೇ ಕುಳಿತುಕೊಳ್ಳುತ್ತೇವೆ” ಎಂದು ಫುಟ್‌ಪಾತ್‌ನಲ್ಲಿ ರಾತ್ರಿ ಕಳೆದ ನಂತರ ಫೋಗಟ್ ಹೇಳಿದರು.

”ನಾವು ಅವರನ್ನು (ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮತ್ತು ಇತರ ಸಂಬಂಧಿತ ಅಧಿಕಾರಿಗಳನ್ನು) ಸಂಪರ್ಕಿಸಲು ಮೂರು ತಿಂಗಳಿನಿಂದ ಪ್ರಯತ್ನಿಸುತ್ತಿದ್ದೇವೆ. ಸಮಿತಿಯ ಸದಸ್ಯರು ನಮಗೆ ಪ್ರತಿಕ್ರಿಯಿಸುತ್ತಿಲ್ಲ, ಕ್ರೀಡಾ ಸಚಿವಾಲಯವೂ ಏನನ್ನೂ ಹೇಳಿಲ್ಲ, ಅವರು ನಮ್ಮ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ. ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆ ಮತ್ತು ಇದಕ್ಕಾಗಿ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ” ಎಂದು ಅವರು ಹೇಳಿದರು.

”ಕುಸ್ತಿಪಟುಗಳ ದೂರಿನ ಮೇರೆಗೆ ಜನವರಿಯಲ್ಲಿ ಕ್ರೀಡಾ ಸಚಿವಾಲಯವು ತನಿಖೆಗಾಗಿ ಒಲಿಂಪಿಕ್ ಪದಕ ವಿಜೇತ ಬಾಕ್ಸರ್ ಎಂಸಿ ಮೇರಿ ಕೋಮ್ ನೇತೃತ್ವದ ಐದು ಸದಸ್ಯರ ಸಮಿತಿಯನ್ನು ರಚಿಸಿತು. ಒಂದು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿತ್ತು. ಆದರೆ ಸಮಿತಿಯು ನೀಡಿದ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಿಲ್ಲ” ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಹತಾಶೆ ವ್ಯಕ್ತಪಡಿಸಿದರು.

”ಮಹಿಳಾ ಕುಸ್ತಿಪಟುಗಳ ಹೇಳಿಕೆಗಳನ್ನು ದಾಖಲಿಸಿರುವ ವರದಿಯು ಸಾರ್ವಜನಿಕವಾಗಬೇಕೆಂದು ನಾವು ಬಯಸುತ್ತೇವೆ. ದೂರುದಾರರ ಹೆಸರನ್ನು ಸೋರಿಕೆ ಮಾಡಬಾರದು ಏಕೆಂದರೆ ಇದು ಸೂಕ್ಷ್ಮ ವಿಷಯವಾಗಿದೆ, ದೂರುದಾರರಲ್ಲಿ ಒಬ್ಬರು ಅಪ್ರಾಪ್ತ ಬಾಲಕಿ ಇದ್ದಾರೆ” ಎಂದು ಅವರು ಹೇಳಿದರು.

ಸರ್ಕಾರದ ಸಮಿತಿಯು ತನ್ನ ವರದಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಸಲ್ಲಿಸಿದೆ, ಆದರೆ ಸಚಿವಾಲಯವು ಆ ವರದಿಯನ್ನು ಇನ್ನೂ ಸಾರ್ವಜನಿಕವಾಗಿ ಪ್ರಕಟಿಸಿಲ್ಲ.

ಜನವರಿ 18ರಂದು ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಹಲವಾರು ಕುಸ್ತಿಪಟುಗಳು ಲೈಂಗಿಕ ಕಿರುಕಳದ ಆರೋಪವನ್ನು ಬಹಿರಂಗಪಡಿಸಿ ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಕುಸ್ತಿಪಟುಗಳು ಮತ್ತು ಸರ್ಕಾರದ ನಡುವಿನ ಮಾತುಕತೆಯು ಯಶಸ್ವಿಯಾಗಲಿಲ್ಲ. ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ನಾವು ಕುಸ್ತಿಯಾಡುವುದಿಲ್ಲ ಎಂದು ಹೇಳಿದ್ದಾರೆ. ಒಕ್ಕೂಟದ ಕಾರ್ಯಚಟುವಟಿಕೆಯಲ್ಲಿ ದುರಾಡಳಿತ ನಡೆಯುತ್ತಿದೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...