Homeಮುಖಪುಟಊರಿಗೆ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ ಬಿಜೆಪಿ ಸಂಸದ!

ಊರಿಗೆ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ ಬಿಜೆಪಿ ಸಂಸದ!

- Advertisement -
- Advertisement -

ಮಧ್ಯಪ್ರದೇಶದಲ್ಲಿ ತಮ್ಮ ಊರಿಗೆ ರಸ್ತೆ ನಿರ್ಮಿಸಿಕೊಡುವಂತೆ ಗರ್ಭಿಣಿಯೊಬ್ಬರು ಮನವಿ ಮಾಡಿದ್ದಕ್ಕೆ ಬಿಜೆಪಿ ಸಂಸದ ಹೆರಿಗೆ ದಿನಾಂಕ ಕೇಳಿದ್ದಾರೆ ಎಂದು ವರದಿಯಾಗಿದೆ.

ಸಿಧಿ ಜಿಲ್ಲೆಯ ಖಡ್ಡಿ ಖುರ್ದ್ ಗ್ರಾಮದ ಗರ್ಭಿಣಿ ತಮ್ಮ ಊರಿಗೆ ರಸ್ತೆ ನಿರ್ಮಿಸಿ ಕೊಡುವಂತೆ ಆಡಳಿತಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಧಿ ಬಿಜೆಪಿ ಸಂಸದ ಡಾ.ರಾಕೇಶ್ ಮಿಶ್ರಾ “ಹೆರಿಗೆಗೆ ಒಂದು ವಾರ ಮೊದಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇವೆ” ಎಂಬ ಬೇಜವ್ದಾರಿಯ ಉತ್ತರ ನೀಡಿದ್ದಾರೆ.

ಸಾಮಾಜಿಕ ಜಾಲತಾಣದ ಇನ್‌ಪ್ಲುಯೆನ್ಸರ್ ಆಗಿರುವ ಸ್ಥಳೀಯ ಮಹಿಳೆ 25 ವರ್ಷದ ಲೀಲಾ ಸಾಹು ತಮ್ಮ ಊರಿನ ರಸ್ತೆಯ ದುರವಸ್ಥೆಯ ಬಗ್ಗೆ ಗಮನ ಸೆಳೆದಿದ್ದಿದ್ದರು. ಪ್ರಸ್ತುತ ಅವರು ಗರ್ಭಿಣಿಯಾಗಿರುವ ಅವರು, ಸರಿಯಾದ ರಸ್ತೆ ಸಂಪರ್ಕದ ಕೊರತೆಯಿಂದಾಗಿ, ವಿಶೇಷವಾಗಿ ಮಳೆಗಾಲದಲ್ಲಿ ಆಂಬ್ಯುಲೆನ್ಸ್‌ಗಳು ಗ್ರಾಮವನ್ನು ತಲುಪುವುದು ಅಸಾಧ್ಯ ಎಂದು ಇತ್ತೀಚಿನ ವಿಡಿಯೋದಲ್ಲಿ ಹೇಳಿದ್ದರು.

ಗರ್ಭಿಣಿಯರಾದ ನಾವು ಟ್ರ್ಯಾಕ್ಟರ್‌ಗಳಲ್ಲಿ ಆಸ್ಪತ್ರೆಗೆ ಹೋಗಬೇಕಿದೆ. ಇದರಿಂದ ತುರ್ತು ಸಂದರ್ಭಗಳಲ್ಲಿ ವೈದ್ಯಕೀಯ ಸಹಾಯ ಪಡೆಯುವುದು ಕಷ್ಟವಾಗಿದೆ ಎಂದು ಆಕೆ ಸಮಸ್ಯೆ ಹೇಳಿಕೊಂಡಿದ್ದರು.

ಸಾಹು ಅವರು ಕಳೆದೊಂದು ವರ್ಷದಿಂದ ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ತಮ್ಮ ಗ್ರಾಮಕ್ಕೆ ಸರಿಯಾದ ಸಂಪರ್ಕ ರಸ್ತೆ ಇಲ್ಲದಿರುವುದನ್ನು ಬಿಂಬಿಸುವ ರೀಲ್ಸ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದೀಗ ಮತ್ತೆ ರಸ್ತೆ ವಿಚಾರವಾಗಿಯೇ ಅವರು ಸುದ್ದಿಯಲ್ಲಿದ್ದಾರೆ.

ಲೀಲಾ ಸಾಹು ಅವರ ಮನವಿಗೆ ಪ್ರತಿಕ್ರಿಯಿಸಿದ ಸಂಸದ ಮಿಶ್ರಾ, “ಮಧ್ಯಪ್ರದೇಶದಲ್ಲಿ ಮೋಹನ್ ಯಾದವ್ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದೆ. ನಮ್ಮಲ್ಲಿ ಸಾಕಷ್ಟು ಆಂಬ್ಯುಲೆನ್ಸ್‌ಗಳಿವೆ. ಆಶಾ ಕಾರ್ಯಕರ್ತರಿದ್ದಾರೆ. ಇತರ ವ್ಯವಸ್ಥೆಗಳಿವೆ. ಹಾಗಾಗಿ, ಯಾರು ಕೂಡಾ ಚಿಂತಿಸಬೇಕಿಲ್ಲ. ಲೀಲಾ ಅವರ ಹೆರಿಗೆಯ ನಿಗದಿತ ದಿನಾಂಕವನ್ನು ತಿಳಿಸಿದರೆ, ನಾವು ಆಕೆಯನ್ನು ಒಂದು ವಾರ ಮೊದಲೇ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇವೆ ಎಂದಿದ್ದಾರೆ. ಜನರು ಯಾವುದಾದರೊಂದು ರೀತಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯತೆಯನ್ನು ಗಳಿಸಲು ಬಯಸುತ್ತಾರೆ. ರಸ್ತೆ ಸಮಸ್ಯೆಯನ್ನು ಈ ರೀತಿ ಮುನ್ನೆಲೆಗೆ ತರುವ ಅಗತ್ಯವೇನಿತ್ತು?” ಎಂದು ಪ್ರಶ್ನಿಸಿದ್ದಾರೆ.

ಮೂರು ದಿನಗಳ ಹಿಂದೆ, ಇದೇ ವಿಷಯದ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಲೋಕೋಪಯೋಗಿ ಸಚಿವ ರಾಕೇಶ್ ಸಿಂಗ್, “ಸಿಧಿಯ ಲೀಲಾ ಸಾಹು ಅವರ ವಿಡಿಯೋ ಬಗ್ಗೆ ನೀವು ಹೇಳುತ್ತಿದ್ದೀರಾ? ಅದು ನಮಗೆ ಸೋಶಿಯಲ್ ಮೀಡಿಯಾದಲ್ಲಿ ಬಂದಿದೆ” ಎಂದು ಹೇಳಿದ್ದರು.

“ಇಂತಹ ಬೇಡಿಕೆಗಳು ಇರುವ ಜನರು ತುಂಬಾ ಇದ್ದಾರೆ. ನಿಮ್ಮ ಅಭಿಪ್ರಾಯವೇನು? ಲೋಕೋಪಯೋಗಿ ಇಲಾಖೆ ಅಥವಾ ಇನ್ನಾವುದೇ ಇಲಾಖೆಗೆ ಸಂಬಂಧಪಟ್ಟಂತೆ ಯಾರಾದರೂ ಏನಾದರೂ ಪೋಸ್ಟ್ ಮಾಡಿದರೆ ನಾವು ತಕ್ಷಣ ಅಲ್ಲಿಗೆ ಹೋಗ್ಬೇಕಾ? ಈಗ ನಾವು ರಸ್ತೆ ನಿರ್ಮಿಸಿ ಕೊಡ್ಬೇಕಾ? ನಮ್ಮಲ್ಲಿ ಅಷ್ಟು ಹಣ ಇದೆಯಾ? ಅದೆಲ್ಲ ಆಗಲ್ಲ, ಎಲ್ಲದಕ್ಕೂ ಒಂದು ಪ್ರಕ್ರಿಯೆ ಇದೆ ಎಂದಿದ್ದರು.

Courtesy : timesofindia.indiatimes.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....