Homeಮುಖಪುಟಟ್ರಾಕ್ಟರ್‌ ರ್‍ಯಾಲಿಯ ಅಹಿತಕರ ಘಟನೆಯಲ್ಲಿ ಕೇಜ್ರಿವಾಲ್ ಕೈವಾಡ: BJP ಸಂಸದ ಗೌತಮ್ ಗಂಭೀರ್‌ ಆರೋಪ

ಟ್ರಾಕ್ಟರ್‌ ರ್‍ಯಾಲಿಯ ಅಹಿತಕರ ಘಟನೆಯಲ್ಲಿ ಕೇಜ್ರಿವಾಲ್ ಕೈವಾಡ: BJP ಸಂಸದ ಗೌತಮ್ ಗಂಭೀರ್‌ ಆರೋಪ

- Advertisement -
- Advertisement -

ರೈತರ ಗಣರಾಜ್ಯೋತ್ಸವ ಆಚರಣೆಯಲ್ಲಿ ಕೆಂಪುಕೋಟೆ ಬಳಿ ನಡೆದ ಅಹಿತಕರ ಘಟನೆಗೆ ಕಾರಣರಾದವರೊಂದಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕೈಜೋಡಿಸಿದ್ದಾರೆ ಎಂದು ಬಿಜೆಪಿ ಸಂಸದ ಮಾಜಿ ಕ್ರಿಕೆಟಿಗ ಗೌತಮ್ ಗಂಬೀರ್​ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದ ರೈತರು ಕಳೆದ ಎರಡು ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಶಾಂತಿಯುತವಾಗಿ ಹೋರಾಟ ನಡೆಸಿದ್ದಾರೆ. ಆದರೆ, ಜನವರಿ 26 ರಂದು ಆಯೋಜಿಸಿದ್ದ ಟ್ರಾಕ್ಟರ್​ ರ್‍ಯಾಲಿ ವೇಳೆ ಕೆಂಪುಕೋಟೆಯ ಬಳಿ ಅಹಿತಕರ ಘಟನೆ ನಡೆದಿತ್ತು.

ಈ ಘಟನೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿರಿರುವ ಗೌತಮ್​ ಗಂಭೀರ್​, “ರೈತ ಹೋರಾಟಕ್ಕೆ ಪಂಜಾಬ್​ ರಾಜ್ಯದಲ್ಲಿ ಬಹುದೊಡ್ಡ ಬೆಂಬಲ ಇದೆ. ಹೀಗಾಗಿ ಪಂಜಾಬ್‌ನಲ್ಲಿ ಆಮ್​ ಆದ್ಮಿ ಪಕ್ಷವನ್ನು ಬೆಳೆಸುವ ಸಲುವಾಗಿ, ಅರವಿಂದ ಕೇಜ್ರಿವಾಲ್​ ಈ ಅಹಿತಕರ ಘಟನೆಯಲ್ಲಿ ಪಾಲ್ಗೊಂಡವರ ಜೊತೆ ಕೈಜೋಡಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ – ರೈತ ಒಕ್ಕೂಟ

ಪಂಜಾಬ್​ ರಾಜ್ಯದಲ್ಲಿ ಎಎಪಿ ಎರಡನೇ ಅತಿದೊಡ್ಡ ಪಕ್ಷವಾಗಿದ್ದು, ಪ್ರಮುಖ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುತ್ತಿದೆ.

ಗುರುವಾರ ದೆಹಲಿಯಲ್ಲಿ ನಡೆದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ, “ಜನವರಿ 26 ರಂದು ನಡೆದದ್ದು ದುರದೃಷ್ಟಕರ. ನಿಜವಾದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಆದರೆ ಆ ಘಟನೆಯಿಂದ ಪ್ರತಿಭಟನೆ ಕೊನೆಗೊಳ್ಳುವುದಿಲ್ಲ. ಆತಂಕಗಳು ಇನ್ನೂ ಅಸ್ತಿತ್ವದಲ್ಲಿವೆ, ಆದ್ದರಿಂದ ನಾವೆಲ್ಲರೂ ರೈತರನ್ನು ಶಾಂತಿಯುತವಾಗಿ ಬೆಂಬಲಿಸಬೇಕು” ಎಂದು ಕರೆ ನೀಡಿದ್ದರು.

ಇದನ್ನೂ ಓದಿ: ರೈತ ಹೋರಾಟ: ಪಾರ್ಲಿಮೆಂಟ್ ಚಲೋ ಮೂಂದೂಡಿಕೆ – ಜ.30ಕ್ಕೆ ಉಪವಾಸ ಸತ್ಯಾಗ್ರಹ

ದೆಹಲಿ ರೈತರ ಟ್ರ್ಯಾಕ್ಟರ್ ರ್‍ಯಾಲಿಯಲ್ಲಿನ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಯೋಗೇಂದ್ರ ಯಾದವ್ ಸೇರಿದಂತೆ ಸುಮಾರು 20 ರೈತ ಮುಖಂಡರಿಗೆ ದೆಹಲಿ ಪೊಲೀಸ್ ನೋಟಿಸ್ ನೀಡಿದೆ.

ಈ ಕುರಿತು ಎಎನ್‌ಐ ಟ್ವೀಟ್ ಮಾಡಿದ್ದು, “ಯೋಗೇಂದ್ರ ಯಾದವ್, ಬಲ್‌ದೇವ್ ಸಂಗ್ ಸಿರ್ಸಾ, ಬಲ್‌ಬೀರ್ ಎಸ್ ರಾಜೇವಾಲ್ ಸೇರಿದಂತೆ 20 ರೈತ ಮುಖಂಡರಿಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ. ಪೊಲೀಸರೊಂದಿಗೆ ಮಾಡಿಕೊಂಡಿದ್ದ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕಾಗಿ 3 ದಿನಗಳೊಳಗೆ ಪ್ರತಿಕ್ರಿಯಿಸುವಂತೆ ನೋಟಿಸ್ ನೀಡಲಾಗಿದೆ” ಎಂದು ವರದಿಯಾಗಿದೆ.

ಇದನ್ನೂ ಓದಿ: ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...