Homeಮುಖಪುಟತಾಳ್ಮೆ ಕಳೆದುಕೊಂಡ ಬಿಜೆಪಿ ಕಾರ್ಯಕರ್ತರು: ಕೇಂದ್ರ ಸಚಿವ ಗಿರಿರಾಜ್ ಸಿಂಗ್‌ ವಿರುದ್ಧವೇ ಪ್ರತಿಭಟನೆ

ತಾಳ್ಮೆ ಕಳೆದುಕೊಂಡ ಬಿಜೆಪಿ ಕಾರ್ಯಕರ್ತರು: ಕೇಂದ್ರ ಸಚಿವ ಗಿರಿರಾಜ್ ಸಿಂಗ್‌ ವಿರುದ್ಧವೇ ಪ್ರತಿಭಟನೆ

- Advertisement -
- Advertisement -

ಕೇಂದ್ರ ಸಚಿವ ಮತ್ತು ಬೇಗುಸರಾಯ್‌ನ ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಅವರಿಗೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ  ಕಾರ್ಯಕರ್ತರು ಕಪ್ಪು ಬಾವುಟವನ್ನು ಪ್ರದರ್ಶಿಸಿ ʼಗೋ ಬ್ಯಾಕ್ʼ ಘೋಷಣೆಗಳನ್ನು ಕೂಗಿದ್ದು, ಕೇಂದ್ರ ಸಚಿವರು ಭಾರೀ ಮುಜುಗರವನ್ನು ಎದುರಿಸಿದ್ದಾರೆ.

ಸದಾ ವಿವಾದಾತ್ಮಕ ಹೇಳಿಕೆಗಳಿಗೆ ಪ್ರಚಾರದಲ್ಲಿದ್ದ ಗಿರಿರಾಜ್ ಸಿಂಗ್ ಅವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬಚ್ವಾಡಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಬಿಜೆಪಿಯ ಕಾರ್ಯಕರ್ತರ ಗುಂಪು ಆಕ್ರೋಶಗೊಂಡು ‘ಗಿರಿರಾಜ್ ಸಿಂಗ್, ಗೋ ಬ್ಯಾಕ್’ ಮತ್ತು ‘ಗಿರಿರಾಜ್ ಸಿಂಗ್ ಮುರ್ದಾಬಾದ್’ ಘೋಷಣೆಗಳನ್ನು ಕೂಗಿ ಕಪ್ಪು ಬಾವುಟವನ್ನು ಪ್ರದರ್ಶಿಸಿದ್ದಾರೆ. ಇದಲ್ಲದೆ ಪ್ರತಿಭಟನೆ ನಿರತ ಬಿಜೆಪಿ ಕಾರ್ಯಕರ್ತರು ಕೇಂದ್ರ ಸಚಿವರ ಬೆಂಗಾವಲು ಪಡೆಯ ವಾಹನವನ್ನು ತಡೆಯಲು ಯತ್ನಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಮಧ್ಯಸ್ಥಿಕೆಯ ನಂತರ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ.

ತಮ್ಮ ಸ್ವಕ್ಷೇತ್ರದಲ್ಲಿ ಪ್ರತಿಭಟನಾಕಾರರು ಏಕಾಏಕಿ ಆಕ್ರೋಶ ವ್ಯಕ್ತಪಡಿಸಿರುವುದರಿಂದ ಸಿಂಗ್‌ ಮುಜುಗರಕ್ಕೆ ಒಳಗಾಗಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರ ಪ್ರತಿಭಟನೆ ಮಹತ್ವ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಅವ್ಯವಹಾರ ಎಸಗಲಾಗಿದೆ,  ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಚ್‌ವಾಡ ಬ್ಲಾಕ್‌ನ ರಾಣಿ ಗ್ರಾಮದ ವಿನೋದ್‌ ರೈ ಸೇರಿದಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಪೆಪ್ಸಿ ಸ್ಥಾವರದಲ್ಲಿ ಬೇಗುಸರಾಯ್‌ನ ಯಾರೊಬ್ಬರಿಗೂ ಉದ್ಯೋಗ ಕೊಟ್ಟಿಲ್ಲ ಎಂದು ಕಪ್ಪು ಬಾವುಟ ಪ್ರದರ್ಶಿಸುತ್ತಿದ್ದವರು ಹೇಳಿದ್ದಾರೆ. ಗಿರಿರಾಜ್ ಸಿಂಗ್ ಅವರಿಗೆ ಐದರಿಂದ ಹತ್ತು ಲಕ್ಷ ರೂಪಾಯಿ ನೀಡಿದವರಿಗೆ ಮಾತ್ರ ಉದ್ಯೋಗ ನೀಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಆದರೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರನ್ನು ಸ್ವಾಗತಿಸಲು ಪಕ್ಷದ ಕಾರ್ಯಕರ್ತರು ರಸ್ತೆಬದಿಯಲ್ಲಿದ್ದರು, ಸಿಪಿಐ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ. ಆದರೆ ಕಪ್ಪು ಬಾವುಟ ಮತ್ತು ಬಿಜೆಪಿಯ ಬಾವುಟ ಹಿಡಿದುಕೊಂಡು ಬಿಜೆಪಿ ಕಾರ್ಯಕರ್ತರು ಸಚಿವರಿಗೆ ಧಿಕ್ಕಾರ ಕೂಗುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆ ತಮ್ಮ ಸ್ವಕ್ಷೇತ್ರದಲ್ಲಿ ಗಿರಿರಾಜ್ ಸಿಂಗ್ ಸಕ್ರಿಯರಾಗಿದ್ದರು. ಚುನಾವಣೆಯ ಹಿನ್ನೆಲೆ ತನ್ನ ಕ್ಷೇತ್ರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡುವುದರ ಜೊತೆಗೆ, ವಿವಿಧ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲೂ ಭಾಗವಹಿಸುತ್ತಿದ್ದರು.

ಜಿಲ್ಲೆಯ ಬಚ್ವಾಡಾ ಬ್ಲಾಕ್‌ನ ರಾಣಿ ಚೌಕ್ ಬಳಿ ರಾಷ್ಟ್ರೀಯ ಹೆದ್ದಾರಿ-28 ರಲ್ಲಿ ಕೇಂದ್ರ ಸಚಿವರ ಬೆಂಗಾವಲು ವಾಹನವನ್ನು ತಡೆಹಿಡಿಯಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾರು ಚಾಲಕ ಸ್ಥಳದಲ್ಲೇ ವಾಹನ ನಿಲ್ಲಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ಬಂದಿಲ್ಲ. ಈ ಕುರಿತು ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

ಇದನ್ನು ಓದಿ: ಮುಖ್ಯ ಚುನಾವಣಾ ಆಯುಕ್ತರ ನಡುವಿನ ಭಿನ್ನಾಭಿಪ್ರಾಯದಿಂದಲೇ ಅರುಣ್ ಗೋಯೆಲ್ ರಾಜೀನಾಮೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...