Homeಮುಖಪುಟಸತಿ ಸಹಗಮನ ಆಚರಣೆಯನ್ನು ವೈಭವೀಕರಿಸಿದ ಬಿಜೆಪಿ ಸಂಸದ ಜೋಶಿ: ವಿಪಕ್ಷ ನಾಯಕರ ಆರೋಪ

ಸತಿ ಸಹಗಮನ ಆಚರಣೆಯನ್ನು ವೈಭವೀಕರಿಸಿದ ಬಿಜೆಪಿ ಸಂಸದ ಜೋಶಿ: ವಿಪಕ್ಷ ನಾಯಕರ ಆರೋಪ

- Advertisement -
- Advertisement -

ಬಿಜೆಪಿ ನಾಯಕ ಸಿಪಿ ಜೋಶಿ ಅವರು, ‘ಸತಿ ಸಹಗಮನ’ದಂತಹ ಕೆಟ್ಟ ಆಚರಣೆಯನ್ನು ವೈಭವೀಕರಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಮಂಗಳವಾರ ಸಂಸತ್ತಿನ ಬಾವಿಗಿಳಿದು ಪ್ರತಿಭಟಿಸಿದರು. ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯಿಂದ ಭಾರಿ ಗದ್ದಲ ಏರ್ಪಟ್ಟಿತು. ಆನಂತರ ಸ್ಪೀಕರ್ ಸದನವನ್ನು ಮುಂದೂಡಿದರು.

ರಾಜಸ್ಥಾನದ ಚಿತ್ತೋರ್‌ಗಢದ ಸಂಸದ ಜೋಶಿ ಅವರ ಹೇಳಿಕೆಗೆ ವಿರೋಧ ಪಕ್ಷಗಳು ಲೋಕಸಭೆಯಲ್ಲಿ ಆಕ್ಷೇಪಣೆ ಹೊರಹಾಕಿದರು. ಈ ವೇಳೆ ಅವರು ತಮ್ಮ ಹೇಳಿಕೆಗಳ ಬಗ್ಗೆ ಸ್ಪಷ್ಟೀಕರಣವನ್ನು ನೀಡಬೇಕು ಎಂದು ಒತ್ತಾಯ ಕೇಳಿಬಂದಿತು.

ಬಿಜೆಪಿ ಸಂಸದರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ವಿರೋಧ ಪಕ್ಷದ ಸಂಸದರು ಆರೋಪಿಸಿದ ನಂತರ ಸಂಸತ್ತಿನ ಕೆಳಮನೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಗದ್ದಲ ಪ್ರಾರಂಭವಾಯಿತು. ಹಾಗಾಗಿ ಸದನವನ್ನು ಮಧ್ಯಾಹ್ನ 1:30ಕ್ಕೆ ಮುಂದೂಡಲಾಯಿತು.

ಲೋಕಸಭೆಯಲ್ಲಿ ಮಾತನಾಡುವ ವೇಳೆ ಜೋಶಿ ಅವರು, ಮೇವಾರ್‌ನ ರಾಣಿ ಪದ್ಮಾವತಿಯನ್ನು ಉಲ್ಲೇಖಿಸಿದ್ದಾರೆ. ರಾಣಿ ಪದ್ಮಾವತಿ ಆಕ್ರಮಣಕಾರ ಅಲ್ಲಾವುದೀನ್ ಖಿಲ್ಜಿಯಿಂದ ತನ್ನ ಗೌರವವನ್ನು ರಕ್ಷಿಸಲು ‘ಜೌಹರ್’ ಮಾಡುವ ಮೂಲಕ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ವಕೀಲೆ ವಿಕ್ಟೋರಿಯಾ ಗೌರಿ ಮದ್ರಾಸ್‌ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ; ಸುಪ್ರೀಂನಲ್ಲಿ ತಕರಾರು

ಜೌಹರ್ ಎಂಬುದು ವಿದೇಶಿ ಆಕ್ರಮಣಕಾರರಿಂದ ಸೆರೆಹಿಡಿಯುವಿಕೆ ಅಥವಾ ಅತ್ಯಾಚಾರವನ್ನು ತಪ್ಪಿಸಲು ಭಾರತದ ಭಾಗಗಳಲ್ಲಿ ಮಹಿಳೆಯರಿಂದ ಸಾಮೂಹಿಕ ಸ್ವಯಂ-ದಹನದ ಹಳೆಯ ಅಭ್ಯಾಸವಾಗಿತ್ತು.

ಜೋಶಿ ಅವರು ‘ಸತಿ ಸಹಗಮನ’ ಪದ್ಧತಿಯನ್ನು ವೈಭವೀಕರಿಸಿದ್ದಾರೆ ಎಂದು ಪ್ರತಿಪಕ್ಷದ ಸದಸ್ಯರಾದ ಎನ್‌ಸಿಪಿಯ ಸುಪ್ರಿಯಾ ಸುಳೆ, ಡಿಎಂಕೆಯ ಕನಿಮೋಳಿ, ದಯಾನಿಧಿ ಮಾರನ್, ಮತ್ತು ಕಾಂಗ್ರೆಸ್‌ನಿಂದ ಎ ರಾಜಾ, ಕೆ ಮುರಳೀಧರನ್ ಮತ್ತು ಇಮ್ತಿಯಾಜ್ ಜಲೀಲ್ (ಎಐಎಂಐಎಂ) ಅವರು ಪ್ರತಿಪಾದಿಸಿದರು.

ಆ ವೇಳೆ ಸಿಪಿ ಜೋಶಿ ಅವರು, ”ಸತಿ ಪದ್ಧತಿಯ ಬಗ್ಗೆ ಯಾವುದೇ ಉಲ್ಲೇಖವನ್ನು ನಾನು ಮಾಡಿಲ್ಲ. ಆದರೆ ಪದ್ಮಾವತಿ ತನ್ನ ಗೌರವವನ್ನು ರಕ್ಷಿಸಲು ‘ಜೌಹರ್’ (ಸತಿ ಸಹಗಮನ) ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದೇನೆ” ಎಂದು ಹೇಳಿದರು.

ಪ್ರತಿಪಕ್ಷದ ಸದಸ್ಯರು ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗುತ್ತಿದ್ದಂತೆ, ”ನಾನು ನನ್ನ ಮಾತಿಗೆ ಬದ್ಧನಾಗಿದ್ದೇನೆ” ಎಂದು ಜೋಶಿ ಹೇಳಿದರು.

ಇದಕ್ಕೂ ಮೊದಲು ಲೋಕಸಭೆಯ ಸದನದಲ್ಲಿ, ಸಾರ್ವಜನಿಕ ವಲಯದ ಸಂಸ್ಥೆಗಳಾದ ಎಲ್‌ಐಸಿ ಮತ್ತು ಎಸ್‌ಬಿಐ ಹೂಡಿಕೆಯಲ್ಲಿನ ವಂಚನೆಗಳ ಬಗ್ಗೆ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳ ನಾಯಕರು ಪ್ರತಿಭಟನೆ ನಡೆಸುತ್ತಿದ್ದರು.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಮಾತನಾಡಿ, ಪ್ರತಿಪಕ್ಷಗಳು ಕೃತಜ್ಞತಾ ನಿರ್ಣಯಕ್ಕೆ ಅನುಮತಿ ನೀಡಲು ಸಿದ್ಧವಿದ್ದರೂ, ಸಧ್ಯ ನಡೆಯುತ್ತಿರುವ ಹಿಂಡನ್‌ಬರ್ಗ್-ಅದಾನಿ ವಿವಾದಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡುವುದು “ಮೊದಲ ಆದ್ಯತೆ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...