Homeಕರ್ನಾಟಕಆರ್‌ಡಿ ಪಾಟೀಲ್ ಮನೆಯಲ್ಲಿ ಆತಿಥ್ಯ ಸ್ವೀಕರಿಸಿದ ಬಿಜೆಪಿ ಸಂಸದ; ಪಿಎಸ್‌ಐ ಹಗರಣದ ಕಿಂಗ್‌ಪಿನ್ ಸಹಕಾರ ಕೇಳಿದ...

ಆರ್‌ಡಿ ಪಾಟೀಲ್ ಮನೆಯಲ್ಲಿ ಆತಿಥ್ಯ ಸ್ವೀಕರಿಸಿದ ಬಿಜೆಪಿ ಸಂಸದ; ಪಿಎಸ್‌ಐ ಹಗರಣದ ಕಿಂಗ್‌ಪಿನ್ ಸಹಕಾರ ಕೇಳಿದ ಉಮೇಶ್ ಜಾಧವ್!

- Advertisement -
- Advertisement -

ಇಡೀ ರಾಜ್ಯದ ಯುವಕರ ಭವಿಷ್ಯವನ್ನೇ ಹಾಳು ಮಾಡಿದ್ದ ಕಿಡಿಗೇಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್ ಪಿನ್ ಆರ್.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿ ಊಟೋಪಚಾರ ಮಾಡಿರುವುದು ಕಲಬುರ್ಗಿಯಲ್ಲಿ ಆಕ್ರೋಶದ ಕಟ್ಟೆಯನ್ನೇ ಒಡೆಸಿದೆ.

58 ಸಾವಿರಕ್ಕೂ ಹೆಚ್ಚಿನ ಯುವಜನರ ಭವಿಷ್ಯದ ಪಾಲಿಗೆ ಶಾಪವಾಗಿ ಪರಿಣಮಿಸಿ, ಪಿಎರಸ್‌ಐ ನೇಮಕಾತಿಯಲ್ಲಿ ಹಗರಣ ನಡೆಸಿ, ಪರೀಕ್ಷೆಯಲ್ಲಿ ಅನೈತಿಕ ಚಟುವಟಿಕೆಗಳನ್ನು ನಡೆಸಿ ಈಗ ಜೈಲುಪಾಲಾಗಿರುವ ಆರ್‌ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ತೆರಳಿ ಮತಯಾಚಿಸಿ, ಬೆಂಬಲ ಕೇಳಿರುವುದು ಅವರಿಗೆ ತಿರುಗುಬಾಣವಾಗಿದೆ.

ಇತ್ತೀಚಿಗೆ ನಡೆದಿದ್ದ ಪಿಎಸ್‌ಐ ಮರುಪರೀಕ್ಷೆ ವೇಳೆ ಕೂಡ ಅಕ್ರಮ ಮಾಡಲು ಯತ್ನಿಸಿ ಸಿಕ್ಕಿಬಿದ್ದು, ಇದೀಗ ಜೈಲುಗಂಬಿ ಎಣಿಸುತ್ತಿರುವ ಆರ್‌ಡಿ ಪಾಟೀಲ್ ಮನೆಗೆ ಉಮೇಶ್ ಜಾಧವ್ ಭೇಟಿಯಾರುವುದನ್ನು ಸಮರ್ಥಸಿಕೊಳ್ಳುವುದು ಜಿಲ್ಲೆಯ ಬಿಜೆಪಿ ಕಾರ್ಯಕರ್ತರಿಗೂ ಬಿಸಿತುಪ್ಪವಾಗಿ ಪರಿಣಮಿಸಿದೆ. ಈ ಭೇಟಿ ಮೂಲಕ ಜನರಿಗೆ ಯಾವ ರೀತಿಯ ಸಂದೇಶ ನೀಡಲು ಬಿಜೆಪಿ ಸಂಸದ ಮುಂದಾಗಿದ್ದಾರೆ ಎಂಬ ಪ್ರಶ್ನೆಗೆ ಜಿಲ್ಲೆಯ ಯಾವುದೇ ಬಿಜೆಪಿ ನಾಯಕರ ಬಳಿಯೂ ಉತ್ತರವಿಲ್ಲದಾಗಿದೆ.

ಅಘಜಲಪುರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಆರ್‌ಡಿ ಪಾಟೀಲ್ ಅನ್ನು ಉಮೇಶ್ ಜಾಧವ್ ತನ್ನ ಚುನಾವಣೆಯಲ್ಲಿ ಸಹಕರಿಸುವಂತೆ ಕೇಳಿಕೊಂಡಿದ್ದಾರೆ. ಇದು ಜಿಲ್ಲೆಯ ಜನರಲ್ಲಿ ಬಿಜೆಪಿ ಕುರಿತು ಈಗಾಗಲೇ ಮೂಡಿದ್ದ ತಿರಸ್ಕಾರ ಮನೋಭಾವವನ್ನು ದುಪ್ಪಟ್ಟು ಮಾಡಿದೆ.

ಇದನ್ನೂ ಓದಿ; ಟಿಎಂಸಿ ಚುನಾವಣಾ ಪ್ರಣಾಳಿಕೆ: ಸಿಎಎ, ಎನ್‌ಆರ್‌ಸಿ ರದ್ದು; ಏಕರೂಪ ನಾಗರಿಕ ಸಂಹಿತೆ ಜಾರಿ ಇಲ್ಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...