Homeಮುಖಪುಟಪಾಕಿಸ್ತಾನಿ ಲೇಖಕನ ಪುಸ್ತಕ ಬೋಧನೆಗೆ ಬಿಜೆಪಿ ಸಂಸದ ಆಕ್ಷೇಪ: 252 ಶಿಕ್ಷಣ ತಜ್ಞರ ಖಂಡನೆ

ಪಾಕಿಸ್ತಾನಿ ಲೇಖಕನ ಪುಸ್ತಕ ಬೋಧನೆಗೆ ಬಿಜೆಪಿ ಸಂಸದ ಆಕ್ಷೇಪ: 252 ಶಿಕ್ಷಣ ತಜ್ಞರ ಖಂಡನೆ

- Advertisement -
- Advertisement -

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯವು ಪಾಕಿಸ್ತಾನಿ ಲೇಖಕರೊಬ್ಬರ ಪುಸ್ತಕವನ್ನು ಬೋಧಿಸುತ್ತಿತ್ತು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸಂಸದ ಹರನಾಥ್ ಸಿಂಗ್ ಯಾದವ್ ರಾಜ್ಯಸಭೆಯಲ್ಲಿ ಪಾಕಿಸ್ತಾನಿ ಲೇಖಕರ ಪುಸ್ತಕದ ಸಿಂಧುತ್ವದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಅವರ ಪ್ರಶ್ನೆಯನ್ನು 252 ಶಿಕ್ಷಣ ತಜ್ಞರು ಖಂಡಿಸಿದ್ದಾರೆ.

ಪಾಕಿಸ್ತಾನಿ ಲೇಖಕರ ಪುಸ್ತಕದ ಸಿಂಧುತ್ವದ ಬಗ್ಗೆ ಯಾದವ್ ರಾಜ್ಯಸಭೆಯಲ್ಲಿ ಪ್ರಶ್ನಿಸಿದ್ದು, ಇದು “ಭಯೋತ್ಪಾದನೆಯನ್ನು ಬೆಂಬಲಿಸುತ್ತದೆಯೇ?” ಮತ್ತು “ಭಾರತೀಯ ನಾಗರಿಕರಿಗೆ ಅವಮಾನಕರವಾಗಿದೆಯೇ? ಎಂದು ಸಂಸತ್ತಿನಲ್ಲಿ ಶಿಕ್ಷಣ ಸಚಿವಾಲಯದಿಂದ ಉತ್ತರವನ್ನು ಕೇಳಿದ್ದರು.

ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ಭಯೋತ್ಪಾದನೆ ಬೋಧಿಸಲಾಗುತ್ತಿದೆ ಎನ್ನುವ ರೀತಿಯಲ್ಲಿ ಬಿಜೆಪಿ ಸಂಸದರು ಪ್ರಶ್ನೆಸಿರುವುದನ್ನು ಭಾರತೀಯ ಉನ್ನತ ಶಿಕ್ಷಣ ಸಂಸ್ಥೆ 252 ಶಿಕ್ಷಣ ತಜ್ಞರು ಮತ್ತು ವಿದ್ವಾಂಸರ ಗುಂಪು ಖಂಡಿಸಿ, ಹೇಳಿಕೆ ಬಿಡುಗಡೆ ಮಾಡಿದ್ದಾರೆ.

252 ಶಿಕ್ಷಣ ತಜ್ಞರಲ್ಲಿ ಪ್ರಮುಖ ಇತಿಹಾಸಕಾರ ಮತ್ತು ಶೈಕ್ಷಣಿಕ ರೊಮಿಲಾ ಥಾಪರ್, ಜೆಎನ್‌ಯುನ ಪ್ರೊಫೆಸರ್ ಎಮೆರಿಟಾ ಸೇರಿದ್ದಾರೆ. ದೆಹಲಿ ವಿಶ್ವವಿದ್ಯಾಲಯದಿಂದ ಸತೀಶ್ ದೇಶಪಾಂಡೆ, ನಂದಿನಿ ಸುಂದರ್, ಅಭಾ ದೇವ್ ಹಬೀಬ್ ಮತ್ತು ಅಪೂರ್ವಾನಂದ್. ಸುಕಾಂತ ಚೌಧುರಿ, ಜಾದವ್‌ಪುರ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ. ಲಕ್ಷ್ಮಿ ಸುಬ್ರಮಣಿಯನ್ ಮತ್ತು ಪಾರ್ಥ ಚಟರ್ಜಿ, ಕಲ್ಕತ್ತಾದ ಸಮಾಜ ವಿಜ್ಞಾನಗಳ ಅಧ್ಯಯನ ಕೇಂದ್ರದ ಗೌರವ ಪ್ರಾಧ್ಯಾಪಕರು. ಜೆಎನ್‌ಯು ಪ್ರಾಧ್ಯಾಪಕಿ ಆಯೇಷಾ ಕಿದ್ವಾಯಿ. ಕೇರಳ ಕೌನ್ಸಿಲ್ ಫಾರ್ ಹಿಸ್ಟಾರಿಕಲ್ ರಿಸರ್ಚ್ ನಿರ್ದೇಶಕಿ ಜಿ. ಅರುಣಿಮಾ. ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಿಂದ ಇತಿಹಾಸ ಪ್ರಾಧ್ಯಾಪಕ ಮೃದು ರೈ. ಮತ್ತು ಐಐಟಿ ದೆಹಲಿಯಿಂದ ಸಿಮೋನಾ ಸಾಹ್ನಿ ಹಲವಾರು ಇತರರು ಬಿಜೆಪಿ ಸಂಸದರ ಪ್ರಶ್ನೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ ಎಂಬ ಫ್ಲೆಕ್ಸ್ ಹಾಕಿದ ಬಿಜೆಪಿಯ ಆಯನೂರು ಮಂಜುನಾಥ್!

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯವು ಪಾಕಿಸ್ತಾನಿ ಲೇಖಕರೊಬ್ಬರ ಪುಸ್ತಕವನ್ನು ಬೋಧಿಸುತ್ತಿತ್ತು. ಈ ಬಗ್ಗೆ ಆಕ್ಷೇಪಗಳು ಬಂದ ಹಿನ್ನೆಲೆಯಲ್ಲಿ ಒಂದು ವರ್ಷದ ಬಳಿಕ ಪಠ್ಯಕ್ರಮದಿಂದ ಅದನ್ನು ತೆಗೆದುಹಾಕಬೇಕಾಯಿತು. ಪಾಕಿಸ್ತಾನಿ ಲೇಖಕರ ಪುಸ್ತಕವನ್ನು ಜಾಮಿಯಾ, ಎಎಂಯು ಅಥವಾ ಇನ್ನಾವುದೇ ಶಿಕ್ಷಣ ಸಂಸ್ಥೆಯಲ್ಲಿ ಕಲಿಸಲಾಗುತ್ತಿದೆಯೇ? ಎಂದು ಯುಜಿಸಿ (ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು) ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಕೇಳಿದೆ.

ಮಾರ್ಚ್ 16 ರಂದು ರಾಜ್ಯಸಭೆಯಲ್ಲಿ ಈ ಪ್ರಶ್ನೆಯನ್ನು ಎತ್ತಲಾಯಿತು, ಅಲ್ಲಿ ಮಾರ್ಚ್ 22, 2023 ರೊಳಗೆ ಪ್ರತಿಕ್ರಿಯಿಸಲು ಕೇಂದ್ರೀಯ ವಿಶ್ವವಿದ್ಯಾಲಯಗಳ ರಿಜಿಸ್ಟ್ರಾರ್‌ಗಳಿಗೆ ತಿಳಿಸಲಾಯಿತು. ಲೇಖಕರ ಹೆಸರನ್ನು ಉಲ್ಲೇಖಿಸದೆ ಯುಜಿಸಿ ತನ್ನ ಪ್ರಶ್ನೆಯಲ್ಲಿ, ”ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಅಥವಾ ಯಾವುದೇ ಇತರ ಶಿಕ್ಷಣ ಸಂಸ್ಥೆಗಳಲ್ಲಿ ಪಾಕಿಸ್ತಾನದ ಲೇಖಕರ ಪುಸ್ತಕವನ್ನು ಬೋಧಿಸಲಾಗುತ್ತಿದೆ ಎಂಬ ಅಂಶವನ್ನು ಸರ್ಕಾರ ಗಮನಿಸಿದೆಯೇ? ಎಂದು ಕೇಳಿದೆ. ಆ ಪುಸ್ತಕದಲ್ಲಿ ಭಾರತೀಯ ನಾಗರಿಕರನ್ನು ಅವಮಾನಿಸಲಾಗಿದೆಯೇ? ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುತ್ತದೆಯೇ?” ಎಂದು ಯುಜಿಸಿ ಕೇಳಿದೆ.

ಪಾಕಿಸ್ತಾನಿ ಲೇಖಕರು ಬರೆದಿರುವ ಪಠ್ಯಪುಸ್ತಕಗಳ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಸರ್ಕಾರವು ಮುಂದಾಗುತ್ತದೆಯೇ? ಎಂದು ಯುಜಿಸಿ ಪ್ರಶ್ನಿಸಿದೆ.

ಈ ಬಗ್ಗೆ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಪ್ರೊಫೆಸರ್ ನಜೀಮ್ ಹುಸೇನ್ ಜಾಫ್ರಿ ಪ್ರತಿಕ್ರಿಯಿಸಿ, ”ನಮ್ಮ ವಿಶ್ವವಿದ್ಯಾಲಯದ ನಿಗದಿತ ಪಠ್ಯಕ್ರಮದಲ್ಲಿ ಪಾಕಿಸ್ತಾನಿ ಲೇಖಕರ ಪುಸ್ತಕವನ್ನು ಭೋದಿಸಲಾಗುತ್ತದೆ ಆದರೆ ಅದರಲ್ಲಿ ಯಾವದೇ ಅವಹೇಳನಕಾರಿ ಅಥವಾ ಭಯೋತ್ಪಾದನೆಯನ್ನು ಬೆಂಬಲಿಸುವ ಬೋಧನೆಗಳಿಲ್ಲ ಎಂದು ನಾವು ಈಗಾಗಲೇ ಯುಜಿಸಿ ಪತ್ರಕ್ಕೆ ಪ್ರತಿಕ್ರಿಯಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಆದರೂ, ಕಳೆದ ವರ್ಷ ಪಾಕಿಸ್ತಾನಿ ಲೇಖಕರ ಬೋಧನೆಗಳು ಆಕ್ಷೇಪಾರ್ಹವೆಂದು ಕೆಲವು ದೂರುಗಳು ಬಂದ ನಂತರ ಪಾಕಿಸ್ತಾನಿ ಲೇಖಕರೊಬ್ಬರ ಬೋಧನೆಗಳನ್ನು ಪಠ್ಯದಿಂದ ತೆಗೆದುಹಾಕಲು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ ನಿರ್ಧರಿಸಿತು. ಎರಡು ಅಲ್ಪಸಂಖ್ಯಾತ ಸಂಸ್ಥೆಗಳನ್ನು ಗುರಿಯಾಗಿಸುವ ಈ ಕಲ್ಪನೆಯನ್ನು ಜಾಫ್ರಿ ವಿರೋಧಿಸಿದ್ದಾರೆ.

ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯ, ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಜಾಮಿಯಾ ಹಮ್ದರ್ದ್ ವಿಶ್ವವಿದ್ಯಾಲಯದಲ್ಲಿ ಜಿಹಾದಿ ಇಸ್ಲಾಮಿಕ್ ಕೋರ್ಸ್ ಪಠ್ಯಕ್ರಮದ ಬಗ್ಗೆ ಕಳೆದ ವರ್ಷ 25 ಶಿಕ್ಷಣತಜ್ಞರು ಭಾರತದ ಪ್ರಧಾನಿಗೆ ಬಹಿರಂಗ ಪತ್ರವನ್ನು ಬರೆದಿದ್ದಾರೆ. ಅಬುಲ್ ಅಲಾ ಮೌದೂದಿಯವರ ಬರಹಗಳು ಮೂರು ವಿಶ್ವವಿದ್ಯಾನಿಲಯಗಳ ಪಠ್ಯಕ್ರಮದ ಭಾಗವಾಗಿರುವುದು ತೀವ್ರ ಕಳವಳ ಮತ್ತು ಕಳವಳಕಾರಿ ಸಂಗತಿ ಎಂದು ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ. ಇದರಿಂದ ವಿಶ್ವವಿದ್ಯಾಲಯವು ಪಠ್ಯಕ್ರಮದಿಂದ ಆ ಭಾಗವನ್ನು ಅಧಿಕೃತವಾಗಿ ತೆಗೆದುಹಾಕಬೇಕಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...