Homeಮುಖಪುಟನಾನು ನಿಮ್ಮ ಮಗನೋ ಅಥವಾ ಭಯೋತ್ಪಾದಕನೋ? ದೆಹಲಿ ಜನರು ನಿರ್ಧರಿಸುತ್ತಾರೆ : ಕೇಜ್ರಿವಾಲ್ 

ನಾನು ನಿಮ್ಮ ಮಗನೋ ಅಥವಾ ಭಯೋತ್ಪಾದಕನೋ? ದೆಹಲಿ ಜನರು ನಿರ್ಧರಿಸುತ್ತಾರೆ : ಕೇಜ್ರಿವಾಲ್ 

- Advertisement -
- Advertisement -

ಕಳೆದ ವಾರ ಪಶ್ಚಿಮ ದೆಹಲಿಯಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು “ಭಯೋತ್ಪಾದಕ” ಎಂದು ಕರೆದಿರುವುದು ವಿವಾದಕ್ಕೀಡಾಗಿದ್ದು, ಇದು ಬಿಜೆಪಿಗೆ ಬಹುದೊಡ್ಡ ಹಿನ್ನೆಡೆ ಎನ್ನಲಾಗುತ್ತಿದೆ.

“ಹಿಂದೂ ಮಹಿಳೆಯರನ್ನು ಮುಸ್ಲಿಂ ಪುರುಷರು ಎತ್ತಿಕೊಂಡುಹೋದ ಉದಾಹರಣೆಗಳನ್ನು ನಾವು ಕೇಳುತ್ತೇವೆ. ಕೇಜ್ರಿವಾಲ್ ನಂತಹ ಭಯೋತ್ಪಾದಕರು ಎಲ್ಲೆಡೆ ಅಡಗಿರುವ ಕಾರಣ ಯಾವುದೇ ಕ್ರಮ ತೆಗೆದುಕೊಳ್ಳಲಾಗುವುದಿಲ್ಲ ಎಂದುದ್ದಲ್ಲದೆ, ನಾವು ಕಾಶ್ಮೀರದಲ್ಲಿ ಪಾಕಿಸ್ತಾನ ಭಯೋತ್ಪಾದಕರೊಂದಿಗೆ ಅಥವಾ ಕೇಜ್ರಿವಾಲ್ ನಂತಹ ಭಯೋತ್ಪಾದಕರೊಂದಿಗೆ ಹೋರಾಡಬೇಕೇ?” ಎಂದು ವರ್ಮಾ ಮತದಾರರನ್ನು ಪ್ರಶ್ನಿಸಿದ್ದರು.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಭಾವನಾತ್ಮಕವಾಗಿ ಮಾತನಾಡಿದ ಕೇಜ್ರಿವಾಲ್, “ನಾನು ಹೇಗೆ ಭಯೋತ್ಪಾದಕನಾಗುತ್ತೇನೆ? ನಾನು ಜನರಿಗೆ ಉತ್ತಮ ಆರೋಗ್ಯಕ್ಕಾಗಿ ಷಧಿಗಳನ್ನು ವ್ಯವಸ್ಥೆ ಮಾಡಿದ್ದೇನೆ … ಅಗತ್ಯವಿರುವವರಿಗೆ ತುಂಬಾ ಕೆಲಸ ಮಾಡಿದ್ದೇನೆ, ನಾನು ಎಂದಿಗೂ ನನ್ನ ಅಥವಾ ನನ್ನ ಕುಟುಂಬದ ಬಗ್ಗೆ ಯೋಚಿಸಿಲ್ಲ… ರಾಷ್ಟ್ರಕ್ಕಾಗಿ ನನ್ನ ಜೀವನವನ್ನು ನೀಡಲು ನಾನು ಸಿದ್ಧನಿದ್ದೇನೆ” ಎಂದಿದ್ದಾರೆ.

“ನಾನು ಮಧುಮೇಹ ರೋಗಿಯಾಗಿದ್ದೇನೆ, ನಾನು ದಿನಕ್ಕೆ ನಾಲ್ಕು ಬಾರಿ ಇನ್ಸುಲಿನ್ ತೆಗೆದುಕೊಳ್ಳುತ್ತೇನೆ. ವೈದ್ಯರು ನಾನು ರಾಜಕೀಯಕ್ಕೆ ಸೇರಬಾರದೆಂದು ಹೇಳಿದ್ದರು. ಇಲ್ಲವಾದಲ್ಲಿ ನಾನು ಬದುಕುವುದಿಲ್ಲ ಎಂದು ಸಹ ಹೇಳಿದ್ದರು” ಎಂದು ತಮ್ಮ ಭ್ರಷ್ಟಾಚಾರ ವಿರೋಧಿ ಹೋರಾಟದ ದಿನಗಳನ್ನು ನೆನೆಸಿಕೊಂಡಿದ್ದಾರೆ.

“ನಾನು ಬಯಸಿದರೆ… ನನ್ನ ಅನೇಕ ಸ್ನೇಹಿತರು ಮತ್ತು ಸಹೋದ್ಯೋಗಿಗಳು ಮಾಡಿದ ರೀತಿಯಲ್ಲಿ ನಾನು ಸಹ ವಿದೇಶಕ್ಕೆ ಹೋಗಬಹುದಿತ್ತು …  ನಾನು ನನ್ನ ಕೆಲಸವನ್ನು ಬಿಟ್ಟುಬಿಟ್ಟೆ … ಭಯೋತ್ಪಾದಕನು ಇದನ್ನೆಲ್ಲಾ ಮಾಡುತ್ತಾನೆಯೇ?” ಪ್ರತಿಷ್ಠಿತ ಐಐಟಿ ಖರಗ್‌ಪುರದಿಂದ ಪದವಿ ಪಡೆದ ಕೇಜ್ರಿವಾಲ್, “ನಾನು ಇದನ್ನೆಲ್ಲ ನಿರ್ಧರಿಸಲು ದೆಹಲಿಯ ಜನರಿಗೆ ಬಿಡುತ್ತೇನೆ … ನಾನು ಅವರ ಮಗ, ಅವರ ಸಹೋದರನೋ ಅಥವಾ ಭಯೋತ್ಪಾದಕ” ಎಂದು ಅವರೆ ನಿರ್ಧರಿಸಲು ಎಂದು ಘೋಷಿಸಿದ್ದಾರೆ.

ಕೇಜ್ರಿವಾಲ್‌ರವರು ದೆಹಲಿಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದು, ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ಶಾಹೀನ್ ಬಾಗ್‌ನಲ್ಲಿ ಪೌರತ್ವ ವಿರೋಧಿ ಪ್ರತಿಭಟನಾಕಾರರು “ನಿಮ್ಮ ಮನೆಗೆ ನುಗ್ಗಿ ನಿಮ್ಮ ಸಹೋದರಿಯರು, ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತಾರೆ” ಎಂದು ವರ್ಮಾ ಕೆಟ್ಟದಾಗಿ ಮಾತನಾಡಿದ್ದರು.

ಘಟನೆಯ ವೀಡಿಯೊವೊಂದರಲ್ಲಿ ವರ್ಮಾ ಅವರು “ಕೇಜ್ರಿವಾಲ್ ಮತ್ತೆ ಅಧಿಕಾರಕ್ಕೆ ಹಿಂದಿರುಗಿದರೆ, ಶಾಹೀನ್ ಬಾಗ್ ರೀತಿಯ ಜನರು ಬೀದಿಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಾರೆ” ಮತ್ತು ಇದು “ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರಿಗೆ ಆದ ಪರಿಸ್ಥಿತಿ ಬರುತ್ತದೆ ಎಂದಿದ್ದರು.

“ನಾನು ದೆಹಲಿಗಾಗಿ ಐದು ವರ್ಷ, ಹಗಲು ರಾತ್ರಿ ಶ್ರಮಿಸಿದ್ದೇನೆ. ದೆಹಲಿ ಜನರಿಗಾಗಿ ನಾನು ಎಲ್ಲವನ್ನೂ ತ್ಯಜಿಸಿದ್ದೇನೆ. ರಾಜಕೀಯ ಪ್ರವೇಶಿಸಿದ ನಂತರ ನಾನು ಅನೇಕ ಸವಾಲುಗಳನ್ನು ಎದುರಿಸಿದ್ದೇನೆ, ಇದರಿಂದ ಜನರು ತಮ್ಮ ಜೀವನವನ್ನು ಸುಧಾರಿಸಲು ಸಹಾಯವಾಗಿದೆ. ಇದಕ್ಕೆ ಪ್ರತಿಯಾಗಿ, ಬಿಜೆಪಿ ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತಿದೆ. ಇದರಿಂದ ನನಗೆ ತುಂಬಾ ಬೇಸರವಾಗಿದೆ ”ಎಂದು ಕೇಜ್ರಿವಾಲ್ ನಿನ್ನೆ ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...