Homeಮುಖಪುಟಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

2008 ರ ಮಾಲೆಗಾಂವ್ ಭಯೋತ್ಪಾದಕ ಸ್ಫೋಟದ ಪ್ರಮುಖ ಆರೋಪಿಯಾಗಿರುವ ಇವರು ಪ್ರಸ್ತುತ ಅನಾರೋಗ್ಯದ ನೆಪದಲ್ಲಿ ಜಾಮೀನಿನ ಮೇಲೆ ಹೊರಗಿದ್ದಾರೆ

- Advertisement -
- Advertisement -

ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ, ಭಾರತೀಯ ಜನತಾ ಪಕ್ಷದ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಆರೋಗ್ಯದ ನೆಪ ಜಾಮೀನಿನ ಮೇಲೆ ಹೊರಗಿದ್ದಾರೆ. ಗಾಲಿಕುರ್ಚಿಯಲ್ಲಿ ಓಡಾಡುತ್ತಿದ್ದರೂ ಹಲವು ಚಟುವಟಿಕೆಗಳಲ್ಲಿ ಭಾಗವಹಿಸಿಸುವಲ್ಲಿ ಹಿಂದೆ ಬೀಳುತ್ತಿಲ್ಲ.

ಈ ಹಿಂದೆ ಕೂಡ ಬ್ಯಾಸ್ಕೆಟ್‌ಬಾಲ್ ಆಡುವ, ಗಾರ್ಬಾ ಡ್ಯಾನ್ಸ್ ಮಾಡುವ ವಿಡಿಯೊಗಳು ವೈರಲ್ ಆಗಿ, ಖಂಡನೆ ವ್ಯಕ್ತವಾಗಿತ್ತು. ಇತ್ತೀಚಿನ ವೈರಲ್ ವೀಡಿಯೊದಲ್ಲಿ, ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಕ್ರಿಕೆಟ್ ಆಡುತ್ತಿದ್ದಾರೆ.

ಸುಮಾರು ಒಂದು ನಿಮಿಷದ ವೀಡಿಯೊದಲ್ಲಿ ಭೋಪಾಲ್‌ನ ಶಕ್ತಿ ನಗರ ಪ್ರದೇಶದಲ್ಲಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮೈದಾನದಲ್ಲಿ ಬ್ಯಾಟ್‌ನಿಂದ ಚೆಂಡನ್ನು ಹೊಡೆಯುತ್ತಿರುವುದು, ಹಲವಾರು ಜನರು ಹರ್ಷೋದ್ಗಾರ ಮಾಡುವುದನ್ನು ನೋಡಬಹುದಾಗಿದೆ.

ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಅನಾರೋಗ್ಯದ ಕಾರಣ ನೀಡಿ ನ್ಯಾಯಾಲಯಕ್ಕೆ ಹಾಜರಾಗಲು ಆಗುವುದಿಲ್ಲ ಎಂಬ ಕಾರಣ ನೀಡಿರುವ ಸಂಸದೆ, ಈ ಹಿಂದೆ ನೃತ್ಯ ಮತ್ತು ಬಾಸ್ಕೆಟ್‌ಬಾಲ್ ಆಡಿದ್ದಕ್ಕಾಗಿ ಪ್ರತಿಪಕ್ಷಗಳಿಂದ ಪದೇ ಪದೇ ಟೀಕೆಗೆ ಗುರಿಯಾಗಿದ್ದಾರೆ.

ಇದನ್ನೂ ಓದಿ: ಆರೋಗ್ಯ ಸರಿಯಿಲ್ಲ ಎಂದಿದ್ದ ಪ್ರಜ್ಞಾ ಠಾಕೂರ್‌‌ – ಡ್ಯಾನ್ಸ್‌ ಮಾಡುವ ವಿಡಿಯೊ ವೈರಲ್‌!

ತಮ್ಮ ಪಕ್ಷ ಬಿಜೆಪಿಯನ್ನು ಆಗಾಗ್ಗೆ ಮುಜುಗರಕ್ಕೀಡು ಮಾಡುವಂತಹ ವಿವಾದಾತ್ಮಕ ಟೀಕೆಗಳಿಗೆ ಹೆಸರುವಾಸಿಯಾದ ಪ್ರಜ್ಞಾ ಠಾಕೂರ್ 2008 ರ ಮಾಲೆಗಾಂವ್ ಭಯೋತ್ಪಾದಕ ಸ್ಫೋಟದ ಪ್ರಮುಖ ಆರೋಪಿಯಾಗಿದ್ದಾರೆ. ಅವರು ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದು, 2017 ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಅವರಿಗೆ ಜಾಮೀನು ನೀಡಿತ್ತು. ಜಾಮೀನು ಪಡೆಯುವ ಮೊದಲು ಅವರು ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿದ್ದರು.

ಮುಂಬೈಯಿಂದ 200 ಕಿ.ಮೀ ದೂರದಲ್ಲಿರುವ ಮಾಲೆಗಾಂವ್ ಎಂಬ ಪಟ್ಟಣದ ಮಸೀದಿಯ ಬಳಿ ಮೋಟಾರ್ ಸೈಕಲ್‌ನಲ್ಲಿ ಇಟ್ಟಿದ್ದ ಸ್ಫೋಟಕ ಸ್ಪೋಟಗೊಂಡು 10 ಜನರು ಸಾವನ್ನಪ್ಪಿದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ ಪ್ರಜ್ಙಾ ಠಾಕೂರ್‌ ಪ್ರಮುಖ ಆರೋಪಿಯಾಗಿದ್ದಾರೆ.


ಇದನ್ನೂ ಓದಿ: ಸಾವರ್ಕರ್‌‌‌ಗೆ ಗೋಮಾಂಸ ತಿನ್ನುವುದರ ಬಗ್ಗೆ ಯಾವುದೆ ತಕರಾರು ಇರಲಿಲ್ಲ: ದಿಗ್ವಿಜಯ ಸಿಂಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...