“ನಕಲಿ ವಿಡಿಯೊದಲ್ಲಿ ಇರುವುದು ನಾನಲ್ಲ. ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ” ಎಂದು ಮಾಜಿ ಕೇಂದ್ರ ಸಚಿವ, ಸಂಸದ ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಾದ ಟ್ವಿಟರ್ ಮತ್ತು ಫೇಸ್‌ಬುಕ್‌ಗಳಲ್ಲಿ ಬರೆದಿರುವ ಅವರು, ವಿಡಿಯೊದಲ್ಲಿರುವುದು ನಾನಲ್ಲ, ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದ್ದೇನೆ ಎಂದು ಹೇಳಿದ್ದಾರೆ.
“ಆತ್ಮೀಯ ಹಿತೈಷಿಗಳೇ, ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ ಎಂದು ತಿಳಿಸಲು ಇಚ್ಚಿಸುತ್ತೇನೆ” ಎಂದಿದ್ದಾರೆ.
ಇದನ್ನೂ ಓದಿ: ಸೈಮಾ-2021: ರಚಿತಾ ರಾಮ್, ರಶ್ಮಿಕಾ, ದರ್ಶನ್, ರಕ್ಷಿತ್ ಶೆಟ್ಟಿ, ಬಿ.ಸುರೇಶ್‌ಗೆ ಪ್ರಶಸ್ತಿ
ಆತ್ಮೀಯ ಹಿತೈಷಿಗಳೇ,
ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವೀಡಿಯೊದಲ್ಲಿ ಇರುವುದು ನಾನಲ್ಲ, ನನ್ನ ವಿರೋಧಿಗಳು ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಇದನ್ನು ನಿರ್ಮಿಸಿದ್ದಾರೆ ಎಂದು ತಿಳಿಸಲು ಇಚ್ಚಿಸುತ್ತೇನೆ. 1/3
— Sadananda Gowda (@DVSadanandGowda) September 19, 2021
“ನಾನು ಈಗಾಗಲೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ನನಗೆ ನಂಬಿಕೆ ಇದೆ, ಅಪರಾಧಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಅಲ್ಲದೇ, ನಾನು ನ್ಯಾಯಾಲಯದ ತಡೆಯಾಜ್ಞೆಯ ಪ್ರಕಾರ, ವಿಷಯವನ್ನು ಫಾರ್ವರ್ಡ್ ಮಾಡುವ, ಅಪ್‌ಲೋಡ್ ಮಾಡುವ ಯಾರಾದರೂ ಕಾನೂನಿನ ಸಂಬಂಧಿತ ವಿಭಾಗಗಳ ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ. ಈ ರೀತಿ ಮಾಡುವ ಯಾರಾದರೂ ನಿಮಗೆ ತಿಳಿದಿದ್ದರೆ, ದಯವಿಟ್ಟು ನನಗೆ ಇನ್ ಬಾಕ್ಸ್ ಮಾಡಿ” ಎಂದಿದ್ದಾರೆ.
ನನ್ನ ರಾಜಕೀಯ ಜೀವನ ಹಾಗೂ ನನ್ನ ಏಳಿಗೆಯನ್ನು ಸಹಿಸದ ದುಷ್ಕರ್ಮಿಗಳು ನನ್ನ ತೇಜೋವಧೆ ಮಾಡಲು ಅಶ್ಲೀಲ ನಕಲಿ ವಿಡಿಯೋ ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ನೋವು ತಂದಿದೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು. pic.twitter.com/fUKacLiY99
— Sadananda Gowda (@DVSadanandGowda) September 19, 2021
ಇದೇ ವಿಚಾರಕ್ಕೆ ಸಂಬಂಧಿಸಿ ಸದಾನಂದ ಗೌಡರ ಆಪ್ತ ತಮ್ಮೇಗೌಡ ಅವರು ನಗರ ಪೊಲೀಸ್ ಆಯುಕ್ತರು, ಸಹಾಯಕ ಪೊಲೀಸ್ ಆಯುಕ್ತರು ಮತ್ತು ಉಪ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.
ದೂರಿನ ಪ್ರತಿಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಸದಾನಂದಗೌಡ, “ನನ್ನ ರಾಜಕೀಯ ಜೀವನ ಹಾಗೂ ನನ್ನ ಏಳಿಗೆಯನ್ನು ಸಹಿಸದ ದುಷ್ಕರ್ಮಿಗಳು ನನ್ನ ತೇಜೋವಧೆ ಮಾಡಲು ಅಶ್ಲೀಲ ನಕಲಿ ವಿಡಿಯೋ ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ನೋವು ತಂದಿದೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು” ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಅನ್ಯಧರ್ಮೀಯ ಯುವತಿಯನ್ನು ಡ್ರಾಪ್ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ: ಆರೋಪಿಗಳ ಬಂಧನ


