Homeಮುಖಪುಟಮಕ್ಕಳನ್ನು ಹೊಂದದೆ ಮೋದಿ, ಯೋಗಿ ನಿರುದ್ಯೋಗ ತಡೆದಿದ್ದಾರೆ ಎಂದ ಬಿಜೆಪಿ ಸಂಸದ!

ಮಕ್ಕಳನ್ನು ಹೊಂದದೆ ಮೋದಿ, ಯೋಗಿ ನಿರುದ್ಯೋಗ ತಡೆದಿದ್ದಾರೆ ಎಂದ ಬಿಜೆಪಿ ಸಂಸದ!

- Advertisement -
- Advertisement -

ಯೂಟ್ಯೂಬರ್ ಒಬ್ಬರು ಉತ್ತರ ಪ್ರದೇಶದ ಬಿಜೆಪಿ ಸಂಸದನ ಬಳಿ ನಿರುದ್ಯೋಗ ಸಮಸ್ಯೆಯ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ, ವಿಚಿತ್ರವಾದ ಉತ್ತರ ನೀಡುವ ಮೂಲಕ ನಗೆ ಪಾಟಲಿಗೀಡಾಗಿದ್ದಾರೆ.

ಯೂಟ್ಯೂಬರ್ ಜೊತೆ ಮಾತನಾಡಿರುವ ಆಝಂಘರ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ದಿನೇಶ್ ಲಾಲ್ ಯಾದವ್, “ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರಂತಹ ಹಿರಿಯ ಬಿಜೆಪಿ ನಾಯಕರು ಮಕ್ಕಳು ಹುಟ್ಟಿಸದೆ ನಿರುದ್ಯೋಗ ನಿಲ್ಲಿಸಿದ್ದಾರೆ” ಎಂದು ಹೇಳಿದ್ದಾರೆ.

“ಮೋದಿ ಅಥವಾ ಯೋಗಿಗೆ ಒಬ್ಬರಾದರೂ ಮಕ್ಕಳಿದ್ದಾರೆಯೆ ಹೇಳಿ? ಅವರು ನಿರುದ್ಯೋಗವನ್ನು ತಡೆದಿದ್ದಾರೆ. ಈಗ ಹೇಳಿ ಯಾರು ನಿರುದ್ಯೋಗವನ್ನು ಹೆಚ್ಚಿಸುತ್ತಿದ್ದಾರೆ? ಮಕ್ಕಳಿಗೆ ಜನ್ಮ ನೀಡುವವರು ನಿರುದ್ಯೋಗ ಹೆಚ್ಚಳಕ್ಕೆ ಕಾರಣ. ಮಕ್ಕಳಿಗೆ ಜನ್ಮ ನೀಡುವುದನ್ನು ತಡೆಯಿರಿ ಎಂದು ಸರ್ಕಾರ ಹೇಳುತ್ತಲೇ ಇದೆ. ಆದರೆ, ಅವರು ಅದಕ್ಕೆ ಒಪ್ಪುತ್ತಿಲ್ಲ. ಒಂದರ ನಂತರ ಒಂದು ಮಗುವಿಗೆ ಜನ್ಮ ನೀಡುತ್ತಿರುವ ಜನರೇ ನಿರುದ್ಯೋಗ ಹೆಚ್ಚಳಕ್ಕೆ ಕಾರಣ” ಎಂದು ಯಾದವ್ ವಿಚಿತ್ರ ಹೇಳಿಕೆ ನೀಡಿದ್ದಾರೆ.

ಯಾದವ್ ಅವರ ಈ ಹೇಳಿಕೆಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಯಾದವ್ ಅವರ ಸಂವೇದನಾ ರಹಿತ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಅವರು ಹೇಳಿಕೆಯು ನಿರ್ದಿಷ್ಟ ಸಮುದಾಯವೊಂದನ್ನು ಗುರಿಯಾಗಿಸಿಕೊಂಡಿದೆ ಎಂದು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ : ಪ್ರಧಾನಿ ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧ ವಿಧಿಸಲು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...