Homeಕರ್ನಾಟಕ‘ಬೆಲೆ ಏರಿಕೆಗೆ ಕಾಂಗ್ರೆಸ್‌ ಕಾರಣ’ ಎಂದ ಬಿಜೆಪಿ ಸಂಸದ ಸಂಗಣ್ಣ ಕರಡಿ!

‘ಬೆಲೆ ಏರಿಕೆಗೆ ಕಾಂಗ್ರೆಸ್‌ ಕಾರಣ’ ಎಂದ ಬಿಜೆಪಿ ಸಂಸದ ಸಂಗಣ್ಣ ಕರಡಿ!

- Advertisement -
- Advertisement -

ಬುಧವಾರವಷ್ಟೆ ಎಲ್‌ಪಿಜಿ ಸಿಲಿಂಡರ್‌ ಬೆಲೆ ಮತ್ತೆ ಹೆಚ್ಚಾಗಿದೆ. ದೇಶದಾದ್ಯಂತ ಈ ಬಗ್ಗೆ ಆಕ್ರೋಶ ಹೆಚ್ಚಾಗಿದೆ. ಆದರೆ ಬಿಜೆಪಿ ನಾಯಕರು ತಮ್ಮ ಉಡಾಫೆ ನಡೆಯನ್ನು ಇನ್ನು ಬಿಟ್ಟಕೊಟ್ಟಿಲ್ಲ. ವಾಡಿಕೆಯಂತೆ ಬೆಲೆ ಏರಿಕೆಗೂ ಕಾಂಗ್ರೆಸ್‌ನತ್ತ ಕೈತೋರಿಸುತ್ತಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಬಿಜೆಪಿ ಸಂಸದ ಸಂಗಣ್ಣ ಕರಡಿ, “ನಿಮ್ಮಪ್ಪ ಸಾಲ ಮಾಡಿದರೆ ಮಗನಾಗಿ ನೀನು ಸಾಲ ತೀರಿಸುವುದಿಲ್ಲವೆ, ಹಾಗೆಯೆ ನಾವು ಕೂಡಾ ಸಾಲ ತೀರಿಸಲೇ ಬೇಕಲ್ಲ” ಎಂದು ಉಡಾಫೆಯಿಂದ ಮಾತನಾಡಿದ್ದಾರೆ.

“ಕಾಂಗ್ರೆಸ್‌ ಸಾಲ ಮಾಡಿದ್ದು ಈಗ ನಾವು ಅನಿವಾರ್ಯವಾಗಿ ಸಾಲ ಬಗೆಹರಿಸಬೇಕಿದೆ’’ ಎಂದು ಅವರು ಪತ್ರಕರ್ತರಿಗೆ ಹೇಳಿದ್ದಾರೆ. ದೇಶದಲ್ಲಿ ಕೊರೊನಾ ಸಾಂಕ್ರಾಮಿಕದ ಕಾರಣಕ್ಕೆ ಸಂಪನ್ಮೂಲವಿಲ್ಲ. ದೇಶವನ್ನು ಮುನ್ನಡೆಸುವ ದೃಷ್ಟಿಯಿಂದ ಬೆಲೆ ಏರಿಕೆ ಅನಿವಾರ್ಯ. ಆದರೂ ಒಕ್ಕೂಟ ಸರಕಾರ ಬಡವರ ಪರವಾದ ಯಾವುದೇ ಯೋಜನೆ ಮತ್ತು ಕಾರ್ಯಕ್ರಮಗಳನ್ನು ನಿಲ್ಲಿಸಿಲ್ಲ ಎಂದು ಸಂಗಣ್ಣ ಕರಡಿ ತಿಳಿಸಿದ್ದಾರೆ.

ಇದನ್ನೂ ಓದಿ: LPG ಗ್ಯಾಸ್ ಬೆಲೆ ಮತ್ತೆ 25ರೂ ಹೆಚ್ಚಳ: 15 ದಿನಗಳಲ್ಲಿ ಎರಡು ಬಾರಿ ಬೆಲೆ ಹೆಚ್ಚಳ

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟಕ್ಕೊಳಗಾಗಿರುವ ಜನಸಾಮಾನ್ಯರಿಗೆ ಮೋದಿ ಸರ್ಕಾರ ಮತ್ತೊಮ್ಮೆ ಹೊಡೆತ ನೀಡಿದೆ. ಆಗಸ್ಟ್‌ 1 ರಂದು ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಆಗಸ್ಟ್‌ 17ರಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್‌ಗೆ 25ರೂ ಏರಿಕೆ ಮಾಡಲಾಗಿತ್ತು. ಅದಾದ ನಂತರ ಈಗ ಸೆಪ್ಟೆಂಬರ್‌ 1ರಿಂದ ಜಾರಿಗೆ ಬರುವಂತೆ ಮತ್ತೆ 25 ರೂ ಹೆಚ್ಚಿಸಲಾಗಿದೆ.

ಬೆಂಗಳೂರಿನಲ್ಲಿ 14.2 ಕೆ.ಜಿ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ಗೆ 862 ರೂ ನೀಡಲಾಗುತ್ತಿತ್ತು. ಇನ್ನು ಮುಂದೆ ಗ್ರಾಹಕರು ಪ್ರತಿ ಸಿಲಿಂಡರ್‌ಗೆ 887ರೂ ಬೆಲೆ ತೆರಬೇಕಾಗಿದೆ. ಹದಿನೈದು ದಿನಗಳ ಅಂತದಲ್ಲಿ 50 ರೂ ಏರಿಕೆಯಾಗಿರುವುದು ಜನಸಾಮಾನ್ಯರ ಹೊರೆ ಹೆಚ್ಚಿಸಿದೆ. 2021ರ ಜನವರಿಯಿಂದ ಸೆಪ್ಟೆಂಬರ್‌ 1ರವರೆಗೆ ಅಡುಗೆ ಸಿಲಿಂಡರ್‌ ಬೆಲೆ ಒಟ್ಟು 190 ರೂ ಹೆಚ್ಚಳವಾಗಿದೆ.

ಸಿಲಿಂಡರ್‌, ಅಡುಗೆ ಎಣ್ಣೆ, ದಿನಸಿ, ಪೆಟ್ರೋಲ್‌, ವಿದ್ಯುತ್‌… ಹೀಗೆ ದಿನನಿತ್ಯದ ಬದುಕಿನ ಅಗತ್ಯಗಳ ಬೆಲೆ ಏರಿಕೆಯಿಂದಾಗಿ ಜನರು ಹೈರಾಣರಾಗಿದ್ದಾರೆ. ಒಂದು ಕಡೆ ಕೋವಿಡ್‌ನಿಂದಾಗಿ ಸರಿಯಾಗಿ ಸಂಬಳ, ದಿನಗೂಲಿ ಇಲ್ಲದೇ ಮನೆಯಲ್ಲಿ ಇದ್ದದ್ದರಲ್ಲೇ ಒಂದೊತ್ತಿನ ಹೊಟ್ಟೆ ತುಂಬಿಸಿಕೊಂಡಿದ್ದ ಜನರ ಬದುಕಲ್ಲಂತೂ ಈ ಬೆಲೆ ಏರಿಕೆ ಸಾವು ನೋವಿನ ಪ್ರಶ್ನೆಯಾಗಿ ಮಾರ್ಪಟ್ಟಿದೆ.

ಇದನ್ನೂ ಓದಿ: ಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...