Homeಮುಖಪುಟವಿಮಾನದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕುಚೇಷ್ಟೆ; ಒಂದು ತಿಂಗಳ ನಂತರ ತನಿಖೆಗೆ ಆದೇಶ

ವಿಮಾನದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕುಚೇಷ್ಟೆ; ಒಂದು ತಿಂಗಳ ನಂತರ ತನಿಖೆಗೆ ಆದೇಶ

ಘಟನೆ ವೇಳೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕೂಡಾ ಇದ್ದರು ಎಂದು ವರದಿ ಉಲ್ಲೇಖಿಸಿದೆ

- Advertisement -
- Advertisement -

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನದ ತುರ್ತು ನಿರ್ಗಮನ ಬಾಗಿಲನ್ನು ಅನುಮತಿಯಿಲ್ಲದೆ ತೆರೆದು ವಿಮಾನಯಾನ ನಿಮಯಗಳ ಗಂಭೀರ ಉಲ್ಲಂಘನೆ ಮಾಡಿರುವ ಬಗ್ಗೆ ವರದಿಯಾಗಿದೆ. ಶಿಕ್ಷಾರ್ಹ ಅಪರಾಧ ಎನಿಸಿಕೊಂಡ ಈ ಘಟನೆ ನಡೆದು ಒಂದು ತಿಂಗಳು ಕಳೆದ ನಂತರ ಇಂಡಿಗೋ ಏರ್‌ಲೈನ್ಸ್‌ ಇದೀಗ ಹೇಳಿಕೆ ಬಿಡುಗಡೆ ಮಾಡಿದೆ. ಘಟನೆಯನ್ನು ‘ಆಕಸ್ಮಿಕ’ ಎಂದು ಇಂಡಿಗೋ ಹೇಳಿದೆಯಾದರೂ, ಆರೋಪಿಯ ಹೆಸರನ್ನು ಉಲ್ಲೇಖಿಸಿಲ್ಲ.

ಡಿಸೆಂಬರ್ 10 ರಂದು ಚೆನ್ನೈಯಿಂದ ತಿರುಚ್ಚಿಗೆ ಹೊರಟಿದ್ದ ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಈ ಘಟನೆ ನಡೆದಿದೆ. ಈ ವೇಳೆ ತೇಜಸ್ವಿ ಸೂರ್ಯ ‘ಏರ್‌ಕ್ರಾಫ್ಟ್ ನಿಯಮ ಕಾಯ್ದೆ-1937’ ಅನ್ನು ಉಲ್ಲಂಘಿಸಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂಡಿಗೋ ನೀಡಿರುವ ಹೇಳಿಕೆಯಲ್ಲಿ,“ಡಿಸೆಂಬರ್ 10 ರಂದು ಚೆನ್ನೈನಿಂದ ತಿರುಚಿರಾಪಳ್ಳಿಗೆ 6E 7339 ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು, ಬೋರ್ಡಿಂಗ್ ಪ್ರಕ್ರಿಯೆಯಲ್ಲಿ ಆಕಸ್ಮಿಕವಾಗಿ ತುರ್ತು ನಿರ್ಗಮನವನ್ನು ತೆರೆದರು. ಈ ಪ್ರಯಾಣಿಕ ತನ್ನ ನಡೆಗಾಗಿ ಕ್ಷಮೆಯಾಚಿಸಿದ್ದಾರೆ. ಹೀಗಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್‌ ಪ್ರಕಾರ, ವಿಮಾನವು ಕಡ್ಡಾಯ ಎಂಜಿನಿಯರಿಂಗ್ ತಪಾಸಣೆಗೆ ಒಳಗಾಯಿತು. ಇದು ನಿರ್ಗಮನ ವಿಳಂಬಕ್ಕೆ ಕಾರಣವಾಯಿತು” ಎಂದು ಹೇಳಿದೆ.

ತಮಿಳುನಾಡು ವಿದ್ಯುತ್ ಸಚಿವ ವಿ. ಸೆಂಥಿಲ್ ಬಾಲಾಜಿ ಅವರು ಡಿಸೆಂಬರ್ 29, 2022 ರಂದು ಚೆನ್ನೈ-ತಿರುಚಿನಾಪಳ್ಳಿ ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆಗೆದ ಬಗ್ಗೆ ಟ್ವೀಟ್ ಮಾಡಿ, ತೇಜಸ್ವಿ ಸೂರ್ಯ ಮತ್ತು ಬಿಜೆಪಿಯ ತಮಿಳುನಾಡು ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಇದರಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಸುಳಿವು ನೀಡಿದ್ದರು. ಈ ವೇಳೆ ಘಟನೆ ಬೆಳಕಿಗೆ ಬಂದಿತ್ತು. ಈ ಘಟನೆಯನ್ನು ಎಎನ್‌ಐ ವರದಿ ಮಾಡಿತ್ತಾದರೂ, ಅದು ತನ್ನ ವರದಿಯಲ್ಲಿ ತಪ್ಪೆಸಗಿದ ಪ್ರಯಾಣಿಕನ ಹೆಸರನ್ನು ಬಹಿರಂಗಪಡಿಸಿರಲಿಲ್ಲ.

ಇದರ ನಂತರ ಇಂಗ್ಲಿಷ್‌ನ ಖ್ಯಾತ ಸುದ್ದಿ ಮಾಧ್ಯಮ ದಿ ನ್ಯೂಸ್‌ ಮಿನಿಟ್‌ ಈ ಬಗ್ಗೆ ಜನವರಿ 17ರ ಮಂಗಳವಾರ ಸುಧೀರ್ಘ ವರದಿಯನ್ನು ಪ್ರಕಟಿಸಿದೆ. ಸುದ್ದಿಯೂ ವೈರಲ್ ಆಗುತ್ತಿದ್ದಂತೆ, ಆರಂಭದಲ್ಲಿ ಈ ಬಗ್ಗೆ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದ್ದ ಇಂಡಿಗೋ ಏರ್‌ಲೈನ್ಸ್‌ ಇದೀಗ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದೆ.

ತುರ್ತು ಬಾಗಿಲು ತೆರೆದ ಕಾರಣಕ್ಕೆ ವಿಮಾನದಲ್ಲಿದ್ದ ಪ್ರಯಾಣಿಕರನ್ನು ವಿಮಾನದಿಂದ ಇಳಿಸಿ, ನಂತರ ಸಂಪೂರ್ಣ ತಪಾಸಣೆಗೆ ಒಳಗಾಗಬೇಕಾಗಿತ್ತು. ಹೀಗಾಗಿ ವಿಮಾನವೂ ಪ್ರಯಾಣವೂ ಎರಡು ಗಂಟೆಗಳ ಕಾಲ ವಿಳಂಬವಾಗಿದೆ ಎಂದು ವರದಿಯಾಗಿದೆ.

ಅನುಮತಿಯಿಲ್ಲದೆ ತುರ್ತು ನಿರ್ಗಮನಗಳನ್ನು ತೆರೆದ ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆಯು ಪೊಲೀಸ್ ದೂರು ದಾಖಲಿಸಿರುವ ಘಟನೆ ಈ ಹಿಂದೆ ಹಲವು ಬಾರಿ ನಡೆದಿತ್ತು. ಆದರೆ ತೇಜಸ್ವಿ ಸೂರ್ಯ ಪ್ರಕರಣದಲ್ಲಿ ಘಟನೆ ನಡೆದು ಒಂದು ತಿಂಗಳು ಕಳೆದರೂ ಯಾವುದೇ ಪ್ರಕರಣ ದಾಖಲಾಗಿಲ್ಲ.

ತಾನು ಎಸಗಿದ ಕಿಡಿಗೇಡಿತನದ ಬಗ್ಗೆ ನಂತರ ಸಂಸದ ತೇಜಸ್ವಿ ಸೂರ್ಯ ಅವರು ಲಿಖಿತ ಕ್ಷಮಾಪಣೆ ಪತ್ರವನ್ನು ಬರೆದಿದ್ದಾರೆ ಎಂದು ವರದಿಯಾಗಿದೆ. ಆದರೂ ವಿಮಾನಯಾನ ಸಂಸ್ಥೆಯ ಅವರ ವಿರುದ್ಧ ಯಾವುದೇ ಹೆಚ್ಚಿನ ತನಿಖೆಯನ್ನು ನಡೆಸದೆ, ಅದೇ ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.

ಸಂಸದನ ಕುಚೇಷ್ಠೆಯ ಸುದ್ದಿ ವೈರಲ್ ಆಗುತ್ತಿದ್ದಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ.

ಏರ್‌ಕ್ರಾಫ್ಟ್ ನಿಯಮ, 1937 ರ ಷರತ್ತು 22 (ಬಿ) ಪ್ರಕಾರ, ವಿಮಾನದ ಸುರಕ್ಷತೆಯನ್ನು ಖಾತ್ರಿಪಡಿಸುವ ಉದ್ದೇಶಕ್ಕಾಗಿ ಹಾಗೂ ವಿಮಾನದಲ್ಲಿ ಉತ್ತಮ ಕ್ರಮ ಮತ್ತು ಶಿಸ್ತನ್ನು ಕಾಪಾಡಿಕೊಳ್ಳುವ ಉದ್ದೇಶಕ್ಕಾಗಿ ವಿಮಾನದಲ್ಲಿ ಪ್ರಯಾಣಿಸುವ ಯಾವುದೇ ವ್ಯಕ್ತಿ, ಪೈಲಟ್-ಇನ್-ಕಮಾಂಡ್ ಪರವಾಗಿ ಸಿಬ್ಬಂದಿ ನೀಡಿದ ಕಾನೂನುಬದ್ಧ ಸೂಚನೆಯನ್ನು ಅನುಸರಿಸಲು ನಿರಾಕರಿಸಬಾರದು.

ಷರತ್ತು 23(1)(ಬಿ), ಯಾವುದೇ ಆಸ್ತಿಗೆ ಉದ್ದೇಶಪೂರ್ವಕವಾಗಿ ಹಾನಿ ಮಾಡುವ ಅಥವಾ ನಾಶಪಡಿಸುವ ಮೂಲಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಅಥವಾ ಉತ್ತಮ ಸುವ್ಯವಸ್ಥೆ – ಶಿಸ್ತಿಗೆ ಅಪಾಯವನ್ನುಂಟುಮಾಡುವ ಆಕ್ರಮಣ ಮತ್ತು ಇತರ ಕೃತ್ಯಗಳ ಕುರಿತು ಮಾತನಾಡುತ್ತದೆ.

ಸಂಸದರು ತುರ್ತು ನಿರ್ಗಮನದ ಬಾಗಿಲು ತೆರೆದಾಗ ಪ್ರಯಾಣಿಕರು ಭಯಭೀತರಾಗಿದ್ದರು ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ. “ಅದೃಷ್ಟವಶಾತ್ ವಿಮಾನವು ನೆಲದ ಮೇಲೆ ಇದ್ದಾಗ ಇದು ಸಂಭವಿಸಿದೆ. ಈ ರೀತಿಯ ಘಟನೆ ವಿಮಾನ ಹಾರಾಡುತ್ತಾ ಇರಬೇಕಾದರೆ ಏನಾದರೂ ಸಂಭವಿಸಿದ್ದರೆ, ಪರಿಸ್ಥಿತಿ ನಿಜವಾಗಿಯೂ ಕೆಟ್ಟದಾಗಿರುತ್ತಿತ್ತು” ಎಂದು ವಿಮಾನಯಾನ ಸಿಬ್ಬಂದಿ ನಮಗೆ ಹೇಳಿದರು ಎಂದು ಪ್ರಯಾಣಿಕ ಹೇಳಿದ್ದಾರೆ. “ವಿಮಾನದಲ್ಲಿ ಗಾಲಿಕುರ್ಚಿಯ ಸಹಾಯದಿಂದ ಓಡಾಡುವ ಸಾಕಷ್ಟು ವಯಸ್ಸಾದ ಪ್ರಯಾಣಿಕರು ಇದ್ದರು” ಎಂದು ಅವರು ಹೇಳಿದ್ದಾರೆ.

ಅನುಮತಿಯಿಲ್ಲದೆ ತುರ್ತು ನಿರ್ಗಮನ ಬಾಗಿಲನ್ನು ತೆರೆದ ಪ್ರಯಾಣಿಕರನ್ನು ವಿಮಾನಯಾನ ಸಂಸ್ಥೆಯ ದೂರಿನ ಆಧಾರದ ಮೇಲೆ ಪೊಲೀಸರು ಈ ಹಿಂದೆ ಪ್ರಕರಣದ ದಾಖಲಿಸಿದ ಉದಾಹರಣೆಗಳಿವೆ. ಏಪ್ರಿಲ್ 2019 ರಲ್ಲಿ, ಬೆಂಗಳೂರು-ಲಕ್ನೋ ವಿಮಾನದಲ್ಲಿ ತುರ್ತು ನಿರ್ಗಮನದ ಬಳಿ ಕುಳಿತಿದ್ದ ಮೊದಲ ಬಾರಿಗೆ ವಿಮಾನಯಾನ ಮಾಡುವ ಪ್ರಯಾಣಿಕರೊಬ್ಬರು ತುರ್ತು ನಿರ್ಗಮನ ಬಾಗಿಲನ್ನು ಕಿಟಕಿ ಎಂದು ತಪ್ಪಾಗಿ ಗ್ರಹಿಸಿ ಅದನ್ನು ತೆರೆದಿದ್ದರು. ನಂತರ ಅವರನ್ನು ಕೆಳಗಿಳಿಸಿ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಕರೆದೊಯ್ದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಫೆಬ್ರವರಿ 2017 ರಲ್ಲಿ, ಮುಂಬೈನಿಂದ ಚಂಡೀಗಢಕ್ಕೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರು ವಿಮಾನದ ತುರ್ತು ನಿರ್ಗಮನ ಬಾಗಿಲನ್ನು ವಿಮಾನ ಟೇಕ್-ಆಫ್ ಮಾಡುವ ಮೊದಲು ತೆರೆದಿದ್ದರು. ಘಟನೆಯ ಹಿನ್ನಲೆ ಇಂಡಿಗೋ ಏರ್‌ಲೈನ್ಸ್ ನೀಡಿದ ದೂರಿನ ಆಧಾರದ ಮೇಲೆ ಇತರ ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟುಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಲಾಗಿತ್ತು.

“ವಿಮಾನದ ತುರ್ತು ನಿರ್ಗಮನವನ್ನು ತೆರೆಯುವುದು ಗಂಭೀರ ಉಲ್ಲಂಘನೆಯಾಗಿದೆ ಮತ್ತು ಇದು ಪ್ರಕರಣ ದಾಖಲಿಸಬಹುದಾದ ಘಟನೆಯಾಗಿದೆ” ಎಂದು ವಾಯುಯಾನ ಸುರಕ್ಷತಾ ತಜ್ಞ ಕ್ಯಾಪ್ಟನ್ ಮೋಹನ್ ರಂಗನಾಥನ್ ಅವರು ಹೇಳಿದ್ದಾರೆ.

“ತುರ್ತು ನಿರ್ಗಮನ ಬಾಗಿಲನ್ನು ಮತ್ತೆ ಹೊಂದಿಸಬೇಕಾಗಿರುವುದರಿಂದ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿತ್ತು ಮತ್ತು ದೂರು ಸಲ್ಲಿಸಬೇಕು. ಈ ಬಗ್ಗೆ ಡಿಜಿಸಿಎಗೆ ವರದಿ ಸಲ್ಲಿಸಬೇಕಿತ್ತು. ಪ್ರಯಾಣಿಕ ಕ್ಷಮೆಯಾಚಿಸಿದ ಕಾರಣ ಅಥವಾ ಅವರು ವಿಐಪಿ ಆಗಿರುವ ಕಾರಣ ಅದನ್ನು ಮುಚ್ಚಿಡಬಹುದಾದ ವಿಷಯವಲ್ಲ” ಎಂದು ಮೋಹನ್ ರಂಗನಾಥನ್ ಹೇಳಿದ್ದಾರೆ.

ಇದನ್ನೂ ಓದಿ: ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದು ಕ್ಷಮೆ ಯಾಚಿಸಿದ ಸಂಸದ ತೇಜಸ್ವಿ ಸೂರ್ಯ; ಗಂಭೀರ ಉಲ್ಲಂಘನೆ ನಡೆದರೂ ದಾಖಲಾಗದ ಪ್ರಕರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...