Homeಮುಖಪುಟಬೆನ್ನು ನೋವು ಮತ್ತು ಕುತ್ತಿಗೆ ನೋವಿನ ಉಚಿತ ಚಿಕಿತ್ಸೆಗಾಗಿ ಸಂಸದನಾಗಿ ಮುಂದುವರೆಯುತ್ತೇನೆಂದ BJP ಸಂಸದ

ಬೆನ್ನು ನೋವು ಮತ್ತು ಕುತ್ತಿಗೆ ನೋವಿನ ಉಚಿತ ಚಿಕಿತ್ಸೆಗಾಗಿ ಸಂಸದನಾಗಿ ಮುಂದುವರೆಯುತ್ತೇನೆಂದ BJP ಸಂಸದ

ಮಂಗಳವಾರವಷ್ಟೇ ಗುಜರಾತ್‌ ಬಿಜೆಪಿ ಅಧ್ಯಕ್ಷ ಸಿ.ಆರ್‌. ಪಾಟೀಲ್ ಅವರಿಗೆ ರಾಜಿನಾಮೆ ಪತ್ರ ಕಳುಹಿಸಿದ್ದ ವಾಸವ್, ಮುಂಬರುವ ಬಜೆಟ್ ಅಧಿವೇಶನದ ವೇಳೆ ತಮ್ಮ ಸಂಸದ ಸ್ಥಾನಕ್ಕೆ ಕೂಡಾ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು.

- Advertisement -
- Advertisement -

ನರ್ಮದಾ ಜಿಲ್ಲೆಯ 121 ಗ್ರಾಮಗಳನ್ನು “ಪರಿಸರ ಸೂಕ್ಷ್ಮ ವಲಯ” ಎಂದು ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇತ್ತೀಚೆಗೆ ಅಧಿಸೂಚನೆಯನ್ನು ಹೊರಡಿಸಿತ್ತು. ಗುಜರಾತ್‌ನ ಭರೂಚ್ ಕ್ಷೇತ್ರದ ಬಿಜೆಪಿ ಸಂಸದ ಮನ್ಸುಖ್ ವಾಸವ್, ಈ ಅಧಿಸೂಚನೆಯನ್ನು ವಿರೋಧಿಸಿ ಪಕ್ಷಕ್ಕೆ ನೀಡಿದ್ದಾರೆ ಎನ್ನಲಾಗಿದ್ದ ರಾಜೀನಾಮೆಯನ್ನು ಬುಧವಾರ ವಾಪಾಸ್ ಪಡೆದಿದ್ದಾರೆ.

ಗುಜರಾತ್‌ ಮುಖ್ಯಮಂತ್ರಿ ವಿಜಯ್‌ ರೂಪಾನಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ವಸಾವ್‌, “ನಾನು ಸಂಸದನಾಗಿ ಮುಂದುವರಿದರೆ ಮಾತ್ರ ನನ್ನ ಬೆನ್ನು ನೋವು ಮತ್ತು ಕುತ್ತಿಗೆ ನೋವಿಗೆ ಉಚಿತ ಚಿಕಿತ್ಸೆ ಪಡೆಯಲು ಸಾಧ್ಯ. ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಆ ಸೌಲಭ್ಯ ನನಗೆ ಸಿಗುವುದಿಲ್ಲ. ಪಕ್ಷದ ಮುಖಂಡರು ನನ್ನನ್ನು ವಿಶ್ರಾಂತಿ ಪಡೆಯಲು ಕೇಳಿಕೊಂಡಿದ್ದು, ಪಕ್ಷದ ಸ್ಥಳೀಯ ಕಾರ್ಯಕರ್ತರು ನನ್ನ ಪರವಾಗಿ ಕೆಲಸ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗುಜರಾತ್‌ನ ಭರೂಚ್ ಕ್ಷೇತ್ರದ ಬಿಜೆಪಿ ಸಂಸದ ರಾಜೀನಾಮೆ – ಕಾರಣವೇನು ಗೊತ್ತೇ?

“ಮುಖ್ಯಮಂತ್ರಿ ಜೊತೆ ಈ ಬಗ್ಗೆ ಚರ್ಚೆ ನಡೆಸಿದ್ದೇನೆ. ಬಿಜೆಪಿಯ ಹಿರಿಯ ನಾಯಕರು ಸಮಾಧಾನಪಡಿಸಿದರು. ಹಾಗಾಗಿ ರಾಜೀನಾಮೆ ಹಿಂಪಡೆದು, ಪಕ್ಷದಲ್ಲಿ ಮುಂದುವರಿಯಲಿದ್ದೇನೆ. ಅಲ್ಲದೆ ಸಂಸದನಾಗಿ ಸೇವೆ ಸಲ್ಲಿಸಲು ನಿರ್ಧರಿಸಿದ್ದೇನೆ” ಎಂದು ತಿಳಿಸಿದ್ದಾರೆ. ಮಂಗಳವಾರವಷ್ಟೇ ಗುಜರಾತ್‌ ಬಿಜೆಪಿ ಅಧ್ಯಕ್ಷ ಸಿ.ಆರ್‌. ಪಾಟೀಲ್ ಅವರಿಗೆ ರಾಜಿನಾಮೆ ಪತ್ರ ಕಳುಹಿಸಿದ್ದ ವಾಸವ್, ಮುಂಬರುವ ಬಜೆಟ್ ಅಧಿವೇಶನದ ವೇಳೆ ತಮ್ಮ ಸಂಸದ ಸ್ಥಾನಕ್ಕೆ ಕೂಡಾ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು.

ಸರ್ದಾರ್ ಪಟೇಲ್‌ರ ಏಕತಾ ಪ್ರತಿಮೆಯ ಸುತ್ತಲಿನ 121 ಗ್ರಾಮಗಳ ರೈತರು ಹಾಗೂ ಸ್ಥಳೀಯರ ಹಿತಾಸಕ್ತಿಯನ್ನು ಗಮನದಲ್ಲಿರಿಸಿ ಪರಿಸರ ಸೂಕ್ಷ್ಮ ವಲಯದ ಅಧಿಸೂಚನೆಯನ್ನು ವಾಪಸ್ ಪಡೆಯಬೇಕೆಂದು ಆದಿವಾಸಿ ನಾಯಕರೂ ಆಗಿರುವ ಮನ್ಸುಖ್ ಪ್ರಧಾನಿಗೆ ಪತ್ರ ಬರೆದಿದ್ದರು. ಈಗಾಗಲೇ ಶೂಲ್ಪನೇಶ್ವರ್ ವನ್ಯಜೀವಿ ಧಾಮದ ಸುತ್ತಲಿನ ಪ್ರದೇಶವನ್ನು “ಪರಿಸರ ಸೂಕ್ಷ್ಮ ವಲಯ” ಎಂದು ಘೋಷಿಸುವ ಅಂತಿಮ ಅಧಿಸೂಚನೆಯ ಕುರಿತಂತೆ ನರ್ಮದಾ ಜಿಲ್ಲೆಯ ಆದಿವಾಸಿಗಳಲ್ಲಿ ಆಕ್ರೋಶ ಭುಗಿಲೆದ್ದಿದೆ. ಅಧಿಸೂಚನೆಯ ನೆಪದಲ್ಲಿ ಅಧಿಕಾರಿಗಳು ಆದಿವಾಸಿಗಳ ಖಾಸಗಿ ಜಮೀನುಗಳಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದಾರೆ ಎಂದು ಆರೋಪಗಳು ಕೇಳಿಬರುತ್ತಿದೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ: ರಾಜೀನಾಮೆ ನೀಡಿದ ಬಿಜೆಪಿಯ ಮಾಜಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...