Homeಮುಖಪುಟರೈತರ ಮೇಲೆ ಕಾರು ಹರಿಸುತ್ತಿರುವ ವೈರಲ್ ವಿಡಿಯೋ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

ರೈತರ ಮೇಲೆ ಕಾರು ಹರಿಸುತ್ತಿರುವ ವೈರಲ್ ವಿಡಿಯೋ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಕೇಂದ್ರ ಸಚಿವನ ಮಗ ರೈತರ ಮೇಲೆ ಕಾರು ಹರಿಸಿ ನಾಲ್ವರನ್ನು ಕೊಂದ ಘಟನೆಯ ವಿಡಿಯೋವೊಂದು ಸೋಮವಾರ ರಾತ್ರಿಯಿಂದ ದೇಶಾದ್ಯಂತ ವೈರಲ್ ಆಗುತ್ತಿದೆ. ಅದೇ ವಿಡಿಯೋವನ್ನು ಉತ್ತರ ಪ್ರದೇಶದ ಫಿಲಿಬಿತ್ ಲೋಕಸಭಾ ಕ್ಷೇತ್ರದ ಸಂಸದ ವರುಣ್ ಗಾಂಧಿ ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

“ಲಖಿಂಪುರ್ ಖೇರಿಯಲ್ಲಿ ಉದ್ದೇಶಪೂರ್ವಕವಾಗಿ ವಾಹನವನ್ನು ರೈತರ ಮೇಲೆ ಹರಿಸುವ ಈ ವಿಡಿಯೋ ಎಲ್ಲರ ಆತ್ಮವನ್ನೂ ಅಲ್ಲಾಡಿಸುತ್ತದೆ. ಪೊಲೀಸರು ಈ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿ ಈ ವಾಹನಗಳ ಮಾಲೀಕರು, ಅದರಲ್ಲಿ ಕುಳಿತಿರುವ ಜನರು ಮತ್ತು ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳನ್ನು ತಕ್ಷಣ ಬಂಧಿಸಬೇಕು” ಎಂಂದು ವರುಣ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಮೇಲೆ ಹರಿದ ಆ ಕಾರು ಕೇಂದ್ರ ಸಚಿವ ಅಜಯ್‌ ಮಿಶ್ರಾರವರಿಗೆ ಸೇರಿದ್ದು ಅದರಲ್ಲಿ ಅವರ ಮಗ ಆಶಿಶ್ ಮಿಶ್ರಾ ಇದ್ದು ಕಾರು ಚಲಾಯಿಸುತ್ತಿದ್ದರು ಎಂದು ರೈತರು ದೂರಿದ್ದಾರೆ.

ವಿಡಿಯೋದಲ್ಲಿ ಘೋಷಣೆ ಕೂಗುತ್ತಾ ಹೊರಟಿದ್ದ ರೈತರ ಗುಂಪಿನ ಮೇಲೆ ಹಿಂದಿನಿಂದ ಎಸ್‌ಯುವಿಯೊಂದು ಉದ್ದೇಶಪೂರ್ವಕವಾಗಿ ನುಗ್ಗುತ್ತಿದೆ.  ರೈತರು ಚಲ್ಲಾಪಿಲ್ಲಿಯಾಗುತ್ತಾರೆ. ಕೆಲ ರೈತರ ಮೇಲೆ ನೇರವಾಗಿ ಕಾರು ಹರಿದಿದೆ. ನಾನುಗೌರಿ.ಕಾಂ ಈ ವಿಡಿಯೋವನ್ನು ಪರಿಶೀಲಿಸಲು ಯತ್ನಿಸುತ್ತಿದೆ..

ಮತ್ತೊಂದು ವೈರಲ್ ವಿಡಿಯೋದಲ್ಲಿ ರೈತರ ಮೇಲೆ ಹರಿಸಿದ ನಂತರ ಅದೇ ಕಾರಿನಿಂದ ಇಬ್ಬರು ಇಳಿದು ಓಡಿ ಹೋಗುತ್ತಿರುವ ದೃಶ್ಯಗಳು ಸೆರೆಯಾಗಿವೆ. ಕಾರಿನ ಚಕ್ರಕ್ಕೆ ರೈತನೊಬ್ಬ ಸಿಕ್ಕಿ ನರಳುತ್ತಿರುವ ಹೃದಯ ವಿದ್ರಾವಕ ದೃಶ್ಯ ಕಂಡುಬಂದಿದೆ. ಕಾರು ಯಾರು ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.

ನಿನ್ನೆ ರೈತರು ಆರೋಪಿಸಿದಂತೆ ಕಾರಿನ ಬಣ್ಣಕ್ಕೂ ಇಂದು ವೈರಲ್ ಆಗಿರುವ ಕಾರಿನ ಬಣ್ಣಕ್ಕೂ ಹೊಂದಾಣಿಕೆಯಾಗಿದೆ. ಅದೇ ರೀತಿ ಹಿಂದಿನಿಂದ ಬಂದು ಗುದ್ದಿದ್ದು ಸಹ ದಾಖಲಾಗಿದೆ. ವಿಡಿಯೋದಲ್ಲಿ ದಾಖಲಾಗಿರುವ ರೈತರೇ ಮೃತಪಟ್ಟಿರುವುದರಿಂದ ಈ ವಿಡಿಯೋಗೆ ಸಾಕಷ್ಟು ಮಾನ್ಯತೆ ಸಿಕ್ಕಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿ “ನರೇಂದ್ರ ಮೋದಿಯವರೆ ಈ ವಿಡಿಯೋ ನೋಡಿದ್ದೀರಾ? ನಿಮ್ಮ ಸರ್ಕಾರ ನನ್ನನ್ನು ಯಾವುದೇ ಎಫ್‌ಐಆರ್ ಅಥವಾ ಯಾವುದೇ ಆದೇಶವಿಲ್ಲದೆ ಕಳೆದ 28 ಗಂಟೆಗಳಿಂದ ಬಂಧನದಲ್ಲಿಟ್ಟಿದೆ. ಆದರೆ ಅನ್ನದಾತರ ಮೇಲೆ ಕಾರು ಹರಿಸಿದ ಈ ವ್ಯಕ್ತಿಯನ್ನುಇದುವರೆಗೂ ಬಂಧಿಸಿಲ್ಲ ಏಕೆ” ಎಂದು ಪ್ರಶ್ನಿಸಿದ್ದಾರೆ.

ಲಖಿಂಪುರ್ ಖೇರಿಯಲ್ಲಿ ಭಾನುವಾರ ರೈತರ ಮೇಲೆ ಕಾರು ಹರಿಸಿ 4 ರೈತರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಬೇಕು ಮತ್ತು ಸಿಬಿಐ ತನಿಖೆಯಾಗಬೇಕು ಎಂದು ಆಗ್ರಹಿಸಿ ಬಿಜೆಪಿ ಸಂಸದ ವರುಣ್ ಗಾಂಧಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಸೋಮವಾರ ಪತ್ರ ಬರೆದಿದ್ದಾರೆ.


ಇದನ್ನೂ ಓದಿ: ರೈತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಯುಪಿ ಸಿಎಂಗೆ ಪತ್ರ ಬರೆದ ಬಿಜೆಪಿ ಸಂಸದ ವರುಣ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...