Homeಮುಖಪುಟಬಿಜೆಪಿ ಸಂಸದನ ಮಗ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಸಹಾಯಕ ಅಡ್ವೊಕೇಟ್ ಜನರಲ್ ಆಗಿ ನೇಮಿಸಿದ...

ಬಿಜೆಪಿ ಸಂಸದನ ಮಗ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಸಹಾಯಕ ಅಡ್ವೊಕೇಟ್ ಜನರಲ್ ಆಗಿ ನೇಮಿಸಿದ ಹರಿಯಾಣ ಸರ್ಕಾರ!

- Advertisement -
- Advertisement -

ಐಎಎಸ್ ಅಧಿಕಾರಿಯೊಬ್ಬರ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ರಾಜ್ಯಸಭಾ ಸಂಸದ ಸುಭಾಷ್ ಬರಾಲ ಅವರ ಮಗ ವಿಕಾಸ್ ಬರಾಲ ಅವರನ್ನು ಹರಿಯಾಣ ಸರ್ಕಾರ ಸಹಾಯಕ ಅಡ್ವೊಕೇಟ್ ಜನರಲ್ (ಎಎಜಿ) ಆಗಿ ನೇಮಿಸಿದೆ.

2017ರ ಪ್ರಕರಣದಲ್ಲಿ ಆರೋಪಿಯಾಗಿರುವ ವಿಕಾಸ್ ಅವರ ಹೆಸರು, ಸಹಾಯಕ ಅಡ್ವೊಕೇಟ್ ಜನರಲ್‌ಗಳು, ಡೆಪ್ಯುಟಿ ಅಡ್ವೊಕೇಟ್ ಜನರಲ್‌ಗಳು, ಹಿರಿಯ ಡೆಪ್ಯುಟಿ ಅಡ್ವೊಕೇಟ್ ಜನರಲ್‌ಗಳು ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಹುದ್ದೆಗಳಿಗೆ ಹೊಸದಾಗಿ ನೇಮಿಸಲಾದ 97 ಮಂದಿಯ ಪಟ್ಟಿಯಲ್ಲಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಲೈಂಗಿಕ ಕಿರುಕುಳ ಪ್ರಕರಣದ ವಿಚಾರಣೆ ಇನ್ನೂ ಚಂಡೀಗಢ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ವಿಕಾಸ್ ಪ್ರಸ್ತುತ ಜಾಮೀನಿನ ಮೇಲೆ ಇದ್ದಾರೆ ಎಂದು ವರದಿ ತಿಳಿಸಿದೆ.

ವಿಕಾಸ್ ಮತ್ತು ಆತನ ಸ್ನೇಹಿತ ಆಶಿಶ್ ಕುಮಾರ್ ವಿರುದ್ಧ ಆಗಸ್ಟ್ 5, 2017 ರಂದು ಐಪಿಸಿ ಸೆಕ್ಷನ್ 354 ಡಿ, 341, 365 ಮತ್ತು 511ರ ಅಡಿಯಲ್ಲಿ ಹಾಗೂ ಕುಡಿದು ವಾಹನ ಚಲಾಯಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ಹರಿಯಾಣ ಕೇಡರ್ ಐಎಎಸ್ ಅಧಿಕಾರಿ ವಿ.ಎಸ್ ಕುಂಡು ಅವರ ಪುತ್ರಿ ವರ್ಣಿಕಾ ಕುಂಡು ಅವರು ದೂರು ದಾಖಲಿಸಿದ್ದರು. ಚಂಡೀಗಢದಲ್ಲಿ ತಡರಾತ್ರಿ ತಮ್ಮ ವಾಹನವನ್ನು ಬೆನ್ನಟ್ಟಿ ಬಲವಂತವಾಗಿ ವಾಹನದೊಳಗೆ ಪ್ರವೇಶಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದರು.

ವರ್ಣಿಕಾ ಅವರ ದೂರು ಆಧರಿಸಿ ಸೆಕ್ಟರ್ 26 ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು ಮತ್ತು ಆಗಸ್ಟ್ 9, 2017ರಂದು ವಿಕಾಸ್ ಮತ್ತು ಆಶಿಶ್ ಇಬ್ಬರನ್ನೂ ಪೊಲೀಸರು ಬಂಧಿಸಿದ್ದರು. ಅದೇ ವರ್ಷ ಅಕ್ಟೋಬರ್‌ನಲ್ಲಿ ಆರೋಪಿಗಳ ವಿರುದ್ಧ ಆರೋಪಗಳನ್ನು ಹೊರಿಸಲಾಗಿತ್ತು.

ವಿಕಾಸ್ ಅವರನ್ನು 2018ರ ಜನವರಿಯಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಜಾಮೀನು ನೀಡುವವರೆಗೂ ಚಂಡೀಗಢದ ಬುರೈಲ್‌ನಲ್ಲಿರುವ ಮಾದರಿ ಜೈಲಿನಲ್ಲಿ ಇರಿಸಲಾಗಿತ್ತು. ಪ್ರಕರಣದ ಮುಂದಿನ ವಿಚಾರಣೆಯ ದಿನಾಂಕವನ್ನು ಆಗಸ್ಟ್ 2, 2025 ರಂದು ರಕ್ಷಣಾ ಸಾಕ್ಷ್ಯಗಳ ದಾಖಲಾತಿಗಾಗಿ ನಿಗದಿಪಡಿಸಲಾಗಿದೆ.

ಘಟನೆ ನಡೆದ ಸಮಯದಲ್ಲಿ ವಿಕಾಸ್ ಕಾನೂನು ವಿದ್ಯಾರ್ಥಿಯಾಗಿದ್ದರು. ಡಿಸೆಂಬರ್ 2017 ರಲ್ಲಿ, ಕುರುಕ್ಷೇತ್ರ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗೆ ಹಾಜರಾಗಲು ಅವರಿಗೆ ಹೈಕೋರ್ಟ್ ಅನುಮತಿ ನೀಡಿತ್ತು.

ಸುಭಾಷ್ ಬರಾಲ ಡಿಸೆಂಬರ್ 2014ರಿಂದ ಜುಲೈ 2020 ರವರೆಗೆ ಹರಿಯಾಣ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಕ್ಟೋಬರ್ 2019ರ ವಿಧಾನಸಭಾ ಚುನಾವಣೆಯಲ್ಲಿ ಫತೇಹಾಬಾದ್ ಜಿಲ್ಲೆಯ ತೋಹಾನಾದಿಂದ ಸ್ಪರ್ಧಿಸಿದ್ದ ಅವರು ಸೋಲನುಭವಿಸಿದ್ದರು.

ನಂತರ ಅವರು, ಹರಿಯಾಣ ಬ್ಯೂರೋ ಆಫ್ ಪಬ್ಲಿಕ್ ಎಂಟರ್‌ಪ್ರೈಸಸ್‌ನ ಅಧ್ಯಕ್ಷರಾಗಿ ನೇಮಕಗೊಂಡರು. ಫೆಬ್ರವರಿ, 2024 ರಲ್ಲಿ ಹರಿಯಾಣದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದರು.

ಐಎಎಸ್ ಅಧಿಕಾರಿ ವಿ.ಎಸ್ ಕುಂಡು ಡಿಸೆಂಬರ್ 2022ರಲ್ಲಿ ನಿವೃತ್ತರಾಗಿದ್ದು, ಪ್ರಸ್ತುತ ಹರಿಯಾಣದ ಕಂದಾಯ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಕಳೆದ ಮಂಗಳವಾರ, ಅವರು ಹರಿಯಾಣ ಸಚಿವ ವಿಪುಲ್ ಗೋಯೆಲ್ ಅವರ ಅಧ್ಯಕ್ಷತೆಯಲ್ಲಿ ಭೂ ದಾಖಲೆಗಳ ಡಿಜಿಟಲೀಕರಣ ಮತ್ತು ಅಧಿಕಾರಿಗಳ ತರಬೇತಿ ಕುರಿತು ನಡೆದ ಸಭೆಯಲ್ಲಿ ಭಾಗವಹಿಸಿದ್ದರು.

ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...