Homeಕರ್ನಾಟಕಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಖಾತೆ ತೆರೆದ ಬಿಜೆಪಿ: ಪಕ್ಷ ಪ್ರಾಬಲ್ಯವಿರದ ಕಡೆ ಗೆಲುವು

ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಖಾತೆ ತೆರೆದ ಬಿಜೆಪಿ: ಪಕ್ಷ ಪ್ರಾಬಲ್ಯವಿರದ ಕಡೆ ಗೆಲುವು

- Advertisement -
- Advertisement -

ಇದನ್ನು ಬಿಜೆಪಿ ಬಹುದೊಡ್ಡ ಸಾಧನೆಯೆಂದೇ ಹೇಳಬೇಕು. ಉಪಚುನಾವಣೆಯ 15 ಕ್ಷೇತ್ರಗಳಲ್ಲಿ 13 ಕಡೆ ಅದು ತನ್ನ ಪಾರಮ್ಯ ಮೆರೆದಿದೆ. ಅದರಲ್ಲಿ ವಿಶೇಷವಾದ ಕ್ಷೇತ್ರಗಳೆಂದರೆ ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ಮತ್ತು ಚಿಕ್ಕಬಳ್ಳಾಪುರಗಳಾಗಿವೆ.

ಏಕೆಂದರೆ ಈ ಎರಡೂ ಜಿಲ್ಲೆಗಳಲ್ಲಿ ಇದುವರೆಗೂ ಬಿಜೆಪಿ ಒಂದು ವಿಧಾನಸಭಾವನ್ನು ಗೆಲ್ಲಲ್ಲು ಸಾಧ್ಯವಾಗಿರಲಿಲ್ಲ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡರೂ, ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಮಾತ್ರವಲ್ಲ ಠೇವಣಿ ಸಹ ಪಡೆಯಲಾಗುತ್ತಿರಲಿಲ್ಲ. ಆದರೆ ಈ ಉಪಚುನಾವಣೆ ಆ ಸಾಧ್ಯತೆಯನ್ನು ಬಿಜೆಪಿ ತೆರೆದಿಟ್ಟಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿಯೇ ಇದಕ್ಕೆ ಅಡಿಪಾಯವನ್ನು ಬಿಜೆಪಿ ಹಾಕಿಕೊಂಡಿತ್ತು. ಮಂಡ್ಯದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ರಿಗೆ ಬೆಂಬಲಿ ನೀಡುವ ಮೂಲಕ ತನ್ನ ಬೇಸ್‌ ಗಟ್ಟಿಗೊಳಿಸಲು ಮುಂದಾಗಿತ್ತು.

ಅಷ್ಟು ಮಾತ್ರವಲ್ಲದೇ ಇದು ಮುಖ್ಯಮಂತ್ರಿ ಯಡಿಯೂರಪ್ಪನವರ ಸ್ವಗ್ರಾಮ ಇರುವ ಕ್ಷೇತ್ರವಾಗಿದೆ. ಹಾಗಾಗಿ ಅವರು ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಲ್ಲದೇ ತುಂಬಾ ಭಾವನಾತ್ಮಕವಾಗಿ ಮಾತನಾಡಿ ನನ್ನ ಕ್ಷೇತ್ರದಲ್ಲಿ ನಾನು ಒಂದನ್ನು ಗೆಲ್ಲಲ್ಲು ಸಾಧ್ಯವಾಗಿಲ್ಲ ಎಂದು ಮಾತನ್ನಾಡಿದ್ದರು.

ಕೇವಲ ಮಾತು ಅಷ್ಟು ಮಾತ್ರವಲ್ಲದೇ ಒಕ್ಕಲಿಗ ಮತ ಪ್ರಾಬಲ್ಯವಿರುವ ಇಲ್ಲಿ ಯಡಿಯೂರಪ್ಪ ತನ್ನ ಮಗ ಬಿ.ವೈ ವಿಜಯೇಂದ್ರನ ಜೊತೆಗೆ ಒಕ್ಕಲಿಗರಾದ ಆರ್‌ ಅಶೋಕ್, ಡಿಸಿಎಂ ಅಶ್ವಥ್‌ ನಾರಾಯಣ್‌ಗೌಡ ಮತ್ತು ಶಾಸಕ ಪ್ರೀತಂ ಗೌಡ ಕ್ಷೇತ್ರದಲ್ಲುಳಿದು ಪ್ರಚಾರ ನಡೆಸಿದ್ದರು.

ಸುಮಲತಾ ಅಂಬರೀಶ್‌ ಬೆಂಬಲಿಗರು ಕೂಡ ಬಿಜೆಪಿಗೆ ಬೆಂಬಲ ನೀಡಿದ್ದರು ಎನ್ನಲಾಗುತ್ತಿತ್ತು. ಜೊತೆಗೆ ಇಲ್ಲಿ ಬಿಜೆಪಿ, ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಡುವೆ ತ್ರಿಕೋನ ಪೈಪೋಟಿ ಇತ್ತು. ಹಾಗಾಗಿ ಇಲ್ಲಿ ಮೂರು ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಗೆಲುವು ತನ್ನದಾಗಿಸಿಕೊಂಡಿದೆ.

ಇನ್ನು ಚಿಕ್ಕಬಳ್ಳಾಪುರದಲ್ಲಿ ಬಚ್ಚೇಗೌಡರನ್ನು ಎಂಪಿಯಾಗಿ ಗೆಲ್ಲಿಸಿದ್ದ ಬಿಜೆಪಿ ಈಗ ಮೊದಲ ಶಾಸಕರನ್ನು ಸಹ ಗೆಲ್ಲಿಸಿಕೊಂಡಿದೆ.

ಡಾ.ಕೆ ಸುಧಾಕರ್‌ ಕಾಂಗ್ರೆಸ್‌ನಿಂದ ಹಾರಿಬಂದು ಬಿಜೆಪಿ ಸೇರಿದ್ದರು. ಅದೇ ಸಂದರ್ಭದಲ್ಲಿ ಕನಕಪುರಕ್ಕೆ ನಿಯೋಜನೆಗೊಂಡಿದ್ದ ಮೆಡಿಕಲ್‌ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ತಿರುಗಿಸಿದ್ದು, ಜಿಲ್ಲೆಯಲ್ಲಿ ಹೊಸ ತಾಲ್ಲೂಕುಗಳ ಘೋಷಣೆಗಳ ಭರ್ಜರಿ ಭರವಸೆಯನ್ನು ನೀಡಲಾಗಿತ್ತು. ಅವುಗಳ ಹಿನ್ನೆಲೆಯಲ್ಲಿ ಬಿಜೆಪಿ ಸರಾಗವಾಗಿ ಗೆಲುವು ಸಾಧಿಸಿದೆ.

ಒಟ್ಟಿನಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಮತ್ತಷ್ಟು ಹೆಚ್ಚಿಸಿಕೊಂಡಿರುವುದನ್ನು ಈ ಉಪಚುನಾವಣೆ ತೋರಿಸಿಕೊಟ್ಟಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...