Homeಕರ್ನಾಟಕಕರಸೇವಕನ ಬಂಧನಕ್ಕೆ ಬಿಜೆಪಿ ವಿರೋಧ; ನ್ಯಾಯಾಲಯದ ಸೂಚನೆಯಂತೆ ಕ್ರಮ ಎಂದ ಸಿಎಂ

ಕರಸೇವಕನ ಬಂಧನಕ್ಕೆ ಬಿಜೆಪಿ ವಿರೋಧ; ನ್ಯಾಯಾಲಯದ ಸೂಚನೆಯಂತೆ ಕ್ರಮ ಎಂದ ಸಿಎಂ

- Advertisement -
- Advertisement -

ಮೂರು ದಶಕಗಳ ಹಿಂದಿನ ಬಾಬರಿ ಮಸೀದಿ ಧ್ವಂಸ, ರಾಮಜನ್ಮ ಭೂಮಿ ಗಲಾಟೆ ವೇಳೆ ಹುಬ್ಬಳ್ಳಿಯಲ್ಲಿ ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಸೋಮವಾರ ಬಂಧಿಸಿದ್ದು, ಹಳೆ ಪ್ರಕರಣ ಮರುಜೀವ ಪಡೆದುಕೊಂಡಿದೆ. ಡಿ.5, 1992ರಂದು ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದ್ದ ಗಲಭೆಯ ಸಂದರ್ಭ ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 8 ಜನರ ವಿರುದ್ಧ ಹುಬ್ಬಳ್ಳಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೆ ವಿಚಾರ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ಮಾತಿನ ವಿನಿಮಯ ನಡೆಯುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಗೃಹ ಇಲಾಖೆ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ‘ಹುಬ್ಬಳ್ಳಿಯ ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ, ನಿರಪರಾಧಿಗಳನ್ನು ಕೂಡಾ ಬಂಧಿಸಿಲ್ಲ. ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡಬೇಕೆಂಬ ಗೃಹ ಇಲಾಖೆಯ ಸೂಚನೆಯಂತೆ ಪೊಲೀಸರು ಕ್ರಮ ಕೈಕೊಂಡಿದ್ದಾರೆ’ ಎಂದು ಹೇಳಿದ್ದಾರೆ.

‘ಬಂಧಿತರಲ್ಲಿ ಕೆಲವರು ಹಳೆಯ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಕರಸೇವಕರು ಇದ್ದಿರಬಹುದು. ರಾಜ್ಯ ಸರ್ಕಾರ ಕರಸೇವಕರನ್ನೇ ಗುರಿಯಾಗಿಟ್ಟುಕೊಂಡು ಕ್ರಮಕೈಗೊಂಡಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಸೂಚನೆ ಏನಿದೆ ಅದರಂತೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಕ್ರಮವನ್ನು ಟೀಕಿಸಿರುವ ಬಿಜೆಪಿ ರಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ‘ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಹೋರಾಡಿದವರನ್ನು ಜೈಲಿಗಟ್ಟುವ ಕಾಂಗ್ರೆಸ್ ಸರ್ಕಾರದ ಕ್ರಮ ಹಿಂದೂ ದ್ವೇಷಿ ಹಾಗೂ ರಾಮ ಮಂದಿರ ನಿರ್ಮಾಣದ ವಿರೋಧಿ ಮನಸ್ಥಿತಿಯನ್ನು ಸಾಬೀತು ಪಡಿಸಿದೆ. ಹುಬ್ಬಳ್ಳಿಯಲ್ಲಿ ರಾಮಮಂದಿರ ಹೋರಾಟದಲ್ಲಿ ಭಾಗಿಯಾಗಿದ್ದ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು 31 ವರ್ಷಗಳ ಬಳಿಕ ಬಂಧನ ಹಾಗೂ ಉಳಿದ ಹೋರಾಟಗಾರರನ್ನು ಬಂಧಿಸಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಕಾನೂನಿನ ಹೆಸರಲ್ಲಿ ರಾಮ ಭಕ್ತರ ಮೇಲೆ ಸೇಡು ತೀರಿಸಿಕೊಳ್ಳುವ ವಿಕೃತ ಮನಸ್ಥಿತಿಯನ್ನು ಪ್ರತಿಬಿಂಬಿಸಿದೆ’ ಎಂದು ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ರಾಜ್ಯದಲ್ಲಿ ಸಾವಿರಾರು ಗಂಭೀರ ಕ್ರಿಮಿನಲ್ ಹಾಗೂ ದೇಶ ದ್ರೋಹಿ ಪ್ರಕರಣಗಳು ಮಂದಗತಿಯ ತನಿಖೆಯಿಂದ ದಶಕಗಳಿಂದಲೂ ಧೂಳು ಹಿಡಿಯುತ್ತಿವೆ. ಇದ್ಯಾವುದರತ್ತಲೂ ಗಮನ ಹರಿಸದೇ ರಾಮ ಭಕ್ತರನ್ನೇ ಗುರಿಯನ್ನಾಗಿಸಿಕೊಂಡಿರುವ ಸಿದ್ದರಾಮಯ್ಯ ಅವರ ಸರ್ಕಾರ ಸಮಾಜಕ್ಕೆ ಯಾವ ಸಂದೇಶ ಕೊಡಲು ಹೊರಟಿದೆ? ಶ್ರೀರಾಮ ಮಂದಿರ ನಿರ್ಮಾಣದ ವಿರುದ್ಧ ಪಿತೂರಿ ನಡೆಸಿದವರು ಏನಾದರು? ರಾಮಭಕ್ತರ ಮೇಲೆ ದೌರ್ಜನ್ಯ ನಡೆಸಿದ ಸರ್ಕಾರಗಳು ಏನಾದವು ಎಂಬುದನ್ನು ಇನ್ನೂ ಬುದ್ದಿ ಕಲಿಯದ ಕಾಂಗ್ರೆಸ್ಸಿಗರು ಇತಿಹಾಸವನ್ನೊಮ್ಮೆ ಮೆಲುಕು ಹಾಕಲಿ’ ಎಂದಿದ್ದಾರೆ.

ಕರಸೇವಕರ ಬಂಧನ ಖಂಡನೀಯ: ಬೊಮ್ಮಾಯಿ

‘ರಾಮಮಂದಿರ ಉದ್ಘಾಟನೆಗೆ ಸಿದ್ದವಾಗಿರುವ ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ 30 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ಹುಬ್ಬಳ್ಳಿಯ ಹಿಂದೂ ಕರಸೇವಕರ ಬಂಧನ ಮಾಡಿರುವುದು ಅತ್ಯಂತ ಖಂಡನೀಯ. ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಆಗುತ್ತಿರುವಂತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಲು ಆಗುತ್ತಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಇಡೀ ದೇಶದ ಜನ ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದರ ಹಿಂದಿನ ಉದ್ದೇಶ ಏನು? ಇಡೀ ದೇಶವೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ಕೊಡುತ್ತಿರುವ ಸಂದರ್ಭದಲ್ಲಿ ಈ ರೀತಿ ನಡೆಯುತ್ತಿದೆ. ರಾಜ್ಯದಲ್ಲಿ ಕಾನೂನು ಪಾಲನೆ ಮಾಡುವವರೇ ಕಾನೂನು ಉಲ್ಲಂಘನೆ ಮಾಡುತ್ತಿರುವುದಕ್ಕೆ ಇದು ಸ್ಪಷ್ಪ ನಿದರ್ಶನ’ ಎಂದಿದ್ದಾರೆ.

‘ಈಗಾಗಲೇ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ವಿರೋಧ ಮಾಡಿರುವುದಕ್ಕೆ ಕಾಂಗ್ರೆಸ್ ಗೆ ಸಂಸತ್ತಿನಲ್ಲಿ ಪ್ರತಿಪಕ್ಷದ ಸ್ಥಾನವೂ ಇಲ್ಲದಂತಾಗಿದೆ. ಈ ರೀತಿಯ ದ್ವೇಷದ ರಾಜಕಾರಣದಿಂದ ರಾಜ್ಯದಲ್ಲಿಯೂ ಕಾಂಗ್ರೆಸ್ ಅಂತ್ಯ ಕಾಣುವುದೂ ನಿಶ್ಚಿತ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ; 1992ರ ಹುಬ್ಬಳ್ಳಿ ಹಿಂಸಾಚಾರ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...