Homeಮುಖಪುಟತೆಲಂಗಾಣದಲ್ಲಿ ಬೃಹತ್ ಪಾದಯಾತ್ರೆ ಆರಂಭಿಸಿದ ಬಿಜೆಪಿ: ಕೋವಿಡ್ ಉಲ್ಬಣದ ಆತಂಕ!

ತೆಲಂಗಾಣದಲ್ಲಿ ಬೃಹತ್ ಪಾದಯಾತ್ರೆ ಆರಂಭಿಸಿದ ಬಿಜೆಪಿ: ಕೋವಿಡ್ ಉಲ್ಬಣದ ಆತಂಕ!

- Advertisement -
- Advertisement -

ತೆಲಂಗಾಣದಲ್ಲಿ ಶಥಾಯ – ಗತಯಾ ಅಧಿಕಾರಕ್ಕೆ ಬರಲು ಯತ್ನಿಸುತ್ತಿರುವ ಬಿಜೆಪಿ ಇಂದಿನಿಂದ 55 ದಿನಗಳ ಪ್ರಜಾಸಂಗ್ರಾಮ ಪಾದಯಾತ್ರೆ ಆರಂಭಿಸಿದೆ. ಸಾವಿರಾರು ಜನರು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಪಾದಯಾತ್ರೆಯಲ್ಲಿ ಭಾಗವಹಿಸಿರುವುದರಿಂದ ರಾಜ್ಯದಲ್ಲಿ ಕೋವಿಡ್ ಉಲ್ಭಣದ ಆತಂಕ ಉಂಟಾಗಿದೆ.

ಆರಂಭದ ದಿನವೇ “ಕೌಟುಂಬಿಕ ರಾಜಕಾರಣ ಮತ್ತು ಸರ್ವಾಧಿಕಾರಿ ವರ್ತನೆಯ ಕೆಸಿಆರ್ ಆಡಳಿತವನ್ನು ಕಿತ್ತು ಹಾಕಿ ಮತ್ತು ತಾಲಿಬಾನ್ ಮನಸ್ಥಿತಿಯ ಎಐಎಂಐಎಂ ಪಕ್ಷವನ್ನು ತಿರಸ್ಕರಿಸಿ” ಎಂದು ಪ್ರಚೋದನಕಾರಿ ಭಾಷಣದ ಮೂಲಕ ಯಾತ್ರೆ ಆರಂಭಿಸಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್‌ರವರು ಹೈದರಾಬಾದ್‌ನ ಓಲ್ಡ್‌ ಸಿಟಿಯಿಂದ ಗಣೇಶ ಶೋಭಾಯಾತ್ರೆ ಮತ್ತು ಹನುಮ ಜಯಂತಿ ಆಚರಣೆಗೆ ಕರೆ ನೀಡಿದ್ದಾರೆ.

“ತೆಲಂಗಾಣ ರಚನೆಯಿಂದ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ರಾವ್‌ರವರ ಕುಟುಂಬ ಮಾತ್ರ ಫಲಾನುಭವಿಯಾಗಿದೆ. ಈಗ ಅವರು ದಲಿತ ಬಂಧು ಯೋಜನೆ ಬಗ್ಗೆ ಮಾತನಾಡುತ್ತಿದ್ದಾರೆ. ಚುನಾವಣೆಗೂ ಮುಂಚೆ ಅವರು 125 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ, ದಲಿತ ಮುಖ್ಯಮಂತ್ರಿ, ಯುವಜನರಿಗೆ ಉದ್ಯೋಗದ ಬಗ್ಗೆ ಮಾತನಾಡಿದ್ದರು. ಆದರೆ ಅವೆಲ್ಲವನ್ನು ಮರೆತುಬಿಟ್ಟಿದ್ದಾರೆ” ಎಂದು ಬಂಡಿ ಸಂಜಯ್ ಟೀಕಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಆಡಳಿತರೂಢ ಟಿಆರ್‌ಎಸ್‌ ಪಕ್ಷವು ಸುಳ್ಳು ಆರೋಪ ಮಾಡುವವರ ನಾಲಿಕೆ ಕತ್ತರಿಸಬೇಕು ಎಂದು ಕಿಡಿಕಾರಿದೆ. ಬಿಜೆಪಿಯು ರಾಜ್ಯದಲ್ಲಿ ಪಾದಯಾತ್ರೆ ಮಾಡುವುದನ್ನು ಬಿಟ್ಟು ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡುವಂತೆ ದೆಹಲಿಯಲ್ಲಿ ಪಾದಯಾತ್ರೆ ನಡೆಸಲಿ ಎಂದು ಸಲಹೆ ನೀಡಿದೆ.


ಇದನ್ನೂ ಓದಿ: ಕುಂದಾಪುರ: ದಲಿತರಿಗೆ ಸಾಮಾಜಿಕ ಬಹಿಷ್ಕಾರ – ಕುಡಿಯುವ ನೀರಿಗೂ ಅಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...