Homeಮುಖಪುಟಚುನಾವಣೆ ಪ್ರಚಾರದ ವೇಳೆ ಜಿಎಸ್‌ಟಿ ಬಗ್ಗೆ ಪ್ರಶ್ನಿಸಿದ ಮಹಿಳೆಗೆ ಥಳಿಸಿದ ಬಿಜೆಪಿ ಕಾರ್ಯಕರ್ತರು

ಚುನಾವಣೆ ಪ್ರಚಾರದ ವೇಳೆ ಜಿಎಸ್‌ಟಿ ಬಗ್ಗೆ ಪ್ರಶ್ನಿಸಿದ ಮಹಿಳೆಗೆ ಥಳಿಸಿದ ಬಿಜೆಪಿ ಕಾರ್ಯಕರ್ತರು

- Advertisement -
- Advertisement -

ತಮಿಳು ನಾಡಿನ ತಿರುಪ್ಪೂರ್‌ನ ಆತುಪಾಳ್ಯಂನಲ್ಲಿ ಬಿಜೆಪಿ ಕಾರ್ಯಕರ್ತರು ಚುನಾವಣಾ ಪ್ರಚಾರದ ವೇಳೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಬಗ್ಗೆ ಪ್ರಶ್ನಿಸಿದ ಮಹಿಳೆಗೆ ಥಳಿಸಿ ಮೌಖಿಕವಾಗಿ ನಿಂದನೆ ಮಾಡಿರುವ ಘಟನೆ ನಡೆದಿದೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಬಗ್ಗೆ ಪ್ರಶ್ನಿಸಿದಾಗ ಬಿಜೆಪಿ ಸದಸ್ಯರ ಗುಂಪು ದೈಹಿಕವಾಗಿ ಮತ್ತು ಮೌಖಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ದ್ರಾವಿಡರ್ ವಿದುತಲೈ ಕಳಗಂ ಪಕ್ಷದ ಕಾರ್ಯಕರ್ತೆಯಾಗಿರುವ ಸಂಗೀತಾ ಎಂಬವರು ಆರೋಪಿಸಿದ್ದಾರೆ. ಏಪ್ರಿಲ್ 11ರಂದು ಬಿಜೆಪಿ ಪಕ್ಷದ ತಿರುಪ್ಪೂರ್‌ನ ಅಭ್ಯರ್ಥಿ ಎಪಿ ಮುರುಗಾನಂದಂ ಪರ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದಾಗ ಅವರು ಜಿಎಸ್‌ಟಿ ಕುರಿತು ಪ್ರಶ್ನೆಗಳನ್ನು ಎತ್ತಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಸಂಗೀತಾ ಅವರ ಪ್ರಚಾರವನ್ನು ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ಆಕೆ ಯಾಕೆ ಜಿಎಸ್‌ಟಿ ಬಗ್ಗೆ ಪ್ರಶ್ನೆ ಕೇಳಿದ್ದಾರೆ ಎಂದು ಓರ್ವ ಬಿಜೆಪಿ ಕಾರ್ಯಕರ್ತ ಆಕೆಗೆ ನಿಂದನಾರ್ಹ ಪದಗಳನ್ನು ಬಳಸಿ ಟೀಕೆ ಮಾಡುವುದು ಕಂಡು ಬಂದಿದೆ. ಇದಲ್ಲದೆ ವಾಗ್ವಾದದ ವೇಳೆ ಸಂಗೀತಾ ಅವರ ಫೋನ್ ಕೆಳಗೆ ಬಿದ್ದಿದೆ. ಇದಕ್ಕೆ ಮೊದಲು ಸಂಗೀತಾ ಘಟನೆಯನ್ನು ರೆಕಾರ್ಡ್ ಮಾಡುವುದನ್ನು ವೀಡಿಯೊ ತೋರಿಸುತ್ತದೆ. ಆಸುಪಾಸಿನಲ್ಲಿದ್ದ ಯಾರೋ ಅದನ್ನು ಎತ್ತಿಕೊಂಡು ಹೋಗುತ್ತಿರುವಾಗ ಸಂಗೀತಾ ಯಾರೋ ಒಬ್ಬರು ತನಗೆ ಹೊಡೆದಿದ್ದಾರೆಂದು ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ನಂತರದ ವೀಡಿಯೊದಲ್ಲಿ ಸಂಗೀತಾ ಅವರು ಅಕ್ಕಿ ಮತ್ತು ಗ್ಯಾಸ್ ಸಿಲಿಂಡರ್‌ಗಳಂತಹ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಏಕೆ ವಿಧಿಸಲಾಗುತ್ತದೆ ಎಂಬ ಪ್ರಶ್ನೆಯನ್ನು ಹಲವರು ಎತ್ತಿದ್ದಾರೆ. ಅವರು, ಮೋದಿಯವರ ಅವಧಿಯಲ್ಲಿ ಮಹಿಳೆಯರ ಜೀವನ ಮಟ್ಟ ಸುಧಾರಿಸಿದೆ ಎಂದು ಹೇಳಿದ್ದಾರೆ. ಈ ವೇಳೆ ನಾನು ಸ್ಯಾನಿಟರಿ ನ್ಯಾಪ್ಕಿನ್‌ಗಳ ಮೇಲೆ ಜಿಎಸ್‌ಟಿ ಏಕೆ ವಿಧಿಸುತ್ತೀರಿ ಎಂದು ಕೇಳಿದೆ. ಶೀಘ್ರದಲ್ಲೇ ಅಲ್ಲಿದ್ದವರೆಲ್ಲ ಜಿಎಸ್‌ಟಿ ಬಗ್ಗೆ ಬಿಜೆಪಿ ಕಾರ್ಯಕರ್ತರಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ. ಬಳಿಕ ನಾನು ನನ್ನ ಅಂಗಡಿಗೆ ತೆರಳಿದ್ದೇನೆ. ಸ್ವಲ್ಪ ಸಮಯದ ನಂತರ 10 ಜನ ನನ್ನ ಅಂಗಡಿ ಬಳಿಗೆ ಬಂದಿದ್ದಾರೆ. ಅವರು ನನ್ನ ಜೊತೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಬಳಿಕ ಚಿನ್ನಸಾಮಿ ಎಂಬಾತ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಸಂಗೀತಾ ಅವರು ಆರೋಪಿಸಿದ್ದಾರೆ.

ವರದಿಗಳ ಪ್ರಕಾರ, ಸಂಗೀತಾ ಅವರು ಘಟನೆ ಬಗ್ಗೆ ವೇಲಂಪಾಳ್ಯಂ ಪೊಲೀಸ್ ಠಾಣೆಯಲ್ಲಿ ಪೊಲೀಸ್ ದೂರು ದಾಖಲಿಸಿದ್ದಾರೆ ಮತ್ತು 15 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಭಾರತೀಯರಿಗಿರುವ ಕೊನೆಯ ಅವಕಾಶ: ಪಿ.ಚಿದಂಬರಂ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...