Homeಮುಖಪುಟಕೇಜ್ರಿವಾಲ್‌ ಮನೆಗೆ ಹಾನಿ ಮಾಡಿದ ಕಾರ್ಯಕರ್ತರಿಗೆ ಬಿಜೆಪಿ ಸನ್ಮಾನ

ಕೇಜ್ರಿವಾಲ್‌ ಮನೆಗೆ ಹಾನಿ ಮಾಡಿದ ಕಾರ್ಯಕರ್ತರಿಗೆ ಬಿಜೆಪಿ ಸನ್ಮಾನ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸವನ್ನು ಧ್ವಂಸಗೊಳಿಸಿದ ಆರೋಪದಲ್ಲಿ ಬಂಧಿತರಾಗಿ ಬಳಿಕ ಜಾಮೀನನ ಮೇಲೆ ಬಿಡುಗಡೆಯಾಗಿರುವ ಬಿಜೆಪಿ ಯುವ ಮೋರ್ಚಾದ ಎಂಟು ಮಂದಿಗೆ ಭಾರತೀಯ ಜನತಾ ಪಕ್ಷದ ದೆಹಲಿ ಘಟಕವು ಶುಕ್ರವಾರ ಸನ್ಮಾನಿಸಿದೆ.

ದುಷ್ಕೃತ್ಯದಲ್ಲಿ ಭಾಗಿಯಾದ ಎಂಟು ಮಂದಿಯನ್ನು ‘ಕ್ರಾಂತಿಕಾರಿಗಳು’ ಎಂದು ಕರೆದಿರುವ ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್‌ ಗುಪ್ತಾ, ಪಕ್ಷದ ಕಚೇರಿಯಲ್ಲಿ ಹೂಮಾಲೆಯೊಂದಿಗೆ ಕಾರ್ಯಕರ್ತರನ್ನು ಸನ್ಮಾನಿಸಿದ ನಂತರ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಿಂದೂ ವಿರೋಧಿ ಕೇಜ್ರಿವಾಲ್ ವಿರುದ್ಧ ಪ್ರತಿಭಟನೆ ನಡೆಸಿ ಜೈಲಿಗೆ ಹೋದ ಯುವಮೊರ್ಚಾದ ಎಂಟು ಕಾರ್ಯಕರ್ತರು 14 ದಿನಗಳ ನಂತರ ನ್ಯಾಯಾಲಯದಿಂದ ಜಾಮೀನು ಪಡೆದರು. ಇಂದು ಪಕ್ಷದ ಕಚೇರಿಯಲ್ಲಿ ಈ ಯುವ ಕ್ರಾಂತಿಕಾರಿಗಳನ್ನು ಸ್ವಾಗತಿಸಲಾಯಿತು. ನಮ್ಮ ಪ್ರತಿಯೊಬ್ಬ ಕಾರ್ಯಕರ್ತರು ಹಿಂದೂ ವಿರೋಧಿ ಶಕ್ತಿಗಳ ವಿರುದ್ಧ ಹೋರಾಡುತ್ತಲೇ ಇರುತ್ತಾರೆ” ಎಂದು ಗುಪ್ತಾ ಟ್ವೀಟ್ ಮಾಡಿದ್ದಾರೆ.

ಪ್ರತಿಭಟನೆಯ ವೇಳೆ ಬಿಜೆಪಿ ಕಾರ್ಯಕರ್ತರು ಕೇಜ್ರಿವಾಲ್ ಅವರ ಮನೆಯ ಸಿಸಿಟಿವಿ ಕ್ಯಾಮೆರಾಗಳು ಮತ್ತು ತಡೆಗೋಡೆಗಳನ್ನು ಹಾನಿ ಮಾಡಿದ್ದಾರೆಂದು ಆರೋಪಿಸಲಾಗಿದೆ. ‘ಕಾಶ್ಮೀರ್‌ ಫೈಲ್ಸ್‌’ ಸಿನಿಮಾಕ್ಕೆ ತೆರಿಗೆ ವಿನಾಯಿತಿಯನ್ನು ವಿರೋಧಿಸಿದ್ದ ಕೇಜ್ರಿವಾಲ್‌, ‘ಕಾಶ್ಮೀರ ಫೈಲ್ಸ್’ ಹೆಸರಲ್ಲಿ ನಿರ್ಮಾಪಕರು ಹಣ ದೋಚುತ್ತಿರುವುದನ್ನು ಉಲ್ಲೇಖಿಸಿದ್ದರು.

ಇದನ್ನೂ ಓದಿರಿ: ಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ. “ಪಂಜಾಬ್‌ನಲ್ಲಿ ಸೋತ ನಂತರ ಬಿಜೆಪಿಯು ಕೇಜ್ರಿವಾಲ್‌ರನ್ನು ಕೊಲ್ಲಲು ಬಯಸುತ್ತಿದೆ” ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದರು.

“ಎಎಪಿ ಸಮಾಜದ ಎಲ್ಲಾ ವರ್ಗಗಳಿಂದ ಬೆಂಬಲ ಪಡೆಯುತ್ತಿರುವುದರಿಂದ ಬಿಜೆಪಿ ಪ್ಯಾನಿಕ್ ಮೋಡ್‌ನಲ್ಲಿದೆ. ಬಿಜೆಪಿಯ ಗೂಂಡಾಗಳಿಂದ ಕೇಜ್ರಿವಾಲ್-ಜಿ ಮೇಲಾದ ದಾಳಿಯು ಭಾರತದ ಜನರ ಮೇಲಿನ ದಾಳಿಯಾಗಿದೆ. ಜನರು ಬಿಜೆಪಿಗೆ ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದ್ದರು.

ಪ್ರತಿಭಟನೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೂರ್ಯ, “ಅವರು (ಕೇಜ್ರಿವಾಲ್) ಕಾಶ್ಮೀರಿ ಪಂಡಿತರ ಹತ್ಯಾಕಾಂಡವನ್ನು ಅಸತ್ಯ ಎಂದು ಲೇವಡಿ ಮಾಡಿದರು. ಬೇಷರತ್ ಕ್ಷಮೆಯಾಚಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಅವರು ಕ್ಷಮೆಯಾಚಿಸುವವರೆಗೂ ನಮ್ಮ ಪ್ರತಿಭಟನೆಗಳು ಮುಂದುವರೆಯುತ್ತವೆ” ಎಂದಿದ್ದರು.

“ಈ ಪ್ರತಿಭಟನೆಯು ಚಲನಚಿತ್ರದ ಪರವಾಗಿ ಅಥವಾ ‘ದಿ ಕಾಶ್ಮೀರ ಫೈಲ್ಸ್’ ಬಗ್ಗೆ ಅಲ್ಲ. ಈ ಪ್ರತಿಭಟನೆಯು ಕಾಶ್ಮೀರದಲ್ಲಿನ ಹಿಂದೂಗಳ ನರಮೇಧವನ್ನು ನಿರಾಕರಿಸುವ ಕೇಜ್ರಿವಾಲ್ ಅವರ ಅಮಾನವೀಯ ಮನಸ್ಥಿತಿಯ ವಿರುದ್ಧವಾಗಿದೆ” ಎಂದು ಸೂರ್ಯ ಹೇಳಿದ್ದರು.

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಮಾರ್ಚ್ 31ರಂದು ಬಂಧಿಸಲಾಯಿತು. ನಂತರ ಕಾರ್ಯಕರ್ತರು ಜಾಮೀನು ಅರ್ಜಿಗಾಗಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಅರ್ಜಿ ತಿರಸ್ಕೃತವಾದ ಕಾರಣ ಅವರು ದೆಹಲಿ ಹೈಕೋರ್ಟ್‌ನ ಮೊರೆ ಹೋಗಿದ್ದರು.

ಕೇಜ್ರಿವಾಲ್ ಹೇಳಿದ್ದೇನು?

ದೆಹಲಿ ಅಸೆಂಬ್ಲಿಯಲ್ಲಿ ಮಾತನಾಡುವಾಗ ಕೇಜ್ರಿವಾಲ್ ಅವರು ಕಾಶ್ಮೀರ ಫೈಲ್‌ ಸಿನಿಮಾ ಸಂಬಂಧ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಬೇಕು ಎಂಬ ಬಿಜೆಪಿ ಶಾಸಕರ ಬೇಡಿಕೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್ ಅವರು, “ನೀವು ಇದಕ್ಕಾಗಿಯೇ ರಾಜಕೀಯ ಸೇರಿದ್ದೀರಾ? ಚಿತ್ರ ನಿರ್ಮಾಪಕರು ಕೋಟಿಗಟ್ಟಲೆ ಹಣ ಗಳಿಸುತ್ತಿದ್ದರೆ, ಬಿಜೆಪಿ ಸದಸ್ಯರು ಸಿನಿಮಾ ಪ್ರಚಾರಕ್ಕೆ ಇಳಿದು ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ” ಎಂದು ಟೀಕಿಸಿದ್ದರು.

ಇದನ್ನೂ ಓದಿರಿ: ಪಂಜಾಬ್‌: ರಾಜ್ಯಸಭೆ ಅಭ್ಯರ್ಥಿಯಾಗಿ ಕ್ರಿಕೆಟಿಗ ಹರ್ಭಜನ್ ಸಿಂಗ್‌ರನ್ನು ಆಯ್ಕೆ ಮಾಡಿದ ಎಎಪಿ

“ಇದಕ್ಕಾಗಿಯೇ ನೀವು ರಾಜಕೀಯಕ್ಕೆ ಬಂದಿದ್ದೀರಾ? ಸಿನಿಮಾಗಳ ಪೋಸ್ಟರ್ ಹಾಕಲು? ನಿಮ್ಮ ಕೆಲಸದ ಬಗ್ಗೆ ನಿಮ್ಮ ಮಕ್ಕಳಿಗೆ ಕೇಳಿದಾಗ ನೀವು ಏನು ಹೇಳುತ್ತೀರಿ. ಚಿತ್ರ ಕಾ ಪೋಸ್ಟರ್ ಲಗಾತಾ ಹೂಂ? (ನಾನು ಚಲನಚಿತ್ರ ಪೋಸ್ಟರ್‌ಗಳನ್ನು ಹಾಕಿದ್ದೇನೆ) ಎನ್ನುವಿರಾ?” ಎಂದು ಕೇಜ್ರಿವಾಲ್ ಕುಟುಕಿದ್ದರು.

ಮುಂದುವರಿದು, “ನಿಜವಾಗಲೂ ಸಾರ್ವಜನಿಕ ಹಿತಾಸಕ್ತಿಯಿಂದ ಸಿನಿಮಾ ಮಾಡಿದ್ದರೆ ಸಿನಿಮಾ ನಿರ್ಮಾಪಕರು ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಬೇಕು” ಎಂದು ಕೇಜ್ರಿವಾಲ್ ಆಗ್ರಹಿಸಿದ್ದು ಜನರ ಪ್ರಶಂಸೆಗೆ ಪಾತ್ರವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬಿಜೆಪಿಯು ಗೂಂಡಾಗಿರಿಯನ್ನು ಪ್ರೋತ್ಸಾಹಿಸುತ್ತಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...