Homeಮುಖಪುಟನುಹ್‌ ನಲ್ಲಿ ನಡೆದಂತೆ ಮಧ್ಯಪ್ರದೇಶದಲ್ಲಿ ಬಿಜೆಪಿ  ಗಲಭೆ  ಸೃಷ್ಟಿಸಲು ಯತ್ನಿಸುತ್ತದೆ: ದಿಗ್ವಿಜಯ ಸಿಂಗ್

ನುಹ್‌ ನಲ್ಲಿ ನಡೆದಂತೆ ಮಧ್ಯಪ್ರದೇಶದಲ್ಲಿ ಬಿಜೆಪಿ  ಗಲಭೆ  ಸೃಷ್ಟಿಸಲು ಯತ್ನಿಸುತ್ತದೆ: ದಿಗ್ವಿಜಯ ಸಿಂಗ್

- Advertisement -
- Advertisement -

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಬಿಜೆಪಿ ವಿರುದ್ಧ ತೀವ್ರವಾಗಿ ಟೀಕೆಯನ್ನು ಮಾಡಿದ್ದು, ಹರಿಯಾಣದ ನುಹ್‌ನಲ್ಲಿ ಹಿಂಸಾಚಾರ ನಡೆದಂತೆ, ವಿಧಾನಸಭಾ ಚುನಾವಣೆಗೆ ಮುನ್ನ ಮಧ್ಯಪ್ರದೇಶದಲ್ಲಿ ಬಿಜೆಪಿ “ಕೋಮು ಗಲಭೆಗಳನ್ನು”  ಹುಟ್ಟುಹಾಕಲು ಯೋಜಿಸುತ್ತಿದೆ ಎಂದು ದಿಗ್ವಿಜಯ ಸಿಂಗ್ ಆರೋಪಿಸಿದ್ದಾರೆ.

ಭೋಪಾಲ್‌ನಲ್ಲಿ ವಕೀಲರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಂಗ್ ಅವರು, ಈ ಜನರು ಹರಿಯಾಣದ ನುಹ್‌ನಲ್ಲಿ ಕೋಮುಗಲಭೆಗೆ ಕಾರಣವಾದ ರೀತಿಯಲ್ಲಿ, ಮಧ್ಯಪ್ರದೇಶದಲ್ಲಿ ಕೂಡ ಗಲಭೆಗೆ  ಪ್ರಚೋದಿಸಲು ಅವರು ಯತ್ನಿಸುತ್ತಿದ್ದಾರೆ ಎಂದು  ಸಿಂಗ್ ಹೇಳಿದ್ದಾರೆ.

ಮುಂದಿನ ವಿಧಾನಸಬೆಯಲ್ಲಿ ಬಿಜೆಪಿ ಸೋಲು ನಿಶ್ಚಿತವಾಗಿದ್ದು ಅದಕ್ಕಾಗಿ ಮಧ್ಯಪ್ರದೇಶದಲ್ಲಿ ಬಿಜೆಪಿ ಗಲಭೆಗಳನ್ನು ಸೃಷ್ಟಿಸಲು ಯೋಜಿಸುತ್ತಿದೆ ಎಂದು ಸಿಂಗ್ ಹೇಳಿದರು.

ರಾಜ್ಯದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದ ವಿರುದ್ಧ ಸಾಕಷ್ಟು ಅಸಮಾಧಾನ ಇರುವುದು ಬಿಜೆಪಿಗೆ ಸ್ವಯಂ ಗೊತ್ತಿದೆ ಎಂದು ಅವರು ಹೇಳಿದ್ದಾರೆ.ಮುಂದಿನ ಚುನಾವನೆಯಲ್ಲಿ ಗೆಲುವನ್ನು ಸಾಧಿಸಿ  ನಾವು ರಾಜ್ಯದಲ್ಲಿ ಮುಂದಿನ ಸರ್ಕಾರವನ್ನು ರಚಿಸಲಿದ್ದೇವೆ  ಎಂದು ಅವರು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಹರಿಯಾಣದ ನುಹ್‌ನಲ್ಲಿ ನಡೆದ ಘರ್ಷಣೆಯಲ್ಲಿ ಇಬ್ಬರು ಗೃಹ ರಕ್ಷಕರು, ಮಸೀದಿಯ ಇಮಾಮ್  ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದರು.

ವಿಶ್ವ ಹಿಂದೂ ಪರಿಷತ್ ಮೆರವಣಿಗೆಯ ಬಳಿಕ ಘರ್ಷಣೆ ಪ್ರಾರಂಭವಾಯಿತು ಮತ್ತು ನಂತರ ಗುರುಗ್ರಾಮ್, ಪಲ್ವಾಲ್ ಮತ್ತು ಹರಿಯಾಣದ ಇತರ ಜಿಲ್ಲೆಗಳಿಗೆ ಹರಡಿತ್ತು. ಹಲವಾರು ವಾಹನಗಳು,ಅಂಗಡಿಗಳಿಗೆ  ಉದ್ರಿಕ್ತರ  ಗುಂಪು ಬೆಂಕಿ ಹಚ್ಚಿದ್ದವು.

ಇದನ್ನು ಓದಿ: ಸೂಫಿ ಸಂತರಿಗೆ ಮರುನಾಮಕರಣ ಮಾಡಿದ ಸಂಘಪರಿವಾರ: ಮುಸ್ಲಿಮರಿಂದ ಉಪವಾಸ ಸತ್ಯಾಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...