Homeಕರ್ನಾಟಕವರುಣಾದಲ್ಲಿ ದಲಿತ ಹುಡುಗನ ಕೊಂದು, ಕುರುಬರ ತಲೆಗೆ ಕಟ್ಟಲು ಬಿಜೆಪಿ ಯೋಜಿಸಿದೆ: ವಿಶ್ವನಾಥ್

ವರುಣಾದಲ್ಲಿ ದಲಿತ ಹುಡುಗನ ಕೊಂದು, ಕುರುಬರ ತಲೆಗೆ ಕಟ್ಟಲು ಬಿಜೆಪಿ ಯೋಜಿಸಿದೆ: ವಿಶ್ವನಾಥ್

- Advertisement -
- Advertisement -

ವರುಣಾದಲ್ಲಿ ದಲಿತ ಹುಡುಗನ ಕೊಲೆ ಮಾಡಿ, ಅದನ್ನು ಕುರುಬರ ತಲೆಗೆ ಕಟ್ಟುವ ಹುನ್ನಾರವನ್ನು ಬಿಜೆಪಿ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಹೇಳಿದ್ದಾರೆ.

ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಿರುಗುಂದದಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿರುವ ವೇಳೆ ಮಾತನಾಡಿರುವ ಅವರು, ‘’ವರುಣ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ ಚುನಾವಣೆಗೆ ಒಂದೆರಡು ದಿನ ಬಾಕಿ ಇರುವಾಗಲೆ ದಲಿತ ಹುಡುಗನ ಹತ್ಯೆ ಮಾಡಿ ಅದನ್ನು ಕುರುಬರ ತಲೆಗೆ ಕಟ್ಟುವ ಹುನ್ನಾರ ಮಾಡುತ್ತಿದೆ’’ ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ  ಅವರು ಸಿದ್ದರಾಮಯ್ಯನವರ ಪರ ಪ್ರಚಾರ ಮಾಡುತ್ತಿದ್ದಾರೆ. ವರುಣ ಕ್ಷೇತ್ರದಲ್ಲಿ ಮಾತನಾಡಿದ್ದು, ‘`ನಾನು ಲೋಕಸಭಾ ಸದಸ್ಯ ಆಗಿದ್ದವನು. ನನಗೆ ಹಲವಾರು ಅಧಿಕಾರಿಗಳ ಸಂಪರ್ಕವಿದೆ. ಸಿದ್ದರಾಮಯ್ಯ ವಿರುದ್ಧ ಕುತಂತ್ರ ನಡೆಯುತ್ತಿದೆ’’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘’1978ರಲ್ಲಿ ಇದೇ ರೀತಿ ಆಗಿತ್ತು. ಹೀಗಾಗಿ ಕಾಂಗ್ರೆಸ್ಸಿನವರು ಬಹಳ ಜಾಗೂರೂಕರಾಗಿ ಕೆಲಸ ಮಾಡಬೇಕು. ದಲಿತ ವೋಟುಗಳು ಯಾವುದೇ ಕಾರಣಕ್ಕೂ ವಿಭಜನೆಯಾಗಲ್ಲ. ದಲಿತರು ಕಾಂಗ್ರೆಸ್ ಪರ ನಿಲ್ಲಲಿದ್ದಾರೆ. ಚುನಾವಣೆಯಲ್ಲಿ ಯೋಚನೆ ಮಾಡಿ ಬಹಳ ಹುಷಾರಾಗಿ ಕೆಲಸ ಮಾಡಿದಲ್ಲಿ ಸಿದ್ದರಾಮಯ್ಯ ಗೆಲಲ್ಲಿದ್ದಾರೆ’’ ಎಂದು ಭವಿಷ್ಯ ನುಡಿದಿದ್ದಾರೆ.

ಇದಕ್ಕೂ ಮುನ್ನ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರ ಜತೆಗೂಡಿ ವರುಣ ಕ್ಷೇತ್ರದಲ್ಲಿ ಪ್ರಚಾರದಲ್ಲಿ ಭಾಗವಹಿಸಿದ್ದರು. ವಿಶ್ವನಾಥ್ ಸದ್ಯ ಬಿಜೆಪಿಯಿಂದ ಸಾಂಸ್ಕೃತಿಕ ಕೋಟಾದಡಿ ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನವಾಗಿದ್ದರು. ತದನಂತರ ಪಕ್ಷದ ಆಂತರಿಕ ಜಗಳದಿಂದ ಬಿಜೆಪಿಯಿಂದ ಅಂತರ ಕಾಯ್ದೊಂಡು ಕಾಂಗ್ರೆಸ್ ಜತೆ ಗುರುತಿಸಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿ ತಲೆಗಳಲ್ಲಿ ಒಬ್ಬರಾದ ವಿಶ್ವನಾಥ್ ಅವರು, ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಮುನಿಸಿಕೊಂಡು ಜೆಡಿಎಸ್ ಸೇರಿ, ಪಕ್ಷದ ರಾಜ್ಯಧ್ಯಕ್ಷರಾಗಿದ್ದರು. ಆದರೆ, ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮೈತ್ರಿ ಸರ್ಕಾರದ ಅವಧಿಯಲ್ಲಿ ನಡೆದ ಆಪರೇಷನ್ ಕಮಲದಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.

2018ರ ಚುನಾವಣೆ ಬೆನ್ನಲ್ಲೇ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ್ದವು. ಎರಡು ಪಕ್ಷದಲ್ಲಿ ಹೊಂದಣಿಕೆ ಸರಳವಾಗಿ ಸಾಗಿತ್ತು ಎನ್ನುವುದು ಮೇಲ್ನೋಟಕ್ಕೆ ಕಂಡರೂ ಎರಡೂ ಪಕ್ಷದ ಸದಸ್ಯರಲ್ಲಿ ವೈಮನಸ್ಸು ಮೂಡಿತ್ತು. ನಂತರದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಕೆಲವು ನಾಯಕರು ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದಿದ್ದರು. ಪರಿಣಾಮ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಿದ್ದು ಹೋಗಿತ್ತು. ಬಂಡಾಯವೆದ್ದು ಬಿಜೆಪಿ ಸೇರಿದ್ದ ಶಾಸಕರುಗಳಲ್ಲಿ ಹೆಚ್.ವಿಶ್ವನಾಥ್ ಕೂಡ ಒಬ್ಬರಾಗಿದ್ದರು.

ಹುಣಸೂರು ವಿಧಾನಸಭಾ ವಿಧಾನಸಭಾ ಕ್ಷೇತ್ರದಲ್ಲಿ 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ, ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ.ಮಂಜುನಾಥ್ ಎದುರು ಸೋತಿದ್ದರು. ಬಳಿಕ ಅವರನ್ನು ಎಂಎಲ್ಸಿ ಮಾಡಲಾಗಿತ್ತು. ಬಿಜೆಪಿಯೊಂದಿಗೆ ಮೊದಲಿನಿಂದಲೂ ಸೈದ್ಧಾಂತಿಕ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಾ ಬಂದಿರುವ, ಹಳ್ಳಿಹಳ್ಳಿ ಖ್ಯಾತಿಯ ವಿಶ್ವನಾಥ್, ಬಿಜೆಪಿ ನಾಯಕರ ನಿಲುವುಗಳನ್ನು ಕಟುವಾಗಿ ಟೀಕಿಸುತ್ತಾ ಬಂದಿದ್ದಾರೆ. ಅಂತಿಮವಾಗಿ ಮತ್ತೆ ಕಾಂಗ್ರೆಸ್ಸಿಗೆ ಮರಳಿದ್ದು, ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...