Homeಮುಖಪುಟಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಬಿಜೆಪಿ ಸಂಚು: ಶಿವಸೇನೆ

ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಬಿಜೆಪಿ ಸಂಚು: ಶಿವಸೇನೆ

- Advertisement -
- Advertisement -

ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಶುಕ್ರವಾರ ಆರೋಪಿಸಿದ್ದು, ಈ ಬಗ್ಗೆ ಬಿಜೆಪಿ ಒಕ್ಕೂಟ ಸರ್ಕಾರದ ಗೃಹ ಸಚಿವಾಲಯದ ಮುಂದೆ ಪ್ರಸ್ತುತಿಯನ್ನು ಸಲ್ಲಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ರಾವುತ್, “ಬಿಜೆಪಿ ಸಂಸದ ಕಿರಿತ್‌‌‌ ಸೋಮಯ್ಯ ಮತ್ತು ಕೆಲವು ಬಿಜೆಪಿ ನಾಯಕರು, ಬಿಲ್ಡರ್‌ಗಳು, ವ್ಯಾಪಾರಿ ಸೇರಿದಂತೆ ಹಲವರು ಪಿತೂರಿಯ ಭಾಗವಾಗಿದ್ದಾರೆ. ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವ ಕುರಿತು ಗೃಹಸಚಿವಾಲಯಕ್ಕೆ ಪ್ರಸ್ತುತಿಯನ್ನು ನೀಡಲಾಗಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಉದ್ದೇಶಕ್ಕಾಗಿ ಸಭೆಗಳನ್ನು ನಡೆಸಲಾಗಿದ್ದು ಹಣವನ್ನು ಸಂಗ್ರಹಿಸಲಾಗುತ್ತಿದೆ. ಇದು ಕಳೆದ ಎರಡು ತಿಂಗಳಿನಿಂದ ನಡೆಯುತ್ತಿದೆ. ನಾನು ಇದನ್ನು ಸಂಪೂರ್ಣ ಜವಾಬ್ದಾರಿಯಿಂದ ಹೇಳುತ್ತಿದ್ದೇನೆ. ನಾನು ಹೇಳುತ್ತಿರುವುದನ್ನು ಸಮರ್ಥಿಸಲು ನನ್ನ ಬಳಿ ಪುರಾವೆಗಳಿವೆ. ಈ ಬೆಳವಣಿಗೆಯ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೂ ತಿಳಿದಿದೆ” ಎಂದು ಸಂಜಯ್ ರಾವತ್‌ ಹೇಳಿದ್ದಾರೆ.

ಮುಂಬೈನಲ್ಲಿ ಮರಾಠಿ ಜನರ ಶೇಕಡಾವಾರು ಪ್ರಮಾಣವು ತೀವ್ರವಾಗಿ ಕುಸಿದಿರುವುದರಿಂದ ನಗರವನ್ನು ಒಕ್ಕೂಟ ಸರ್ಕಾರದ ಸರ್ಕಾರದ ಆಡಳಿತದಲ್ಲಿ ಕೇಂದ್ರಾಡಳಿತ ಮಾಡಬೇಕು ಎಂದು ಮುಂಬರುವ ತಿಂಗಳುಗಳಲ್ಲಿ ಸೋಮಯ್ಯ ನೇತೃತ್ವದ ತಂಡವು ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆಯಿದೆ ಎಂದು ರಾವತ್ ಪ್ರತಿಪಾದಿಸಿದ್ದಾರೆ.

ಶಾಲೆಗಳಲ್ಲಿ ಮರಾಠಿಯನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸೋಮಯ್ಯ ಇತ್ತೀಚೆಗೆ ಪ್ರಶ್ನಿಸಿದ್ದರು ಎಂದು ರಾವತ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಮುಂಬೈ ಕಾರ್ಪೋರೇಷನ್‌‌ ಚುನಾವಣೆಯಲ್ಲಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ: ಶಿವಸೇನೆ ನಾಯಕ ಅನಿಲ್ ದೇಸಾಯಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...