Homeಮುಖಪುಟಬಿಜೆಪಿ ಬಡ ರಾಜ್ಯಗಳ ಬೆನ್ನೆಲುಬು ಮುರಿದು; ನಿಂಬೆಯಂತೆ ಹಿಂಡಿದೆ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಬಿಜೆಪಿ ಬಡ ರಾಜ್ಯಗಳ ಬೆನ್ನೆಲುಬು ಮುರಿದು; ನಿಂಬೆಯಂತೆ ಹಿಂಡಿದೆ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

- Advertisement -
- Advertisement -

ಬಿಜೆಪಿ ಪಕ್ಷವು ಸುಮಾರು ಎರಡು ದಶಕಗಳಿಂದ ರಾಜ್ಯವನ್ನು “ನಿಂಬೆಹಣ್ಣಿನಂತೆ ಹಿಸುಕಿ” ಮತ್ತು ಬಡ ರಾಜ್ಯಗಳ ಬೆನ್ನೆಲುಬುಗಳನ್ನು “ಮುರಿದುಹಾಕಿದೆ” ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಶಾಸಕರು, ಸಂಸದರನ್ನು ಬೇಟೆಯಾಡಿ  ಸರ್ಕಾರಗಳನ್ನು ಉರುಳಿಸಿ “ಡಬಲ್ ಎಂಜಿನ್ ಸರ್ಕಾರಗಳನ್ನು” ರಚಿಸುತ್ತಾ, ದೇಶದ ಒಕ್ಕೂಟ ರಚನೆಯನ್ನು “ನಾಶಗೊಳಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ. ಬಿಜೆಪಿ ಬಡ ರಾಜ್ಯಗಳ

“ಬಿಜೆಪಿ ಕಳೆದ 20 ವರ್ಷಗಳಲ್ಲಿ ಜಾರ್ಖಂಡ್ ಅನ್ನು ನಿಂಬೆಹಣ್ಣಿನಂತೆ ಹಿಂಡಿದೆ. ಆದರೆ, ಈಗಲಾದರೂ ಅದು ಕೊನೆಗೊಳ್ಳಬೇಕು. ನಾವು ಹಸುವಿಗೆ ಆಹಾರವನ್ನು ನೀಡುತ್ತೇವೆ, ಆದರೆ ಅದರಿಂದ ಹಾಲು ಪಡೆಯುವುದು ಅವರು. ಜಾರ್ಖಂಡ್‌ನ ಸಂಪತ್ತನ್ನು ಅವರು ಲೂಟಿ ಮಾಡುತ್ತಿದ್ದಾರೆ. ಜಾರ್ಖಂಡ್ ಖನಿಜಗಳಿಂದ ಸಮೃದ್ಧವಾಗಿದ್ದರೂ, ಸಂಪನ್ಮೂಲಗಳು ಇದ್ದರೂ ರಾಜ್ಯವು ಅತ್ಯಂತ ಬಡ ರಾಜ್ಯಗಳಲ್ಲಿ ಒಂದಾಗಿದೆ. ಇದು ಒಂದು ವಿರೋಧಾಭಾಸವಾಗಿದ್ದು, ಇದಕ್ಕೆ ಇನ್ನು ಮುಂದೆ ಅನುಮತಿ ನೀಡಬಾರದು” ಎಂದು ಜಾರ್ಖಂಡ್ ಮುಖ್ಯಮಂತ್ರಿ ಸೊರೆನ್ ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಕಲ್ಲಿದ್ದಲು, ಕಬ್ಬಿಣದ ಅದಿರು, ಬಾಕ್ಸೈಟ್, ಡಾಲಮೈಟ್‌ಗಳಂತಹ ಸಂಪನ್ಮೂಲಗಳು ನಮ್ಮಲ್ಲಿ ಹೇರಳವಾಗಿದೆ. ಆದರೆ ಜಾರ್ಖಂಡ್‌ನಂತಹ ರಾಜ್ಯಗಳ ಬೆನ್ನೆಲುಬುಗಳನ್ನು ಮುರಿದ ಕೇಂದ್ರ ಸರ್ಕಾರ, ಜಿಎಸ್‌ಟಿ ಮೂಲಕ ನಮ್ಮ ಆದಾಯ ಸಂಗ್ರಹಕ್ಕೆ ಅಡ್ಡಿ ಮಾಡಿದೆ. ಅವರು ನಮ್ಮ ಹಣಕಾಸಿನ ಅಗತ್ಯಗಳನ್ನು ಪರಿಹರಿಸಲು ಕೂಡಾ ಏನೂ ಮಾಡಿಲ್ಲ” ಅವರು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪದೇ ಪದೇ ಪತ್ರ ಬರೆದರೂ ರಾಜ್ಯಕ್ಕೆ ನೀಡಬೇಕಿರುವ 1.36 ಲಕ್ಷ ಕೋಟಿ ಕಲ್ಲಿದ್ದಲು ಬಾಕಿಯನ್ನು ಇನ್ನೂ ಪಾವತಿಸಿಲ್ಲ ಎಂದು ಸೋರೆನ್ ಹೇಳಿದ್ದಾರೆ. ಬಿಜೆಪಿಯು ವಿಭಜನೆಯ ರಾಜಕೀಯ, ಹಿಂದೂ-ಮುಸ್ಲಿಂ ಧ್ರುವೀಕರಣ ಮತ್ತು ಕೋಮು ದ್ವೇಷದ ಅಜೆಂಡಾದಲ್ಲಿ ಸ್ಥಿರವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ. ಆರೋಗ್ಯಕರ ರಾಜಕೀಯ ಸ್ಪರ್ಧೆಯನ್ನು ಅಳಿಸಿಹಾಕುತ್ತಿರುವುದು ಈ ದೇಶದ ದೌರ್ಭಾಗ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

“ಅವರಿಗೆ ಅಭಿವೃದ್ಧಿ, ಉದ್ಯೋಗ ಅಥವಾ ಆರ್ಥಿಕ ಸಮೃದ್ಧಿಯ ಯಾವುದೇ ಅಜೆಂಡಾವಿಲ್ಲ. ಅವರಿಗೆ ತಿಳಿದಿರುವ ಏಕೈಕ ಅಜೆಂಡಾ ವಿಭಜನೆಯಾಗಿದೆ. ಅವರು ವಿಭಜಕ ರಾಜಕೀಯದ ಬಗ್ಗೆ ಮಾತನಾಡುತ್ತಾ, ಕೋಮು ದ್ವೇಷವನ್ನು ಬೆಳೆಸುತ್ತಾರೆ. ಹಿಂದೂ-ಮುಸ್ಲಿಂ ಧ್ರುವೀಕರಣವನ್ನು ಉತ್ತೇಜಿಸುತ್ತಾರೆ” ಅವರು ಆರೋಪಿಸಿದ್ದಾರೆ. ಬಿಜೆಪಿ ಬಡ ರಾಜ್ಯಗಳ

“ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ, ಬುಡಕಟ್ಟು ಮುಖ್ಯಮಂತ್ರಿಯೊಬ್ಬ ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸುವುದು ಜೀರ್ಣಿಸಿಕೊಳ್ಳಲು ಸಾಧ್ಯವಾಗಲಿಲ್ಲ” ಎಂದು ಸೊರೆನ್ ಪ್ರತಿಪಾದಿಸಿದ್ದು, ಅದಕ್ಕಾಗಿಯೆ ಅವರ ಸರ್ಕಾರವನ್ನು ದುರ್ಬಲಗೊಳಿಸಲು ಸಮಯಕ್ಕಿಂತ ಮುಂಚಿತವಾಗಿ ಚುನಾವಣೆಗಳನ್ನು ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಟ್ರಂಪ್ ಗೆಲುವಿನ ಬೆನ್ನಲ್ಲೇ ಬೈಡೆನ್ ಪೌರತ್ವ ನೀತಿ ರದ್ದು : ವಲಸಿಗರಿಗೆ ಆತಂಕ

ಟ್ರಂಪ್ ಗೆಲುವಿನ ಬೆನ್ನಲ್ಲೇ ಬೈಡೆನ್ ಪೌರತ್ವ ನೀತಿ ರದ್ದು : ವಲಸಿಗರಿಗೆ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...