Homeಕರ್ನಾಟಕಕಾಂಗ್ರೆಸ್ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಮಾಡಿದ ಬಿಜೆಪಿ; ಕ್ರಮ ತೆಗೆದುಕೊಳ್ಳುತ್ತಾ ಸಿದ್ದರಾಮಯ್ಯ ಸರ್ಕಾರ?

ಕಾಂಗ್ರೆಸ್ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಮಾಡಿದ ಬಿಜೆಪಿ; ಕ್ರಮ ತೆಗೆದುಕೊಳ್ಳುತ್ತಾ ಸಿದ್ದರಾಮಯ್ಯ ಸರ್ಕಾರ?

- Advertisement -
- Advertisement -

ರಾಜ್ಯಸಭಾ ಚುನವಣಾ ಫಲಿತಾಂಶದ ನಂತರ ವಿಧಾನಸೌಧದಲ್ಲಿ ನಡೆದ ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ನಾಸಿರ್ ಹುಸೇನ್ ಪರ ಅವರ ಅಭಿಮಾನಿಗಳು ಘೋಷಣೆ ಕೂಗಿದ್ದರು. ‘ನಾಸಿರ್ ಸಾಬ್ ಝಿಂದಾಬಾದ್’ ಎಂದು ಕೂಗಿದ್ದನ್ನು, ಕೆಲ ಗೋದಿ ಮೀಡಿಯಾಗಳು ಮತ್ತು ಬಿಜೆಪಿಗರು ‘ಪಾಕಿಸ್ತಾನ್ ಝಿಂದಾಬಾದ್..’ ಎಂದು ಅಪಪ್ರಚಾರ ಮಾಡಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ಸುಳ್ಳು ಹರಡಿದ್ದೂ ಅಲ್ಲದೆ, ‘ಭಾರತದಲ್ಲಿ ಪಾ”ಕೈ”ಸ್ತಾನವನ್ನು ಬೆಂಬಲಿಸುವವರ “ಕೈ”ಗಳನ್ನು ಹೆಡೆಮುರಿ ಕಟ್ಟಿ’ ಎಂದು ಎಕ್ಸ್‌ನಲ್ಲಿ ಕಾಂಗ್ರೆಸ್ ಪಕ್ಷದ ಚಿನ್ಹೆಯನ್ನು ವಿಕೃತವಾಗಿ ಎಡಿಟ್ ಮಾಡಿ ಪೋಸ್ಟ್‌ ಮಾಡಿದೆ.

ಈ ಪೋಸ್ಟ್‌ ಡಿಲೀಟ್ ಮಾಡುವಂತೆ ಕಾಂಗ್ರೆಸ್‌ ಕೊಟ್ಟಿರುವ ಎಚ್ಚರಿಕೆಗೆ ಬಿಜೆಪಿ ಸೊಪ್ಪು ಹಾಕಿಲ್ಲ, ‘ಅಯೋಗ್ಯ ಬಿಜೆಪಿ ಈ ಅವಹೇಳನಕಾರಿ ಪೋಸ್ಟ್ ಡಿಲೀಟ್ ಮಾಡದಿದ್ದರೆ ಕಾಂಗ್ರೆಸ್ ಪಕ್ಷ ಕಠಿಣ ಕಾನೂನು ಕ್ರಮ ಜರುಗಿಸುವುದು ನಿಶ್ಚಿತ’ ಎಂದು ಕರ್ನಾಟಕ ಕಾಂಗ್ರೆಸ್‌ ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆ ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ‘ನೀವು ದೂರು ದಾಖಲಿಸುವುದು ಪಾಕಿಸ್ಥಾನದಲ್ಲೋ ಅಥವಾ ಭಾರತದಲ್ಲೋ?’ ಎಂದು ಹುಂಬತನ ತೋರಿದೆ.

ಕಾಂಗ್ರೆಸ್‌ ಪಕ್ಷವನ್ನು ತೀವ್ರವಾಗಿ ಟೀಕಿಸಿರುವ ಬಿಜೆಪಿ, ‘ಹೇಡಿ ರಣಹೇಡಿ ಕಾಂಗ್ರೆಸ್ ಸರ್ಕಾರ! ಪಾಕಿಸ್ಥಾನ ಜಿಂದಾಬಾದ್‌ ಎಂದು ವಿಧಾನಸೌಧದಲ್ಲೇ ಘೋಷಣೆ ಕೂಗಿದ ದೇಶ ದ್ರೋಹಿಗಳ ಹೆಡೆಮುರಿ ಕಟ್ಟುವುದು ಬಿಟ್ಟು ಅವರನ್ನು ರಕ್ಷಣೆ ಮಾಡುತ್ತಿದೆ ಮಜಾವಾದಿ ಸಿದ್ದರಾಮಯ್ಯ ಸರ್ಕಾರ. ತಗಡು ಸರ್ಕಾರದ ಬೇಜವಾಬ್ದಾರಿ, ನಿರ್ಲಕ್ಷ್ಯ, ಓಲೈಕೆ, ದೇಶ ದ್ರೋಹಿಗಳ ರಕ್ಷಣೆ ಮಾಡುತ್ತಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರೆ, ತುಘಲಕ್‌ ಸರ್ಕಾರ ಲಾಠಿ ಚಾರ್ಜ್‌ ಮಾಡಿ ಹತ್ತಿಕ್ಕುವ ಕೆಲಸ ಮಾಡಿದೆ. ದೇಶ ದ್ರೋಹಿಗಳಿಗೆ ಬಿರಿಯಾನಿ ಹಾಕಿ ದೇಶ ಪ್ರೇಮಿಗಳಿಗೆ ಲಾಠಿ ಏಟು ಕೊಡುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ! ಸರ್ಕಾರ ಇದಕ್ಕೆ ಪ್ರತಿಫಲ ಅನುಭವಿಸುವುದು ನಿಶ್ಚಿತ’ ಎಂದು ಅವಹೇಳನಕಾರಿಯಾಗಿ ಮಾತನಾಡಿದೆ.

‘ಘಟನೆ ನಡೆದ ಸ್ಥಳದಲ್ಲಿ ಹಾಜರಿದ್ದ ಹಲವು ಪತ್ರಕರ್ತ ಮಿತ್ರರು ಅಲ್ಲಿ ನಡೆದ ಸತ್ಯವನ್ನು ಹೊರಹಾಕಿದ್ದಾರೆ, ಅಲ್ಲಿ ನಸೀರ್ ಸಾಬ್ ಜಿಂದಾಬಾದ್ ಎಂದಿದ್ದಾರೆಯೇ ಹೊರತು ಪಾಕಿಸ್ತಾನ್ ಜಿಂದಾಬಾದ್ ಎಂದಿಲ್ಲ ಎಂಬ ಸತ್ಯವನ್ನು ಪ್ರತ್ಯಕ್ಷದರ್ಶಿಯಾಗಿ ಜಗತ್ತಿಗೆ ತಿಳಿಸಿದ್ದಾರೆ. ಟೂಲ್ ಕಿಟ್ ಬಿಜೆಪಿ ಈ ಪತ್ರಕರ್ತರ ಮಾತುಗಳಿಗೆ ಕಣ್ಣು ಕಿವಿ ಮುಚ್ಚಿಕೊಂಡಿರುವುದೇಕೆ’ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

‘ಬಿಜೆಪಿಗೆ ಸದಾ ಪಾಕಿಸ್ತಾನದ ಪ್ರೀತಿ, ಪ್ರೇಮ ಉಕ್ಕಿ ಹರಿಯುತ್ತದೆ, ಸದಾ ಪಾಕಿಸ್ತಾನದ ಜಪ ಮಾಡುತ್ತಿರುತ್ತದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಇಂದು ನಸೀರ್ ಸಾಬ್ ಜಿಂದಾಬಾದ್ ಎಂದಿದ್ದನ್ನು ತಿರುಚಿ ಬೊಬ್ಬೆ ಹೊಡೆಯುತ್ತಿರುವ ಬಿಜೆಪಿ ತನ್ನ ಆಡಳಿತದ ಅವಧಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದರು, ಅವರನ್ನು ಗಲ್ಲಿಗೆ ಹಾಕಿಲ್ಲವೇಕೆ? ಅವರ ಮೇಲೆ ಪ್ರಕರಣ ದಾಖಲಿಸಿಲ್ಲ ಏಕೆ? ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿಂದು ಬಂದವರನ್ನು ಏಕಮೇವ ನಾಯಕನೆಂದು ಕೊಂಡಾಡುವ ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ’ ಎಂದು ಕಾಂಗ್ರೆಸ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳ ಮುಂದೆ ಹೇಳಿಕೆ ಕೊಡುವುದನ್ನು ಬಿಟ್ಟು, ‘ಪಾಕಿಸ್ತಾನ ಝಿಂದಾಬಾದ್..’ ವಿಚಾರದಲ್ಲಿ ಸುಳ್ಳು ಹರಡುತ್ತಿರುವವರ ವಿರುದ್ಧ ಕಾಂಗ್ರೆಸ್‌ ಈವರೆಗೆ ಕ್ರಮ ತೆಗೆದುಕೊಂಡಿಲ್ಲ. ಹಲವು ಮಾಧ್ಯಮಗಳು ಫ್ಯಾಕ್ಟ್‌ ಚೆಕ್ ಮಾಡಿದ್ದು, ಪ್ರತ್ಯಕ್ಷದರ್ಶಿಗಳು ಪಾಕ್ ಪರ ಘೋಷಣೆ ಕೂಗಿಲ್ಲ ಎಂದು ಹೇಳುತ್ತಿದ್ದು, ಈ ವಿಚಾರದಲ್ಲಿ ಹಾದಿ ತಪ್ಪಿಸುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಸರ್ಕಾರ ಮೀನಾಮೇಷ ಎಣಿಸುತ್ತಿದೆ.

ಇದನ್ನೂ ಓದಿ; ‘ಮಾನವತಾವಾದಿ’ ಸಂವಿಧಾನವನ್ನು ‘ಮನುವಾದಿ’ ಮಾಡಲು ಹೊರಟಿದ್ದಾರೆ: ಪ್ರೊ. ನರೇಂದ್ರ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...