Homeಕರ್ನಾಟಕಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್‌‌ ಮಾಡಿದ್ದ ಬಿಜೆಪಿ: ಟ್ವೀಟ್‌ ರದ್ದು ಮಾಡಿದ ಟ್ವಿಟರ್‌‌

ಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್‌‌ ಮಾಡಿದ್ದ ಬಿಜೆಪಿ: ಟ್ವೀಟ್‌ ರದ್ದು ಮಾಡಿದ ಟ್ವಿಟರ್‌‌

ಹಿಜಾಬ್‌ ಹಕ್ಕಿಗಾಗಿ ಹೋರಾಡುತ್ತಿರುವ ಉಡುಪಿ ಹೆಣ್ಣುಮಕ್ಕಳ ವೈಯಕ್ತಿಕ ವಿವರಗಳನ್ನು ಬಿಜೆಪಿ ನಾಯಕರು ಟ್ವಿಟರ್‌‌ನಲ್ಲಿ ಹಂಚಿಕೊಂಡಿದ್ದರು.

- Advertisement -
- Advertisement -

ಹಿಜಾಬ್‌ಗಾಗಿ ಹೋರಾಡುತ್ತಿರುವ ಉಡುಪಿ ಹೆಣ್ಣುಮಕ್ಕಳ ವೈಯಕ್ತಿಕ ವಿವರಗಳನ್ನು ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ ಟ್ವಿಟರ್‌ ಖಾತೆಯ ಟ್ವೀಟ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಅವರ ಟ್ವೀಟ್‌ಅನ್ನು ಟ್ವಿಟರ್‌ ಸಂಸ್ಥೆ ರದ್ದು ಮಾಡಿದೆ.

ಟ್ವಿಟರ್‌ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಗುರುತಿಸಿರುವ ಟ್ವಿಟರ್‌ ಸಂಸ್ಥೆಯು, ಟ್ವೀಟ್‌ಗಳನ್ನು ತೆಗೆದುಹಾಕಿದೆ.

ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ನೆಪದಲ್ಲಿ, ವಿದ್ಯಾರ್ಥಿನಿಯರ ವಿಳಾಸ, ವಯಸ್ಸು, ತಂದೆತಾಯಿಯ ಹೆಸರು ಇತ್ಯಾದಿ ವಿವರಗಳನ್ನು ಪೋಸ್ಟ್‌ ಮಾಡಲಾಗಿತ್ತು.

“ಅಪ್ರಾಪ್ತ ಹೆಣ್ಣುಮಕ್ಕಳ ವಿವರಗಳನ್ನು ಹಂಚಿಕೊಳ್ಳುವುದು ಟ್ವಿಟರ್‌ ಪಾಲಿಸಿಗೆ ವಿರುದ್ಧವೇ?” ಎಂದು ಆಲ್ಟ್‌ ನ್ಯೂಸ್‌‌ನ ಸಹಸಂಸ್ಥಾಪಕರಾದ, ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೈರ್‌ ಪ್ರಶ್ನಿಸಿದ್ದರು. ಈ ಸಂಬಂಧ ‘ನಾನುಗೌರಿ.ಕಾಂ’ ಕೂಡ ವರದಿ ಮಾಡಿತ್ತು. (ಬಿಜೆಪಿ ಟ್ವೀಟ್‌ನ ಆರ್ಕೈವ್‌ ಲಿಂಕ್‌ ಇಲ್ಲಿದೆ).

ಇದನ್ನೂ ಓದಿರಿ: ಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

ಉಡುಪಿ ಬಾಲಕಿರು ವಿದ್ಯಾರ್ಥಿನಿಯರ ದಾಖಲಾತಿ ವಿವರಗಳನ್ನು ಕಾಲೇಜು ಸೋರಿಕೆ ಮಾಡಿದೆ ಎಂದು ‘ದಿ ಕ್ವಿಂಟ್’ ಜಾಲತಾಣ ಈ ಹಿಂದೆ ವರದಿ ಮಾಡಿತ್ತು. ಈ ಕುರಿತು ಕಾಲೇಜು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಮಾಧ್ಯಮಗಳೊಂದಿಗೆ ಮಾತನಾಡಿದ್ದ ವಿದ್ಯಾರ್ಥಿನಿಯರು ತಾವು ಸ್ವೀಕರಿಸುತ್ತಿರುವ ಥ್ರೆಟ್‌ ಕಾಲ್‌ಗಳಿಂದ ಭಯಗೊಂಡಿರುವುದಾಗಿ ಹೇಳಿದ್ದರು.

ಇಲ್ಲಿನ ಕಾಲೇಜು ಅಭಿವೃದ್ಧಿ ಸಮಿತಿಗೆ ಸ್ಥಳೀಯ ಶಾಸಕ ರಘುಪತಿ ಭಟ್ ಅಧ್ಯಕ್ಷರಾಗಿದ್ದಾರೆ. ಆದರೆ ಖಾಸಗಿ ವಿವರಗಳು ಹೇಗೆ ಸೋರಿಕೆಯಾದವು ಎಂಬ ಮಾಹಿತಿ ಇರಲಿಲ್ಲ. ಆದರೆ ಬಿಜೆಪಿಯವರು ಟ್ವಿಟರ್‌ ಖಾತೆಯ ಮೂಲಕ ಖಾಸಗಿ ವಿವರಗಳನ್ನು ಬಹಿರಂಗಗೊಳಿಸಿದ್ದರು.

 

“ವಿಚಾರಣೆ ಮುಂದೂಡುವಂತೆ ಮಧ್ಯಂತರ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಲ್ಲಿ ನಾಲ್ವರು ಅಪ್ರಾಪ್ತರು. ಈ ಅಪ್ರಾಪ್ತ ವಿದ್ಯಾರ್ಥಿನಿಯರು ಹಿಜಾಬ್ ವಿವಾದವನ್ನು ಪಂಚರಾಜ್ಯಗಳ ಚುನಾವಣೆಗೆ ಥಳುಕು ಹಾಕುತ್ತಿದ್ದಾರೆ ಎಂದರೆ ಅರ್ಥವೇನು? ಈ ವಿದ್ಯಾರ್ಥಿನಿಯರು ಬೇರೆಯವರ ತಾಳಕ್ಕೆ ಕುಣಿಯುವ ಗೊಂಬೆಗಳು ಎಂದು ಅರ್ಥವಲ್ಲವೇ?” ಎಂದು ಪೋಸ್ಟ್‌ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ವಿದ್ಯಾರ್ಥಿನಿಯರ ವಿಳಾಸಗಳನ್ನು ಒಳಗೊಂಡ ಕೋರ್ಟ್ ಪ್ರತಿಯನ್ನು ಹಂಚಿಕೊಂಡಿದ್ದರು. ಇದೇ ರೀತಿಯಲ್ಲಿಯೇ ‘ಬಿಜೆಪಿ ಕರ್ನಾಟಕ’ ಟ್ವಿಟರ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿತ್ತು. ಈ ಎರಡು ಟ್ವೀಟ್‌ಗಳನ್ನು ರದ್ದು ಟ್ವಿಟರ್‌ ಸಂಸ್ಥೆ ಮಾಡಿದೆ.

 

ಹೀಗೆ ಅಪ್ರಾಪ್ತ ಮಕ್ಕಳ ಖಾಸಗಿ ವಿವರಗಳನ್ನು ಹಂಚಿಕೊಳ್ಳುವುದು ಕಾನೂನಿಗೆ ವಿರುದ್ಧ. ಈ ಸಂಬಂಧ ಮಕ್ಕಳ ಹಕ್ಕುಗಳ ತಜ್ಞರು ‘ನಾನುಗೌರಿ.ಕಾಂ’ನೊಂದಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವ ವಿರುದ್ಧ ಕ್ರಮ ಜರುಗಿಸುವುದಾಗಿ ಮಕ್ಕಳ ಹಕ್ಕುಗಳ ಆಯೋಗಯೂ ಎಚ್ಚರಿಸಿದೆ.

ಈ ಹಿಂದೆ ವಿದ್ಯಾರ್ಥಿನಿಯರ ವಿವರಗಳು ಸೋರಿಕೆಯಾಗಿವೆ ಎಂದು ವರದಿಯಾಗಿತ್ತು. ದಿ ಕ್ವಿಂಟ್‌ನೊಂದಿಗೆ ಮಾತನಾಡಿದ್ದ ವಿದ್ಯಾರ್ಥಿನಿಯರು, “ಅಪರಿಚಿತ ನಂಬರ್‌‌ಗಳಿಂದ ಕರೆಗಳು ಬರುತ್ತಿವೆ. ಕರೆಗಳನ್ನು ಸ್ವೀಕರಿಸದಂತೆ ತಿಳಿಸಿದ್ದೇನೆ. ಗೌಪ್ಯ ವಿವರಗಳು ಸಾರ್ವಜನಿಕರಿಗೆ ಹೇಗೆ ತಲುಪಿದವು ಎಂಬುದನ್ನು ವಿವರಿಸಬೇಕೆಂದು ಕಾಲೇಜು ಆಡಳಿತವನ್ನು ಒತ್ತಾಯಿಸಿದ್ದೇವೆ” ಎಂದು ವಿದ್ಯಾರ್ಥಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದರು.


ಇದನ್ನೂ ಓದಿರಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣಾ ಬಾಂಡ್‌ ಹಗರಣ: ಸುಪ್ರೀಂ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆಗೆ ಮನವಿ

0
ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪ್ರೇರಿತ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಶಂಕಿತ ಹಗರಣದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು...