Homeಮುಖಪುಟಭಾರತೀಯರನ್ನು ಸ್ಥಳಾಂತರಿಸುವಲ್ಲೂ ಪ್ರಚಾರ ಪಡೆಯುತ್ತಿರುವ ಬಿಜೆಪಿ; ಪ್ರಿಯಾಂಕ್ ಖರ್ಗೆ ತಿರುಗೇಟು

ಭಾರತೀಯರನ್ನು ಸ್ಥಳಾಂತರಿಸುವಲ್ಲೂ ಪ್ರಚಾರ ಪಡೆಯುತ್ತಿರುವ ಬಿಜೆಪಿ; ಪ್ರಿಯಾಂಕ್ ಖರ್ಗೆ ತಿರುಗೇಟು

- Advertisement -
- Advertisement -

ಉಕ್ರೇನ್‌ನಲ್ಲಿ ಸಿಲುಕಿರುವವ ಭಾರತೀಯರನ್ನು ಸ್ಥಳಾಂತರಿಸುತ್ತಿರುವುದನ್ನೂ ಬಿಜೆಪಿ ತನ್ನ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದಾರೆ.

ವಾಪಸ್‌ ಕರೆತರುವ ವಿಚಾರದಲ್ಲಿ ಬಿಜೆಪಿ ಸಚಿವರು ಪ್ರಚಾರ ಪಡೆಯುತ್ತಿರುವುದು ಅತ್ಯಂತ ಅವಮಾನಕರ ಹಾಗೂ ಅಸಹ್ಯಕರ ಸಂಗತಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಡಾ.ಮನಮೋಹನ್‌ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಯಾವುದೇ ಗಡಿಬಿಡಿ, ಪ್ರಚಾರ ಇಲ್ಲದೆ ಲಿಬಿಯಾದ ಯುದ್ಧ ಭೂಮಿಯಿಂದ 16,000 ಭಾರತೀಯರನ್ನು ಸ್ಥಳಾಂತರಿಸಿದ್ದರು. ಇದು ಒಂದು ಸರ್ಕಾರದ ಬದ್ಧತೆಯೇ ಹೊರತು ಉಪಕಾರವೇನಲ್ಲ” ಎಂದು ತಿಳಿಸಿದ್ದಾರೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಜ್ಯೋತಿರಾದಿತ್ಯ ಸಿಂಧ್ಯಾ ಅವರು ಟ್ವೀಟ್ ಮಾಡಿರುವ ವಿಡಿಯೊವನ್ನು ಹಂಚಿಕೊಂಡಿರುವ ಪ್ರಿಯಾಂಕ್, ಸರ್ಕಾರದ ವರ್ತನೆಯನ್ನು ಖಂಡಿಸಿದ್ದಾರೆ.

ಉಕ್ರೇನ್‌ನಿಂದ ವಾಪಸ್‌ ಭಾರತಕ್ಕೆ ಮರಳಿದ 250 ವಿದ್ಯಾರ್ಥಿಗಳಿಗೆ ವಿದೇಶಾಂಗ ವ್ಯವಹಾರಗಳು ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಮುರುಳಿಧರನ್‌ ಅವರೊಂದಿಗೆ ಜ್ಯೋತಿರಾದಿತ್ಯ ಸಿಂಧ್ಯಾ ಸ್ವಾಗತ ಕೋರುತ್ತಿರುವ ವಿಡಿಯೊವನ್ನು ಪ್ರಿಯಾಂಕ್‌ ಹಂಚಿಕೊಂಡಿದ್ದಾರೆ.

“ಎಲ್ಲರಿಗೂ ಸ್ವಾಗತ. ಸುರಕ್ಷಿತವಾಗಿ ನೀವೆಲ್ಲ ಮಾತೃಭೂಮಿಗೆ ಹಿಂತಿರುಗಿದ್ದೀರಿ. ಪ್ರಧಾನಿಯವರ ಪರವಾಗಿ ನಾವು ಇಲ್ಲಿದ್ದೇವೆ. ಪ್ರಧಾನಿ ನರೇಂದ್ರಮೋದಿಯವರು ನಿಮ್ಮೊಂದಿಗೆ ಇರುತ್ತಾರೆ. 130 ಕೋಟಿ ಭಾರತೀಯರು ನಿಮ್ಮೊಂದಿಗೆ ಇರುತ್ತಾರೆ. ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಕರೆತರುತ್ತೇವೆ ಎಂಬ ಸಂದೇಶವನ್ನು ನೀವು ಎಲ್ಲರಿಗೂ ನೀಡಿ” ಎಂದು ಸಿಂಧ್ಯಾ ಹೇಳಿರುವುದನ್ನು ಇಲ್ಲಿ ಕಾಣಬಹುದು.

“ಭಾರತೀಯರನ್ನು ಸುರಕ್ಷಿತವಾಗಿ ಕರೆತರುವುದು ಸರ್ಕಾರದ ಕರ್ತವ್ಯ. ಅದರಲ್ಲಿಯೂ ಪ್ರಚಾರ ಪಡೆಯುವುದು ಅಸಹ್ಯಕರ ಸಂಗತಿ” ಎಂದು ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

ಸಿಂಧ್ಯಾ ಪೋಸ್ಟ್‌ಗೆ ‘ಐ ಸಪೋರ್ಟ್ ರಾಹುಲ್‌ಗಾಂಧಿ’ ಟ್ವಿಟರ್‌ ಖಾತೆಯು ಪ್ರತಿಕ್ರಿಯೆ ನೀಡಿದ್ದು, ರಾಹುಲ್‌ ಗಾಂಧಿಯವರ ಟ್ವೀಟ್‌ ಲಗತ್ತಿಸಲಾಗಿದೆ. ಉಕ್ರೇನ್‌ನಲ್ಲಿರುವ ಪರಿಸ್ಥಿತಿಯನ್ನು ಕಂಡು ಭಾರತೀಯ ಪೋಷಕರು ಆತಂಕದಲ್ಲಿದ್ದಾರೆ ಎಂದು ರಾಹುಲ್‌ ಟ್ವೀಟ್ ಮಾಡಿರುವುದನ್ನು ಸಿಂಧ್ಯಾ ಅವರ ಗಮನಕ್ಕೆ ತರಲಾಗಿದೆ. “ಗ್ರೌಂಡ್‌ ರಿಯಾಲಿಟಿ ಇದು. ಪ್ರಚಾರವನ್ನು ನಿಲ್ಲಿಸಿ” ಎಂದು ಆಗ್ರಹಿಸಲಾಗಿದೆ.

ಸಚಿವರ ವರ್ತನೆಗೆ ಹಲವರು ವಿರೋಧ ವ್ಯಕ್ತಪಡಿಸಿದ್ದು, ಉಕ್ರೇನ್‌ನಲ್ಲಿ ಸಿಲುಕಿರುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳ ಸ್ಥಿತಿ ಕಂಡು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರ ಅನುಸರಿಸುತ್ತಿರುವ ಪ್ರಚಾರದ ನೀತಿಯನ್ನು ಖಂಡಿಸಿದ್ದಾರೆ.


ಇದನ್ನೂ ಓದಿರಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...