Homeಮುಖಪುಟಬಿಜೆಪಿ ಸಂವಿಧಾನದ ಬದಲಾವಣೆಗೆ ಪ್ರಯತ್ನಿಸುತ್ತಿದೆ: ಅಖಿಲೇಶ್ ಯಾದವ್

ಬಿಜೆಪಿ ಸಂವಿಧಾನದ ಬದಲಾವಣೆಗೆ ಪ್ರಯತ್ನಿಸುತ್ತಿದೆ: ಅಖಿಲೇಶ್ ಯಾದವ್

- Advertisement -
- Advertisement -

ಬಿಜೆಪಿ ಪ್ರಜಾಪ್ರಭುತ್ವಕ್ಕೆ ಬೆದರಿಕೆಯಾಗಿದೆ ಮತ್ತು ದೇಶದ ಸಂವಿಧಾನವನ್ನು ಬದಲಾಯಿಸಲು ತಯಾರಿ ನಡೆಸುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಸಮಾಜವಾದಿ ಬಾಬಾ ಸಾಹೇಬ್ ವಾಹಿನಿ ಮತ್ತು ಸಮಾಜವಾದಿ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಪದಾಧಿಕಾರಿಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್‌, ಜಾತಿ ಗಣತಿ ನಡೆಸದೆ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಹಿಂದುಳಿದ ಮತ್ತು ದಲಿತರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಹೊರಗುತ್ತಿಗೆ ಮೂಲಕ ಉದ್ಯೋಗಗಳ ಅವಕಾಶವನ್ನು ತೆಗೆದುಹಾಕುತ್ತಿದೆ ಮತ್ತು ಜಾತಿ ಗಣತಿಯನ್ನು ಬಿಜೆಪಿ ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಜಾತಿ ಗಣತಿ ನಡೆಸುವುದರಿಂದ ಮಾತ್ರ ಪ್ರತಿಯೊಬ್ಬರೂ ತಮ್ಮ ಹಕ್ಕು ಮತ್ತು ಗೌರವವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದ ಅಖಿಲೇಶ್‌ ಯಾದವ್‌, ಬಿಜೆಪಿ ಪ್ರಜಾಪ್ರಭುತ್ವಕ್ಕೆ ಅಪಾಯ ತಂದೊಡ್ಡಿದೆ. ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಬದಲಾಯಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಸೋಲಿಸಲಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಗಳ ಮೂಲಕ ಹೆಚ್ಚು ದಾಳಿಗಳನ್ನು ನಡೆಸುತ್ತಿದೆ ಇದರಿಂದ ಜನಸಾಮಾನ್ಯರು ಕೋಪಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಣದುಬ್ಬರ ಮತ್ತು ನಿರುದ್ಯೋಗವು ಗಣನೀಯವಾಗಿ ಹೆಚ್ಚಳವಾಗಿದೆ. ಈಗ ಅನ್ಯಾಯವೂ ಉತ್ತುಂಗದಲ್ಲಿದೆ. ದೇಶದ 100 ಕೋಟಿಗೂ ಹೆಚ್ಚು ಜನರು ಬಿಜೆಪಿ ವಿರುದ್ಧ ಕೋಪಗೊಂಡಿದ್ದಾರೆ ಎಂದು ಅಖಿಲೇಶ್ ಯಾದವ್‌ ಹೇಳಿದ್ದಾರೆ.

ಇದನ್ನು ಓದಿ: ಅಪಘಾತದಲ್ಲಿ ನಿಧನ ಹೊಂದಿದ ವ್ಯಕ್ತಿಯ ಮೃತದೇಹವನ್ನು ನದಿಗೆ ಎಸೆದ ಪೊಲೀಸರು: ವಿಡಿಯೋ ವೈರಲ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...